Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಬರ’ ತುರ್ತು ಪರಿಹಾರ ಕೋರಿ ಕೇಂದ್ರ...

‘ಬರ’ ತುರ್ತು ಪರಿಹಾರ ಕೋರಿ ಕೇಂದ್ರ ಗೃಹ-ಕೃಷಿ ಸಚಿವರಿಗೆ ಡಿಸಿಎಂ ಜಿ.ಪರಮೇಶ್ವರ್ ಪತ್ರ

► ‘177 ತಾಲೂಕುಗಳು ಬರಪೀಡಿತ; 46,324ಕೋಟಿ ರೂ.ಬೆಳೆ ನಷ್ಟ ಅಂದಾಜು’ ► ಬರ ಪರಿಹಾರ ಮಾನದಂಡಗಳ ಪರಿಷ್ಕರಣೆ, ಕೇಂದ್ರದ ಬರ ಮೌಲ್ಯಮಾಪನ ಪ್ರಕ್ರಿಯೆ ತ್ವರಿತಗೊಳಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ1 Oct 2026 6:20 PM IST
share
‘ಬರ’ ತುರ್ತು ಪರಿಹಾರ ಕೋರಿ ಕೇಂದ್ರ ಗೃಹ-ಕೃಷಿ ಸಚಿವರಿಗೆ ಡಿಸಿಎಂ ಜಿ.ಪರಮೇಶ್ವರ್ ಪತ್ರ

ಬೆಂಗಳೂರು : ರಾಜ್ಯದ ಒಟ್ಟು 177 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದ್ದು, ಸುಮಾರು 47.09ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದು, 46,324ಕೋಟಿ ರೂ.ಗಳಷ್ಟು ಆರ್ಥಿಕ ನಷ್ಟವಾಗಿದೆ. ಹೀಗಾಗಿ ಕೇಂದ್ರ ಸರಕಾರವು ಬರ ಮೌಲ್ಯಮಾಪನ ಪ್ರಕ್ರಿಯೆ ತ್ವರಿತಗೊಳಿಸಿ, ರಾಜ್ಯಕ್ಕೆ ಅಗತ್ಯ ನೆರವು ನೀಡಬೇಕು ಎಂದು ಕೋರಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೇಂದ್ರ ಗೃಹ ಹಾಗೂ ಕೃಷಿ ಸಚಿವರಿಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ.

ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದು, ಕರ್ನಾಟಕ ರಾಜ್ಯಕ್ಕೆ ತುರ್ತು ನೆರವು ಒದಗಿಸಬೇಕು. ಅಲ್ಲದೆ, ಎಸ್‍ಡಿಆರ್‌ ಎಫ್ ಮತ್ತು ಎನ್‍ಡಿಆರ್‌ ಎಫ್ ಅಡಿಯಲ್ಲಿ ನೀಡಲಾಗುವ ನೆರವಿನ ಅಂಶಗಳು ಹಾಗೂ ಮಾನದಂಡಗಳನ್ನು, ವಿಶೇಷವಾಗಿ ರೈತರಿಗೆ ನೀಡುವ ಇನ್‍ಪುಟ್ ಸಬ್ಸಿಡಿಗೆ ಸಂಬಂಧಿಸಿದ ಮಾನದಂಡಗಳನ್ನು ಪರಿಷ್ಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಸ್ತುತ ಜಾರಿಯಲ್ಲಿರುವ ಇನ್‍ಪುಟ್ ಸಬ್ಸಿಡಿ ಮೊತ್ತವು ಇಂದಿನ ಕೃಷಿ ವೆಚ್ಚಕ್ಕೆ ಹೋಲಿಸಿದರೆ ಸಮರ್ಪಕವಾಗಿಲ್ಲ. ರೈತರು ಅನುಭವಿಸುವ ನೈಜ ನಷ್ಟದ ಅಲ್ಪಭಾಗವನ್ನಷ್ಟೇ ಇದು ಭರಿಸುತ್ತದೆ. 16ನೇ ಹಣಕಾಸು ಆಯೋಗದ ಅವಧಿ ಆರಂಭವಾಗಿರುವ ಹಿನ್ನೆಲೆಯಲ್ಲಿ, ಬಹುಕಾಲದಿಂದ ಬಾಕಿ ಇರುವ ಪರಿಹಾರ ಮಾನದಂಡಗಳ ಪರಿಷ್ಕರಣೆಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಬೇಕು ಎಂದು ಪರಮೇಶ್ವರ್ ಪತ್ರದಲ್ಲಿ ಕೋರಿದ್ದಾರೆ.

