Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ...

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವಿಗೆ ಸೂಚನೆ : ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ29 May 2025 12:59 PM IST
share
ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವಿಗೆ ಸೂಚನೆ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಯಲಹಂಕದ ಮಾನ್ಯತಾ ಟೆಕ್ ಪಾರ್ಕ್ ಬಳಿ ಮಳೆ ಪ್ರವಾಹಕ್ಕೆ ಕಾರಣವಾದ ರಾಜಕಾಲುವೆ ಹಾಗೂ ನಾಲೆಗಳನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪರಿಶೀಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

"ನಾನು ಹಾಗೂ ಮುಖ್ಯಮಂತ್ರಿಗಳು ಈಗಾಗಲೇ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೇವೆ. ಇದು ಬಹಳ ಮುಖ್ಯವಾದ ಜಂಕ್ಷನ್. ಇಲ್ಲಿಂದ ಸಮಸ್ಯೆ ಆರಂಭವಾಗಿ ನಂತರ ಉಳಿದ ಪ್ರದೇಶಗಳಲ್ಲಿ ಸಮಸ್ಯೆಯಾಗುತ್ತಿದೆ. ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಅಧಿಕಾರಿಗಳಿಗೂ ಸಹಕಾರ ನೀಡುತ್ತಿರಲಿಲ್ಲ. ಹೀಗಾಗಿ ಸಮಸ್ಯೆಗೆ ಕಾರಣವಾಗಿರುವ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕಟ್ಟಡ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು.

ಶಾಶ್ವತ ಪರಿಹಾರ ನೀಡಲಾಗುವುದು :

"ನಮಗೆ ಯಾರ ಆಸ್ತಿಯನ್ನು ನಷ್ಟ ಮಾಡಲು ಇಷ್ಟವಿಲ್ಲ. ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ. ನೀರು ಸರಾಗವಾಗಿ ಹರಿಯಬೇಕು. ಹೀಗಾಗಿ ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕಾಮಗಾರಿ ಮುಂದುವರಿಸಲು ನನ್ನ ಮುಂದೆ ಎಲ್ಲರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯುವುದು ಮುಖ್ಯ" ಎಂದು ತಿಳಿಸಿದರು.

ಆಯುಕ್ತರಿಗೆ ಅಧಿಕಾರ:

"ಮಳೆ ನೀರು ಸರಾಗವಾಗಿ ಹರಿಯುವುದು ಇಲ್ಲಿ ಮುಖ್ಯವೇ ಹೊರತು ಇನ್ಯಾರೂ ಅಲ್ಲ. ನಾವು ಯಾವುದೇ ಕಟ್ಟಡಗಳಿಗೆ ಅಡಚಣೆ ಮಾಡಲು ಬಯಸುವುದಿಲ್ಲ. ನಾವು ಬೆಂಗಳೂರಿನ ಘನತೆ ಹಾಳಾಗಲು ಬಿಡುವುದಿಲ್ಲ. ಹೀಗಾಗಿ ಈ ಭಾಗದ ಭೂಮಾಲೀಕರಿಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದೇವೆ. ತಾಂತ್ರಿಕ ಕಾರಣಗಳಿಂದಾಗಿ ತಪ್ಪಾಗಿದ್ದರೆ ನಾವು ಅದಕ್ಕೆ ಪರಿಹಾರ ನೀಡುತ್ತೇವೆ. ನಮಗೆ ಈ ವಿಚಾರವಾಗಿ ಶಾಶ್ವತ ಪರಿಹಾರ ಬೇಕಾಗಿದೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದು, ನಾವು ನಮ್ಮ ಕೆಲಸ ಮುಂದುವರಿಸುತ್ತೇವೆ. ನಮ್ಮ ಪಾಲಿಕೆ ಆಯುಕ್ತರು ಹಾಗೂ ಕಾರ್ಯದರ್ಶಿಗಳಿಗೆ ಈ ವಿಚಾರದಲ್ಲಿ ಇರುವ ಅಡಚಣೆಗಳನ್ನು ತೆರವುಗೊಳಿಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ" ಎಂದು ತಿಳಿಸಿದರು.

ಕಸದ ಸೆಸ್ ಕಡಿಮೆ ಮಾಡಬೇಕು ಎಂಬ ಬಿಜೆಪಿ ಆಗ್ರಹದ ಬಗ್ಗೆ ಕೇಳಿದಾಗ, "ಅವರ ಕಾಲದಲ್ಲಿ ತೆಗೆದುಕೊಂಡ ತೀರ್ಮಾನವನ್ನು ನಾವು ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಏನು ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಪರಿಶೀಲಿಸಿ ನಂತರ ಅವರೊಂದಿಗೆ ಮಾತನಾಡುತ್ತೇನೆ. ಅವರ ಅಭಿಪ್ರಾಯಕ್ಕೂ ಗೌರವ ನೀಡುತ್ತೇನೆ" ಎಂದು ತಿಳಿಸಿದರು.

ನೀರಾವರಿ ಇಲಾಖೆಯಲ್ಲಿ ಹೆಚ್ಚು ಇಂಜಿನಿಯರ್ ಗಳಿಲ್ಲ:

ಜಲಸಂಪನ್ಮೂಲ ಇಲಾಖೆ ಇಂಜಿನಿಯರ್ ಗಳ ವರ್ಗಾವಣೆ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದ ಬಗ್ಗೆ ಕೇಳಿದಾಗ "ಜಲಸಂಪನ್ಮೂಲ ಇಲಾಖೆಯಲ್ಲಿ ಹೆಚ್ಚು ಇಂಜಿನಿಯರ್ ಗಳಿಲ್ಲ. ನಮಗೆ ತುರ್ತಾಗಿ ಇಂಜಿನಿಯರ್ ಗಳು ಬೇಕು. ಹೀಗಾಗಿ ನಮ್ಮ ಇಲಾಖೆಯಿಂದ ಯಾರನ್ನೂ ಬೇರೆಡೆಗೆ ಕಳಿಸಬೇಡಿ ಎಂದು ಪತ್ರ ಬರೆದಿದ್ದೇನೆ. ನಮ್ಮ ಇಲಾಖೆಗೆ ಬಂದು ಬಡ್ತಿ ಪಡೆದು ನಂತರ ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರ ಇಲಾಖೆಗಳಿಗೆ ವರ್ಗಾವಣೆ ಪಡೆಯುತ್ತಾರೆ" ಎಂದು ಸ್ಪಷ್ಟನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X