Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮತಾಂತರ ನಿಷೇಧ ಕಾಯ್ದೆ ರದ್ದು, 2ಬಿ...

ಮತಾಂತರ ನಿಷೇಧ ಕಾಯ್ದೆ ರದ್ದು, 2ಬಿ ಮೀಸಲಾತಿ ಮರುಸ್ಥಾಪನೆ, ಕಾಂಗ್ರೆಸ್ ಪ್ರಣಾಳಿಕೆ ಭರವಸೆ ಈಡೇರಿಸಲು ಆಗ್ರಹ: ನ.9ಕ್ಕೆ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ30 Oct 2026 3:31 PM IST
share
ಮತಾಂತರ ನಿಷೇಧ ಕಾಯ್ದೆ ರದ್ದು, 2ಬಿ ಮೀಸಲಾತಿ ಮರುಸ್ಥಾಪನೆ, ಕಾಂಗ್ರೆಸ್ ಪ್ರಣಾಳಿಕೆ ಭರವಸೆ ಈಡೇರಿಸಲು ಆಗ್ರಹ: ನ.9ಕ್ಕೆ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ

ಬೆಂಗಳೂರು : ಮುಂದಿನ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸಂವಿಧಾನ ವಿರೋಧಿ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸಬೇಕು. ದ್ವೇಷ ಭಾಷಣ ಕಾನೂನು ಮತ್ತಷ್ಟು ಬಿಗಿಗೊಳಿಸಬೇಕು ಸೇರಿದಂತೆ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿದ್ದ ಭರವಸೆಗಳನ್ನು ರಾಜ್ಯ ಸರಕಾರ ಈಡೇರಿಸಬೇಕೆಂದು ಆಗ್ರಹಿಸಿ ನ.9ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲಾಗುವುದು ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ತಿಳಿಸಿದ್ದಾರೆ.

ಶುಕ್ರವಾರ ನಗರದ ಪಾಲನಾ ಭವನದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-2022 (ಮತಾಂತರ ನಿಷೇಧ ಕಾಯ್ದೆ) ಸಂವಿಧಾನ ವಿರೋಧಿ. ಇದನ್ನು ಹಿಂಪಡೆಯಲಾಗುವುದು ಎಂದು ಸ್ವತಃ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಜತೆಗೆ, ವಿಧಾನ ಪರಿಷತ್ತಿನಲ್ಲಿ ತಮ್ಮ ಬಲ ಹೆಚ್ಚಾದರೆ ಕಡ್ಡಾಯವಾಗಿ ಕಾಯ್ದೆ ರದ್ದುಗೊಳಿಸುತ್ತೇವೆ ಎಂದಿದ್ದರು.ಅದರಂತೆ ಈಗ ಚಳಿಗಾಲಯದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕಾಯ್ದೆ ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

ಇದು ಕೇವಲ ಧಾರ್ಮಿಕ ಮತಾಂತರವನ್ನು ನಿಯಂತ್ರಿಸುವ ಕಾನೂನು ಮಾತ್ರವಲ್ಲ. ಬದಲಾಗಿ ಮತಾಂತರ ನಿಷೇಧ ಕಾಯ್ದೆಯಿಂದ ಸಮಾಜದಲ್ಲಿನ ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದಕ್ಕೆ ಧಕ್ಕೆ ಉಂಟಾಗುತ್ತಿದೆ. ಈ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡು ಕ್ರೈಸ್ತರ ಪ್ರಾರ್ಥನಾ ಸಭೆಗಳು, ಪಾದ್ರಿಗಳ ಮೇಲೆ ದಾಳಿ ಮಾಡಿ, ಕಿರುಕುಳ ನೀಡಲಾಗುತ್ತಿದೆ. ಕೆಲವೊಂದು ಕಡೆಗಳಲ್ಲಿ ದೌರ್ಜನ್ಯದ ವಿರುದ್ಧ ದೂರು ಸಲ್ಲಿಕೆ ಮಾಡಿದರೂ ಪೊಲೀಸರು ಸ್ವೀಕಾರ ಮಾಡುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾದರೂ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯದೇ ಮೌನ ವಹಿಸಿರುವುದು ಖಂಡನೀಯ. ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ರಕ್ಷಿಸಿ, ಎಲ್ಲ ಸಮುದಾಯಗಳಿಗೆ ಸಮಾನ ನ್ಯಾಯ ಒದಗಿಸಬೇಕು ಎಂದ ಅವರು, ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿಕೊಂಡು ದ್ವೇಷ, ಬೆದರಿಕೆ ಮತ್ತು ಹಿಂಸಾಚಾರ ಮಾಡಲಾಗುತ್ತಿರುವ ಘಟನೆಗಳು ನಿತ್ಯ ವರದಿಯಾಗುತ್ತಿವೆ. ಇಂತಹ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರಕಾರ, ಗೃಹ ಇಲಾಖೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಜತೆಗೆ, ದ್ವೇಷ ಭಾಷಣಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಸುಹೇಲ್ ಅಹ್ಮದ್ ಮರೂರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನವೇ ತನ್ನ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನು ಘೋಷಣೆ ಮಾಡಿತ್ತು. ಆದರೆ, ಮೂರು ವರ್ಷ ಕಳೆದರೂ ಅಲ್ಪಸಂಖ್ಯಾತ, ದೀನ ದಲಿತರ ಬೇಡಿಕೆಗಳಿಗೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿದೆ. ಅದರಲ್ಲೂ ‘ಮುಸ್ಲಿಮ್ ಮೀಸಲಾತಿ 2ಬಿ’ ಸೇರಿದಂತೆ ಇನ್ನಿತರೆ ಘೋಷಣೆಗಳು ಬಾಕಿ ಉಳಿದಿವೆ. ಈ ನಿಟ್ಟಿನಲ್ಲಿ ನ.9ರಂದು ನಡೆಯುವ ಬೃಹತ್ ಹಕ್ಕೊತ್ತಾಯ ಸಮಾವೇಶದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.

