Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ...

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ

ಡಿಸಿ, ಸಿಇಒಗಳ ಜೊತೆ ಸಿಎಂ ಸಭೆ

ವಾರ್ತಾಭಾರತಿವಾರ್ತಾಭಾರತಿ31 May 2025 1:10 PM IST
share
ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ

ಬೆಂಗಳೂರು : ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗಿನ ಎರಡನೇ ದಿನ ಸಭೆಯಲ್ಲಿ ಅವರು ಮಾತನಾಡಿದರು.

ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಎಸೆಸೆಲ್ಸಿಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆಯೇ ಅಥವಾ ಇಲ್ಲವೇ ಎನ್ನುವುದನ್ನು ಪರಿಶೀಲನೆ ನಡೆಸಬೇಕು. ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ, ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ವಿಳಂಬ ಆಗಬಾರದು :

ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡುವುದರಲ್ಲಿ ವಿಳಂಬ ಆಗಬಾರದು. ಕ್ರಿಯಾ ಯೋಜನೆ ತಕ್ಷಣ ತಕ್ಷಣ ಸಿದ್ದಪಡಿಸಬೇಕು. ಹಣ ಬಿಡುಗಡೆ ಆಗಿದ್ದರೂ ಇನ್ನೂ ಶಾಲಾ ಕೊಠಡಿಗಳ ನಿರ್ಮಾಣ ಆಗದಿರುವ ಬಗ್ಗೆ ಜಿಲ್ಲಾಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು.

ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಆಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ಪೋಷಕರ ಜೊತೆ ಮಾತನಾಡಬೇಕು. ಮಕ್ಕಳು ಅರ್ಧದಲ್ಲಿಯೇ ಶಾಲೆಯನ್ನು ತೊರಯುವುದನ್ನು ತಡೆಯಲು ಏನೆಲ್ಲ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐಗಳು, ಬಿಇಒಗಳು ಶಾಲೆಗಳಿಗೆ ಭೇಟಿ ನೀಡುತ್ತಿಸದ್ದಾರೆಯೇ ಎಂಬ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಪ್ರತೀ ವರ್ಷ ಸರಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ. ಸರಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್‌, ಸೂಪು, ಹಾಸ್ಟೆಲ್‌ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ. ನಿಮ್ಮ ಪ್ರಾಯೋಗಿಕ ಅನುಭವಗಳು ಏನು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮಕ್ಕೆ ಸಿಎಂ ಸೂಚಿಸಿದರು.

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವುದನ್ನು ಗಮನದಲ್ಲಿಡಿ. ಡಿಡಿಪಿಐಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು. ಸಿಇಒಗಳು ಕಡ್ಡಾಯವಾಗಿ ಈ ಬಗ್ಗೆ ನಿಗಾ ವಹಿಸಿ ಪೋಷಕರ ಜೊತೆ ಸಭೆ ನಡೆಸಿ ಚರ್ಚಿಸಲೇಬೇಕು ಎಂದು ಸಿಎಂ ತಾಕೀತು ಮಾಡಿದರು.

ಪರೀಕ್ಷಾ ಫಲಿತಾಂಶದಲ್ಲಿ ಮತ್ತು ಮಕ್ಕಳ ದಾಖಲಾತಿಯಲ್ಲಿ ರಾಜ್ಯ ಸರಾಸರಿಗಿಂತ ಶೇಕಡಾವಾರು ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಖಡಕ್‌ ಸೂಚನೆ ನೀಡಿ ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕ ಜಿಲ್ಲೆಗಳ ಸಿಇಒಗಳು ಹೆಚ್ಚಿನ ಆಸಕ್ತಿ ಕೊಟ್ಟು ಈ ಬಗ್ಗೆ ನಿಗಾ ಇಡಬೇಕು. ಫಲಿತಾಂಶ ಕಡಿಮೆ ಇರುವುದಕ್ಕೆ ಕಾರಣಗಳು, ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ. ಪ್ರಾಮಾಣಿಕ ಪ್ರಯತ್ನ ಇದ್ದರೆ ಪ್ರಾಮಾಣಿಕ ಫಲಿತಾಂಶ ಬರುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X