ದೇವರಾಜ ಅರಸು ಜನ್ಮ ದಿನಾಚರಣೆ: ಅರಸು ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಬೆಂಗಳೂರು, ಆ.20: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಪಶ್ವಿಮ ದ್ವಾರದಲ್ಲಿರುವ ದೇವರಾಜ ಅರಸು ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಗ್ಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ವೇಳೆ ಇಂಧನ ಸಚಿವ ಕೆ.ಜೆ.ಜಾರ್ಜ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್.ಎಸ್. ತಂಗಡಗಿ, ವಿಧಾನ ಪರಿಷತ್ ಶಾಸಕರಾದ ನಾಗರಾಜ್ ಯಾದವ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಡಿ.ದೇವರಾಜ ಅರಸು ಅವರ ಕುಟುಂಬದ ಸದಸ್ಯರು ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
Next Story