ಕರ್ನಾಟಕವು ಧಾರ್ಮಿಕ, ಸಾಂಸ್ಕೃತಿಕ ಮತ್ತು ಭಾಷಿಕ ವೈವಿಧ್ಯತೆಯ ಶ್ರೀಮಂತ ಪರಂಪರೆಯನ್ನು ಹೊಂದಿದೆ. ವಿವಿಧ ನಂಬಿಕೆಗಳು, ಸಮುದಾಯಗಳು ಮತ್ತು ಪರಂಪರೆಗಳ ಜನರು ಘನತೆ ಮತ್ತು ಪರಸ್ಪರ ಗೌರವದಿಂದ ಒಟ್ಟಿಗೆ ಬಾಳುವ ಸಾಮಥ್ರ್ಯದಲ್ಲೇ ಇದರ ನಿಜವಾದ ಶಕ್ತಿಯಿದೆ. ಹೀಗಾಗಿ, ಸಾಂವಿಧಾನಿಕ ಮೌಲ್ಯಗಳಿಗೆ ತನ್ನ ಬದ್ಧತೆಯನ್ನು ಸ್ಪಷ್ಟ ಶಾಸನಬದ್ಧ ಕ್ರಮಗಳಾಗಿ ಪರಿವರ್ತಿಸಬೇಕೆಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಈ ಹಿಂದಿನ ಸರಕಾರದ ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಸುವ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಧಾರ್ಮಿಕ ಸ್ವಾತಂತ್ರ್ಯ, ಮಾನವ ಘನತೆ, ಆರ್ಥಿಕ ಭದ್ರತೆ ಮತ್ತು ಸಮಾನತೆಯನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಮುಹಮ್ಮದ್ ಯಾಹ್ಯಾ ದಾಮುದಿ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್, ದಲಿತ ಸಂಘರ್ಷ ಸಮಿತಿ ಮುಖಂಡ ಬಸವರಾಜ ಕೌತಾಳ್, ಯುವ ಹೋರಾಟಗಾರಾದ ಸರೋವರ್ ಬೆಂಕಿಕೆರೆ, ಐಶ್ವರ್ಯಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಪ್ರಮುಖ ಹಕ್ಕೊತ್ತಾಯ

* ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-2022 (ಮತಾಂತರ ನಿಷೇಧ ಕಾಯ್ದೆ) ಹಿಂಪಡೆಯಬೇಕು.

* ಮುಸ್ಲಿಮ್ 2ಬಿ ಮೀಸಲಾತಿ ಮರುಸ್ಥಾಪನೆ ಆಗಬೇಕು

*ದ್ವೇಷ ಭಾಷಣ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು.

* ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕಬೇಕು.









Tags

Congress ManifestoFreedom Park
share
ವಾರ್ತಾಭಾರತಿ
ವಾರ್ತಾಭಾರತಿ
Next Story
X