ಮೌಲ್ಯಮಾಪನ ತ್ವರಿತಗೊಳಿಸಿ: ರಾಜ್ಯದಲ್ಲಿನ ಬರದ ತೀವ್ರತೆ ಮತ್ತು ವ್ಯಾಪ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರದ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಬೆಳೆಹಾನಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ತ್ವರಿತ ಮೌಲ್ಯಮಾಪನ ಮತ್ತು ಸಮಯೋಚಿತ ಪರಿಹಾರ ಅತ್ಯಂತ ಅಗತ್ಯವಾಗಿದೆ. ಬರದ ಪರಿಣಾಮವನ್ನು ಕಡಿಮೆ ಮಾಡಲು ರಾಜ್ಯ ಸರಕಾರವು ಸಾಧ್ಯವಿರುವ ಎಲ್ಲ ನೆರವು ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಬರದ ಪ್ರಮಾಣ ಮತ್ತು ತೀವ್ರತೆಯನ್ನು ಗಮನಿಸಿದರೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಸಮನ್ವಯದಿಂದ ಕೆಲಸ ಮಾಡುವುದು ಅಗತ್ಯ. ನಮ್ಮ ರೈತರಿಗೆ ಸಮಯೋಚಿತ ಮತ್ತು ಸಮರ್ಪಕ ನೆರವು ದೊರೆಯಬೇಕು. ನೀಡಲಾಗುವ ಪರಿಹಾರವು ಅವರು ಅನುಭವಿಸಿರುವ ನಷ್ಟ ಪ್ರತಿಬಿಂಬಿಸುವಂತಿರಬೇಕು ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ರಾಜ್ಯ ಸರಕಾರ ಈಗಾಗಲೇ 101ಬರಪೀಡಿತ ತಾಲೂಕುಗಳಿಗೆ 3,705ಕೋಟಿ ರೂ.ಹಣಕಾಸು ನೆರವು ಕೋರಿ ಖಾರಿಫ್-2026 ಬರ ಪರಿಹಾರ ಕೋರಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದೆ. ಮುಂದಿನ ವೈಜ್ಞಾನಿಕ ಮೌಲ್ಯಮಾಪನದ ಬಳಿಕ ಹೆಚ್ಚುವರಿಯಾಗಿ 76 ತಾಲೂಕುಗಳನ್ನು 2ನೇ ಹಂತದಲ್ಲಿ ಬರಪೀಡಿತವೆಂದು ಘೋಷಿಸಲಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಬರ ಪೀಡಿತ ತಾಲ್ಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ಇನ್ನೂ 40ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ನಡೆಯುತ್ತಿದೆ. ನಿರಂತರ ಮೌಲ್ಯಮಾಪನದ ಆಧಾರದ ಮೇಲೆ ಮುಂಗಾರು ಅಂತ್ಯದ ವೇಳೆಗೆ ಬರಪೀಡಿತ ತಾಲೂಕುಗಳ ಸಂಖ್ಯೆ 220 ದಾಟುವ ಸಾಧ್ಯತೆ ಇದೆ.

ಹೊಸದಾಗಿ ಘೋಷಿಸಲಾದ 76 ಬರಪೀಡಿತ ತಾಲೂಕುಗಳಲ್ಲಿ ನಡೆಸಿದ ಬೆಳೆಹಾನಿ ಮೌಲ್ಯಮಾಪನದಲ್ಲಿ 26.08ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 1.49ಲಕ್ಷ ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿಯಾಗಿರುವುದು ಕಂಡುಬಂದಿದೆ. ಹಾನಿಯ ಪ್ರಮಾಣ ಶೇ.33ರಿಂದ ಶೇ.100ರವರೆಗೆ ಇದ್ದು, ಈ ಬರಪೀಡಿತ ಪ್ರದೇಶಗಳಲ್ಲಿ ಬಹುಪಾಲು ಶೇ.50ಕ್ಕಿಂತ ಹೆಚ್ಚು ಬೆಳೆಹಾನಿ ದಾಖಲಾಗಿದೆ. ತೊಗರಿ, ಮೆಕ್ಕೆಜೋಳ, ಹತ್ತಿ, ಕಬ್ಬು, ಸೋಯಾಬೀನ್ ಮತ್ತು ಹೆಸರುಕಾಳು ಸೇರಿ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

Tags

drought-hitDCM G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X