Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂವಿಧಾನ ಬದಲಾಯಿಸಲು ಬಂದಿರುವವರನ್ನು...

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ: ಸಿಎಂ ಸಿದ್ದರಾಮಯ್ಯ

"ಅಂಬೇಡ್ಕರ್ ಅವರು ಇಡೀ ವಿಶ್ವದ ಸಂವಿಧಾನಗಳ ಅತ್ಯುತ್ತಮ ಸಾರವನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ25 Feb 2024 6:27 PM IST
share
ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇಡೀ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಅದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ದ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದ ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನವಾಗಿದೆ ಎಂದು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಮಂತ್ರಿ ಮಂಡಲದಲ್ಲಿ ಕೇಂದ್ರ ಸಚಿವರಾಗಿದ್ದ ಅನಂತಕುಮಾರ ಹೆಗಡೆ, "ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು" ಎಂದು ಘೋಷಿಸಿದರು. ಈ ಘೋಷಣೆಯನ್ನು ಪ್ರಧಾನಿ ಮೋದಿಯವರಾಗಲೀ, ಅಮಿತ್ ಶಾ ಆಗಲೀ, ಬಿಜೆಪಿಯಾಗಲೀ, ಆರೆಸ್ಸೆಸ್ ಆಗಲಿ ಖಂಡಿಸಲಿಲ್ಲ. ವಿರೋಧಿಸಲಿಲ್ಲ. ಹೀಗಾಗಿ ಬಿಜೆಪಿ ಮತ್ತು ಆರೆಸ್ಸೆಸ್ ನ ಅಜೆಂಡಾವನ್ನು, ಉದ್ದೇಶವನ್ನು ಅನಂತಕುಮಾರ ಹೆಗಡೆ ಬಾಯಲ್ಲಿ ಹೇಳಿಸಿದರು. ಈ ಬಗ್ಗೆ ಇಡೀ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು ಎಂದರು.

ಈ ದೇಶದ, ನಮ್ಮ ನಾಡಿನ ದುಡಿಯುವವರ ಹಕ್ಕುಗಳು, ಶ್ರಮಿಕರು, ರೈತರು, ಕಾರ್ಮಿಕರು ಮತ್ತು ಮಹಿಳಾ ಸಮುದಾಯದ ಅಸ್ತಿತ್ವ ಅಡಗಿರುವುದೇ ನಮ್ಮ ಸಂವಿಧಾನದಲ್ಲಿ. ಸಂವಿಧಾನ ಬದಲಾವಣೆಯಿಂದ ಈ ಎಲ್ಲಾ ಸಮುದಾಯಗಳು ಮರಳಿ ಗುಲಾಮಗಿರಿಗೆ ದೂಡಲ್ಪಡುತ್ತಾರೆ. ಸಂವಿಧಾನ ಇಲ್ಲದ ಸಂದರ್ಭದಲ್ಲಿ ಶೂದ್ರ, ದಲಿತ ಮತ್ತು ಶ್ರಮಿಕರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿತ್ತು ಎನ್ನುವುದನ್ನು ಸ್ಮರಿಸಿಕೊಳ್ಳಿ ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಇಂಡಿಯಾ ಒಕ್ಕೂಟದ ಮುಖಂಡರಾದ ಫಾರೂಕ್ ಅಬ್ದುಲ್ಲಾ, ಸೀತಾರಾಮ್ ಯೆಚೂರಿ ಸೇರಿ 18 ರಾಜ್ಯಗಳ 40 ಮಂದಿ ಮುಖಂಡರು, 12 ಪಕ್ಷಗಳ ನಾಯಕರು ಸಂವಿಧಾನ ರಕ್ಷಣೆ ಮಾಡಬೇಕಾದ ಅನಿವಾರ್ಯತೆ ಕುರಿತು ಜನರನ್ನು ಜಾಗೃತಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X