Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರಪೀಡಿತ ತಾಲೂಕುಗಳ ಸಂಖ್ಯೆ 200...

ಬರಪೀಡಿತ ತಾಲೂಕುಗಳ ಸಂಖ್ಯೆ 200 ಮೀರಬಹುದು : ಡಿಸಿಎಂ ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ9 Sept 2026 8:39 PM IST
share
ಬರಪೀಡಿತ ತಾಲೂಕುಗಳ ಸಂಖ್ಯೆ 200 ಮೀರಬಹುದು : ಡಿಸಿಎಂ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸರಕಾರ ಗಂಭೀರವಾಗಿದೆ. ಈಗಾಗಲೆ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೇವೆ. ಇನ್ನೂ 42 ತಾಲೂಕುಗಳಲ್ಲಿ ಅಧ್ಯಯನ ನಡೆಯುತ್ತಿದೆ. ಬರಪೀಡಿತ ತಾಲೂಕುಗಳ ಸಂಖ್ಯೆ 200ಕ್ಕೂ ಮೀರಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 42 ತಾಲೂಕುಗಳಲ್ಲಿ ಅಧ್ಯಯನ ನಡೆಯುತ್ತಿದೆ. ನಿನ್ನೆಯವರೆಗೆ 24 ತಾಲೂಕುಗಳ ಅಧ್ಯಯನ ಪ್ರಕ್ರಿಯೆ ಮುಗಿದಿದ್ದು, ಇನ್ನೂ 18 ತಾಲೂಕುಗಳ ಅಧ್ಯಯನ ಇಂದು ಅಥವಾ ನಾಳೆ ವೇಳೆಗೆ ಮುಗಿಯುತ್ತದೆ. ಆನಂತರ, ಬರಪೀಡಿತ ಇತರ ತಾಲೂಕುಗಳ ಹೆಸರನ್ನು ಪ್ರಕಟಿಸುತ್ತೇವೆ ಎಂದು ಹೇಳಿದರು.

ಮಳೆಗಾಲ ಅಧಿಕೃತ ಮುಗಿಯುವವರೆಗೆ ಈ ಮೌಲ್ಯಮಾಪನ ಮಾಡುತ್ತೇವೆ. ಕಳೆದ ವರ್ಷ 200ಕ್ಕೂ ಹೆಚ್ಚು ತಾಲೂಕು ಬರಪೀಡತ ಎಂದು ಘೋಷಿಸಲಾಗಿತ್ತು. ಈ ವರ್ಷ ಅದಕ್ಕಿಂತ ಹೆಚ್ಚಾಗಬಹುದು. ಕರಾವಳಿ ಬಿಟ್ಟು ಬೇರೆ ಎಲ್ಲಿಯೂ ಮಳೆಯಾಗಿಲ್ಲ. ಕೇಂದ್ರ ಸರಕಾರವು 2020ರಲ್ಲಿ ಬರಪೀಡಿತ ಪ್ರದೇಶ ಎಂದು ಘೋಷಿಸಲು ನಿಗದಿ ಮಾಡಿರುವ ಮಾನದಂಡಗಳ ಆಧಾರದ ಮೇಲೆಯೆ ನಾವು ತೀರ್ಮಾನ ಮಾಡಬೇಕಿದೆ ಎಂದು ಅವರು ಹೇಳಿದರು.

ಮಾನದಂಡಗಳನ್ನು ಸರಳೀಕರಣ ಮಾಡುವಂತೆ ನಾನು ಹಾಗೂ ಮುಖ್ಯಮಂತ್ರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದೇವೆ. ಆದರೆ, ಈವರೆಗೆ ಅವರಿಂದ ಯಾವುದೆ ಪ್ರತಿಕ್ರಿಯೆ ಬಂದಿಲ್ಲ. ಇಡೀ ರಾಜ್ಯ ಭೀಕರ ಬರಗಾಲ ಎದುರಿಸುತ್ತಿದೆ. ಕೇಂದ್ರ ಸರಕಾರಕ್ಕೆ ಇನ್ನೆರಡು ದಿನಗಳಲ್ಲಿ ಸರಕಾರದ ವತಿಯಿಂದ ಅಧಿಕೃತ ಜ್ಞಾಪನಾ ಪತ್ರವನ್ನು ಸಲ್ಲಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

101 ತಾಲೂಕಿನಲ್ಲಿ 18 ಸಾವಿರ ಕೋಟಿ ರೂ.ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ನಾವು ಎನ್‍ಡಿಆರ್‌ ಎಫ್ ಮಾರ್ಗಸೂಚಿ ಅನ್ವಯ ಪರಿಹಾರ ಬಿಡುಗಡೆಗೆ ಮನವಿ ಮಾಡುತ್ತೇವೆ. ಕಳೆದ ವರ್ಷ 39 ಸಾವಿರ ಕೋಟಿ ರೂ. ನಷ್ಟ ಆಗಿತ್ತು. ಆದರೆ, ನಮಗೆ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಕೊನೆಗೆ ನಾವು ದಿಲ್ಲಿಯಲ್ಲಿ ಪ್ರತಿಭಟನೆ ಮಾಡಿದೆವು, ಕಾನೂನು ಹೋರಾಟ ಮಾಡಿದೆವು. ಬಳಿಕ ಸುಪ್ರೀಂಕೋರ್ಟ್ ನಿರ್ದೇಶನದಂತೆ ನಮಗೆ 3500 ಕೋಟಿ ರೂ.ಕೇಂದ್ರ ಸರಕಾರ ಬಿಡುಗಡೆ ಮಾಡಿತು ಎಂದು ಅವರು ಸ್ಮರಿಸಿದರು.

ಈ ಬಾರಿ ಆ ರೀತಿ ಆಗುವುದಿಲ್ಲ. ಕೇಂದ್ರ ಸರಕಾರ ನಮ್ಮ ಬೇಡಿಕೆಗೆ ಮನ್ನಣೆ ಕೊಡುತ್ತದೆ ಎಂದು ಭಾವಿಸಿದ್ದೇನೆ. ಅಗತ್ಯವಿದ್ದರೆ ಸರ್ವ ಪಕ್ಷಗಳ ನಿಯೋಗವನ್ನು ಕೇಂದ್ರದ ಬಳಿ ತೆಗೆದುಕೊಂಡು ಹೋಗುತ್ತೇವೆ. ರೈತರ ಸಾಲ ಮನ್ನಾ ಮಾಡಿ ಎಂದು ಆಗ್ರಹಿಸುವ ಬಿಜೆಪಿ ನಾಯಕರು, ಕೇಂದ್ರದಲ್ಲಿರುವ ಅವರದೆ ಪಕ್ಷದ ಸರಕಾರಕ್ಕೆ ಮನವಿ ಮಾಡಿ, ರಾಜ್ಯಕ್ಕೆ ಅನುದಾನ ಕೊಡಿಸಲಿ ಎಂದು ಪರಮೇಶ್ವರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags

DCM G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X