Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ...

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್ ಸಲ್ಲಿಸಿದ್ದ ಅರ್ಜಿ ವಜಾ

ವಾರ್ತಾಭಾರತಿವಾರ್ತಾಭಾರತಿ19 Nov 2026 10:08 PM IST
share
ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿರುವ ತನಿಖೆಯನ್ನು ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಗಿರೀಶ್‌ ಮಟ್ಟಣವರ್‌ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರಿಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ, ತನಿಖೆ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿ ಅರ್ಜಿ ವಜಾಗೊಳಿಸಿತಲ್ಲದೆ, ಅರ್ಜಿದಾರರ ದ್ವಂದ್ವ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.

ಇದಕ್ಕೂ ಮುನ್ನ ಮಟ್ಟಣ್ಣವರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ಬಾಲನ್, ಹಾಲಿ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ದಾಖಲಿಸಬೇಕಿತ್ತು. ಆದರೆ, ದೂರುದಾರ ಮುಸುಕುಧಾರಿ ಚಿನ್ನಯ್ಯ ಸರ್ಕಾರಿ ನೌಕರನಲ್ಲ. ಅಸಂಜ್ಞೇಯ ಅಪರಾಧಕ್ಕೆ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರ ಎಂದು ನ್ಯಾಯಪೀಠಕ್ಕೆ ವಿವರಿಸಿದರಲ್ಲದೆ, ವಿಚಾರಣೆಯ ನೆಪದಲ್ಲಿ ತಮ್ಮ ಕಕ್ಷಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆಕ್ಷೇಪಿಸಿದರು.

ಇದಕ್ಕೆ ಪ್ರತಿಯಾಗಿ ಎಸ್‌ಐಟಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ವಾದ ಮಂಡಿಸಿ, ಮ್ಯಾಜಿಸ್ಟ್ರೇಟ್ ಅವರಿಂದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ. ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದು ಆರೋಪಪಟ್ಟಿ (ಚಾರ್ಜ್‌ಶೀಟ್) ಸಲ್ಲಿಕೆಯಾದ ನಂತರವೇ ಹೊರತು, ತನಿಖೆಯ ಹಂತದಲ್ಲಲ್ಲ ಎಂದು ಸುಪ್ರೀಂಕೋರ್ಟ್‌ನ ಹಲವು ತೀರ್ಪುಗಳು ಸ್ಪಷ್ಟಪಡಿಸಿವೆ ಎಂದರು. ಜತೆಗೆ, ಈ ಹಿಂದೆ ಬೇರೊಂದು ಅರ್ಜಿಯಲ್ಲಿ ಇದೇ ಅರ್ಜಿದಾರರು ಪ್ರಕರಣದ ತನಿಖೆ ಸಮರ್ಪಕವಾಗಿ ನಡೆಯಲಿ ಎಂದು ಕೋರಿದ್ದರು. ಈಗ ತನಿಖೆಯು ತಮ್ಮತ್ತಲೇ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದು ಮಾಡಿ ಎನ್ನುತ್ತಿದ್ದಾರೆ ಎಂದು ಅರ್ಜಿದಾರರ ದ್ವಂದ್ವ ನಿಲುವನ್ನು ನ್ಯಾಯಾಲಯದ ಗಮನಕ್ಕೆ ತಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಮೂಲ ಎಫ್‌ಐಆರ್ 'ಅಜ್ಞಾತ ವ್ಯಕ್ತಿ'ಗಳ ವಿರುದ್ಧ ದಾಖಲಾಗಿದೆ. ತನಿಖೆಯಲ್ಲಿ ಸಾಕ್ಷ್ಯಗಳು ಲಭ್ಯವಾದ ಕಾರಣ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಒಂದೆಡೆ ತನಿಖೆ ನಡೆಯಲಿ ಎನ್ನುತ್ತೀರಿ, ಮತ್ತೊಂದೆಡೆ ತನಿಖೆ ರದ್ದು ಮಾಡಿ ಎನ್ನುತ್ತೀರಿ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು.

ನ್ಯಾಯಾಧೀಶರ ಕೆಲಸ ತಾವರೆ ಎಲೆಯ ಮೇಲಿನ ನೀರಿನಂತಿರಬೇಕು. ನೀರಿನಲ್ಲೇ ಬೆಳೆಯಬೇಕು, ಆದರೆ, ನೀರನ್ನು ಅಂಟಿಸಿಕೊಳ್ಳಬಾರದು. ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ಮಾತ್ರ ತೀರ್ಪು ನೀಡಬೇಕೇ ಹೊರತು, ನೈತಿಕ ವಿಚಾರಗಳು ತೀರ್ಪಿನೊಳಗೆ ಇಣುಕಬಾರದು ಎಂದು ನ್ಯಾಯಮೂರ್ತಿಗಳು ಮಾರ್ಮಿಕವಾಗಿ ನುಡಿದರು.

ಪ್ರಕರಣವೇನು?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬ ನೀಡಿದ್ದ ದೂರಿನ ಸತ್ಯಾಸತ್ಯತೆ ಪತ್ತೆಹಚ್ಚಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ತನಿಖೆ ಕೈಗೆತ್ತಿಕೊಂಡ ಅಧಿಕಾರಿಗಳು, ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿನ ವೈರುಧ್ಯಗಳನ್ನು ಪತ್ತೆಹಚ್ಚಿದ್ದರು. ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಆರೋಪದಡಿ ಚಿನ್ನಯ್ಯ ಅಲಿಯಾಸ್ ಚಿನ್ನ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ., ವಿಠಲ ಗೌಡ ಹಾಗೂ ಸುಜಾತಾ ಭಟ್ ಸೇರಿದಂತೆ ಆರು ಮಂದಿಯ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ ಹಾಗೂ ನಕಲಿ ದಾಖಲೆ ತಯಾರಿಕೆ ಆರೋಪದಡಿ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಎಫ್‌ಐಆರ್ ರದ್ದು ಕೋರಿ ಮಟ್ಟಣ್ಣವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

Tags

Dharmasthala CaseGirish MattannavarSIT Probe
share
ವಾರ್ತಾಭಾರತಿ
ವಾರ್ತಾಭಾರತಿ
Next Story
X