ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಸಾಕ್ಷಿ ದೂರುದಾರ ಎಸ್‌ಐಟಿ ಕಸ್ಟಡಿಗೆ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನನ್ನು 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿದೆ.
ಕಳೆದ ಎರಡು ತಿಂಗಳಿನಿಂದ ನಡೆಯುತ್ತಿದ್ದ ಘಟನೆಗಳಿಗೆ ಇದೀಗ ಹೊಸ ತಿರುವು ಲಭಿಸಿದೆ. ಸಾಕ್ಷಿ ದೂರುದಾರ ನೀಡುತ್ತಿರುವ ಹೇಳಿಕೆಗಳಲ್ಲಿನ ಗೊಂದಲವೇ ಆತನನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ.
ಸಾಕ್ಷಿ ದೂರುದಾರ ತಂದ ತಲೆ ಬುರುಡೆಯ ವಿಚಾರದಲ್ಲಿ ಹೇಳುತ್ತಿರುವ ವಿಚಾರಗಳ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ ವೇಳೆ ದೂರುದಾರ ನೀಡಿರುವ ಹೇಳಿಕೆಗಳು ತಾಳೆಯಾಗದ ಹಿನ್ನಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಉದ್ದೇಶದಿಂದ ಎಸ್.ಐ.ಟಿ ತಂಡ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
Next Story





