Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು;...

ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು; ಸಮಸ್ಯೆಗಳನ್ನು ಅಮಿಕಸ್ ಕ್ಯೂರಿ ಗಮನಕ್ಕೆ ತರಲು ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ9 Jun 2026 9:11 PM IST
share
ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು; ಸಮಸ್ಯೆಗಳನ್ನು ಅಮಿಕಸ್ ಕ್ಯೂರಿ ಗಮನಕ್ಕೆ ತರಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸಿದ್ದರೂ ಅವರು ಅದನ್ನು ಬಳಕೆ ಮಾಡುತ್ತಿಲ್ಲ ಎನ್ನುವುದು ಚಿತ್ರಗಳಿಂದ ತಿಳಿಯಲಿದೆ ಎಂದಿರುವ ಹೈಕೋರ್ಟ್, ಪುನರ್ವಸತಿ ಕೇಂದ್ರದಲ್ಲಿ ಯಾವುದೇ ಸಮಸ್ಯೆ ಇದ್ದರೂ ಅಮಿಕಸ್ ಕ್ಯೂರಿ ಗಮನಕ್ಕೆ ತರುವಂತೆ ಅರ್ಜಿದಾರರಿಗೆ ನಿರ್ದೇಶಿಸಿದೆ.

ತೆರವು ಕಾರ್ಯಾಚರಣೆಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಕೋಗಿಲು ಬಡಾವಣೆ ನಿವಾಸಿಗಳಾದ ಜೈಬಾ ತಬಸ್ಸುಮ್, ರೆಹಾನಾ ಹಾಗೂ ಆರೀಫ್ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು, ಸರ್ಕಾರದ ಪುನರ್ವಸತಿ ಕೇಂದ್ರದಲ್ಲಿ 100 ಮಂದಿಯನ್ನು ಇಡಲು ಅವಕಾಶವಿಲ್ಲ. ಅವು ಕೋಗಿಲು ಲೇಔಟ್‌ ಸಮೀಪದಲ್ಲಿಲ್ಲ ಹಾಗೂ ಅಲ್ಲಿ ಅಗತ್ಯವಾದಷ್ಟು ಶೌಚಾಲಯಗಳಿಲ್ಲ ಮತ್ತು ಸೂಕ್ತ ಉಪಚಾರದ ವ್ಯವಸ್ಥೆಯಿಲ್ಲ ಎಂದಿದ್ದರು.

ಇದನ್ನೊಪ್ಪದ ನ್ಯಾಯಪೀಠ, ಸರ್ಕಾರ ಸಲ್ಲಿಸಿರುವ ಫೋಟೊಗಳು ಬೇರೆಯದೇ ಕತೆ ಹೇಳುತ್ತವೆ. ಸಂತ್ರಸ್ತರಿಗೆ ಯಾವುದೇ ಸಮಸ್ಯೆಗಳಿದ್ದರೂ ಅವರು ಅವುಗಳನ್ನು ಅಮಿಕಸ್‌ ಕ್ಯೂರಿ ಬಿ.ವಿ. ವಿದ್ಯುಲ್ಲತಾ ಅವರ ಗಮನಕ್ಕೆ ತರಬಹುದು. ಅವರು ಕ್ರಮಕೈಗೊಳ್ಳಲಿದ್ದಾರೆ ಎಂದು ಹೇಳಿತು.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಆದರೆ, ಅವರು ಸ್ಥಳವನ್ನು ಬಿಟ್ಟು ಕದಲು ಸಿದ್ಧರಿಲ್ಲ. ಏಕೆಂದರೆ, ನಿವೇಶನಗಳು ಇಲ್ಲದಾಗುತ್ತವೆ ಎಂಬ ಆತಂಕ ಅವರದ್ದಾಗಿದೆ ಎಂದರು.

ಅರ್ಜಿದಾರರ ಪರ ವಕೀಲ ಕ್ಲಿಫ್ಟನ್‌ ರೋಜಾರಿಯೋ ಅವರು, ಸಂತ್ರಸ್ತರಿಗೆ ಕರ್ನಾಟಕ ಭೂಕಂದಾಯ ಕಾಯ್ದೆ ಅಡಿ ನಿವೇಶನ ಹಂಚಿಕೆ ಮಾಡಲಾಗಿದೆ. ಅದಕ್ಕೆ ದಾಖಲೆ ಇದೆ ಎಂದರು.

ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿತು.

Tags

Kogilu LayoutHigh CourtAmicus Curiae
share
ವಾರ್ತಾಭಾರತಿ
ವಾರ್ತಾಭಾರತಿ
Next Story
X