Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡೆಂಗ್ಯೂ ಹಿನ್ನೆಲೆ | ‘ವೈದ್ಯಕೀಯ ತುರ್ತು...

ಡೆಂಗ್ಯೂ ಹಿನ್ನೆಲೆ | ‘ವೈದ್ಯಕೀಯ ತುರ್ತು ಸ್ಥಿತಿ’ ಘೋಷಿಸಲು ಸಂಸದ ಡಾ.ಮಂಜುನಾಥ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 July 2024 3:12 PM IST
share
ಡೆಂಗ್ಯೂ ಹಿನ್ನೆಲೆ | ‘ವೈದ್ಯಕೀಯ ತುರ್ತು ಸ್ಥಿತಿ’ ಘೋಷಿಸಲು ಸಂಸದ ಡಾ.ಮಂಜುನಾಥ್ ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ಹರಡುತ್ತಿದ್ದು, ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಇದನ್ನು ‘ವೈದ್ಯಕೀಯ ತುರ್ತು ಸ್ಥಿತಿ’ ಎಂದು ಘೋಷಿಸಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಡೆಂಗ್ಯೂ ಜ್ವರ ನಿಯಂತ್ರಣ ಎಂದರೆ ಸೊಳ್ಳೆಗಳ ನಿಯಂತ್ರಣ. ಡೆಂಗ್ಯೂ ಕಾಯಿಲೆಗೆ ನಿಖರವಾದ ಚಿಕಿತ್ಸೆ ಇಲ್ಲ. ಸೊಳ್ಳೆಗಳ ನಿಯಂತ್ರಣ ಬಹಳ ಮುಖ್ಯವಾದುದು ಎಂದು ತಿಳಿಸಿದರು. ಡೆಂಗ್ಯೂ ಜ್ವರ ನಿಯಂತ್ರಣ ಆಗದೆ ಇದ್ದಲ್ಲಿ ಮಾರಕ ಕಾಯಿಲೆಗಳಾದ ಚಿಕನ್ ಗುನ್ಯಾ, ಝೀಕಾ ವೈರಸ್ ಕಾಯಿಲೆ ಬರಬಹುದು" ಎಂದು ಎಚ್ಚರಿಸಿದರು.

ʼಸರಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ಪಡೆದರೆ ಅಂತಹ ಆಸ್ಪತ್ರೆ, ಘಟಕಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಂತಹ ಲ್ಯಾಬೊರೇಟರಿಗಳನ್ನು ಮುಚ್ಚಬೇಕು ಎಂದು ಒತ್ತಾಯಿಸಿದರು. ಫ್ಲೈಓವರ್, ಅಂಡರ್ ಪಾಸ್, ಅಗೆದ ರಸ್ತೆ, ಸೇತುವೆ ಮೊದಲಾದವು ಸಕಾಲದಲ್ಲಿ ಮುಗಿಯುತ್ತಿಲ್ಲ. ಮಳೆ ಬಂದಾಗ ಅಲ್ಲೆಲ್ಲ ನೀರು ನಿಲ್ಲುತ್ತದೆ. ಇದರಿಂದ ಸೊಳ್ಳೆ ನಿಯಂತ್ರಣ ಸಾಧ್ಯವಾಗುತ್ತಿಲ್ಲʼ ಎಂದು ವಿಶ್ಲೇಷಿಸಿದರು.

ʼಸೊಳ್ಳೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೆಲಸ ಮಾಡಬೇಕಿದೆ. ಡೆಂಗ್ಯೂ ನಿಯಂತ್ರಣಕ್ಕೆ ಒಂದು ಟಾಸ್ಕ್ ಫೋರ್ಸ್ ರಚಿಸಬೇಕಿದೆ. ಈ ಟಾಸ್ಕ್ ಫೋರ್ಸ್, ಪರಿಣತರ ಸಲಹೆ ಪಡೆಯಬೇಕುʼ ಎಂದರು.

ಮಳೆಗಾಲದ ಸಮಸ್ಯೆಗಳಿಗೆ ಬೇಸಿಗೆ ಕಾಲದಲ್ಲೇ ಪರಿಹಾರ ಕಂಡುಕೊಳ್ಳಬೇಕು. ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು. ಒಬ್ಬ ವೈದ್ಯರು ಸೇರಿ 6-7 ಜನರು ಮೃತಪಟ್ಟಿದ್ದು, ಸಾವಿರಾರು ಜನ ಸೋಂಕಿತರಿದ್ದಾರೆ. ಮಕ್ಕಳಲ್ಲೂ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಆದ್ದರಿಂದ ಎಲ್ಲ ಶಾಲೆ- ಕಾಲೇಜುಗಳಿಗೆ ಸುತ್ತೋಲೆ ಕಳಿಸಿ, ಶಾಲಾ ಆಡಳಿತದ ಜೊತೆ ಸಭೆ ನಡೆಸಬೇಕು. ಡೆಂಗ್ಯೂ ಸಂಕೀರ್ಣ ಸ್ಥಿತಿ ತಲುಪಿದರೆ ಅದಕ್ಕೆ ಚಿಕಿತ್ಸೆಯೇ ಇಲ್ಲ ಎಂದು ಗಮನ ಸೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X