Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆರಗ ಜ್ಞಾನೇಂದ್ರ ವಿರುದ್ಧ ಮಾನನಷ್ಟ...

ಆರಗ ಜ್ಞಾನೇಂದ್ರ ವಿರುದ್ಧ ಮಾನನಷ್ಟ ಮೊಕದ್ದಮೆ: ಕಿಮ್ಮನೆ ರತ್ನಾಕರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ3 Aug 2023 7:22 PM IST
share
ಆರಗ ಜ್ಞಾನೇಂದ್ರ ವಿರುದ್ಧ ಮಾನನಷ್ಟ ಮೊಕದ್ದಮೆ: ಕಿಮ್ಮನೆ ರತ್ನಾಕರ್ ಎಚ್ಚರಿಕೆ

ಬೆಂಗಳೂರು, ಆ.3: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ವರ್ ಖಂಡ್ರೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದರೆ ಸಾಲದು, ನೇರವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ನಡೆಸಿ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗೃಹ ಸಚಿವರಾಗಿ, ಎಂಪಿಎಂಸಿ ಅಧ್ಯಕ್ಷರಾಗಿ ಮತ್ತು ಅನೇಕ ಜವಾಬ್ದಾರಿಯುತ ಸ್ಥಾನಗಳನ್ನು ಆರಗ ಜ್ಞಾನೇಂದ್ರ ನಿಭಾಯಿಸಿದ್ದಾರೆ. ಇಂತಹ ವ್ಯಕ್ತಿ ಬಾಯಿ ತಪ್ಪಿನಿಂದ ಹೇಳಿದೆ, ಕಣ್ತಪ್ಪಿನಿಂದ ಹೇಳಿದೆ ಎನ್ನುವ ವಯಸ್ಸು ಅವರದಲ್ಲ ಎಂದರು.

ಬಿಜೆಪಿಯ ಯಾವುದೇ ನಾಯಕರು ಆರಗ ಜ್ಞಾನೇಂದ್ರ ಅವರ ಈ ಹೇಳಿಕೆಯನ್ನು ಏಕೆ ಖಂಡಿಸುತ್ತಿಲ್ಲ, ಅವರ ಮನಸ್ಸಿನಲ್ಲಿಯೂ ಅದೇ ಆಲೋಚನೆ ಇದೆಯೇ? ಮೋದಿಯವರು ಇದೇ ಮನಸ್ಥಿತಿ ಹೊಂದಿರುವವರೆ, ಏಕೆಂದರೆ ಅವರ ಸಂಪುಟದ ಅನೇಕ ಸದಸ್ಯರು ಈ ತರಹದ ಹೇಳಿಕೆ ನೀಡಿದಾಗಲೂ ಸುಮ್ಮನಿದ್ದರು ಎಂದು ಅವರು ಟೀಕಿಸಿದರು.

ಅನಂತಕುಮಾರ್ ಹೆಗಡೆ ‘ನಾವು ಸಂವಿಧಾನ ಬದಲಾಯಿಸಲು ಬಂದಿದ್ದೇವೆ’ ಎಂದು ನೀಡಿದ ಹೇಳಿಕೆಯಿಂದ ಹಿಡಿದು ಯತ್ನಾಳ್ ತನಕ ಬಿಜೆಪಿಯವರು ಇಂತಹ ಸಂವಿಧಾನ ವಿರೋಧಿ ಹೇಳಿಕೆ ನೀಡಿದರು ಪ್ರಧಾನಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದರು.

ನಾನು ಖರ್ಗೆಯವರ ಹೆಸರು ತೆಗೆದುಕೊಂಡಿಲ್ಲ ಎಂದು ಆರಗ ಜ್ಞಾನೇಂದ್ರ ಸುಳ್ಳು ಹೇಳಿದ್ದಾರೆ. ಈ ಬಗ್ಗೆ ಸ್ಪೀಕರ್‍ಗೆ ದೂರು ಸಲ್ಲಿಸಲಾಗುವುದು, ನ್ಯಾಯಾಲಯದ ಮೊರೆಯೂ ಹೋಗಲಾಗುವುದು. ಕುವೆಂಪು, ಯು.ಆರ್.ಅನಂತಮೂರ್ತಿ, ಗೋಪಾಲಗೌಡರು, ಬದ್ರಿನಾರಾಯಣ್ ಅವರಂತಹ ಸಂಸದೀಯ ಪಟುಗಳು ಗೆದ್ದು ಬಂದಂತಹ ಕ್ಷೇತ್ರ ಅದು. ಇಂತಹ ಕ್ಷೇತ್ರಕ್ಕೆ ಆರಗ ಜ್ಞಾನೇಂದ್ರ ಅವಮಾನ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಕಸ್ತೂರಿ ರಂಗನ್ ವಿಚಾರಕ್ಕೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯವರೆ ಒಪ್ಪಿಗೆ ನೀಡಿದ್ದಾರೆ. ನಮ್ಮ ಕಾಂಗ್ರೆಸ್ ಸರಕಾರ ಇದಕ್ಕೆ ವಿರೋಧ ಮಾಡಿತ್ತು. ತೀರ್ಥಹಳ್ಳಿಯ ಜನರನ್ನು ಮಂಗ ಮಾಡಲು ಇಲ್ಲಿ ವಿರೋಧ ಮಾಡುವುದು, ಕೇಂದ್ರದಲ್ಲಿ ಒಪ್ಪಿಗೆ ನೀಡುವ ಕಣ್ಣಾಮುಚ್ಚಲೆ ಆಡುತ್ತಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X