Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಕ್ಫ್ ಆಸ್ತಿಯೆಂದು ರೈತರಿಗೆ ನೋಟಿಸ್...

ವಕ್ಫ್ ಆಸ್ತಿಯೆಂದು ರೈತರಿಗೆ ನೋಟಿಸ್ ಕೊಟ್ಟಿದ್ದೇ ಬಿಜೆಪಿ ಸರಕಾರ: ಎಂ.ಬಿ.ಪಾಟೀಲ

ದಾಖಲೆ ಸಹಿತ ತಿರುಗೇಟು ನೀಡಿದ ಸಚಿವ

ವಾರ್ತಾಭಾರತಿವಾರ್ತಾಭಾರತಿ29 Oct 2024 12:16 PM IST
share
ವಕ್ಫ್ ಆಸ್ತಿಯೆಂದು ರೈತರಿಗೆ ನೋಟಿಸ್ ಕೊಟ್ಟಿದ್ದೇ ಬಿಜೆಪಿ ಸರಕಾರ: ಎಂ.ಬಿ.ಪಾಟೀಲ

ಬೆಂಗಳೂರು: ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಕೆಟ್ಟ ರಾಜಕಾರಣ ಮಾಡುತ್ತಿದೆ. ಆದರೆ 2019ರಿಂದ 2022ರವರೆಗೆ ರಾಜ್ಯದಲ್ಲಿ ಅವರದೇ ಸರಕಾರವಿದ್ದಾಗ ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಮಂಡಳಿ ಮೂಲಕ ನೋಟಿಸ್ ಕೊಡಲಾಗಿತ್ತು. ಆಗ ಇರದ ಹಿಂದೂ ಪ್ರೇಮವನ್ನು ಈಗ ಕಪೋಲಕಲ್ಪಿತ ಸುಳ್ಳುಗಳ ಮೂಲಕ ವ್ಯಕ್ತಪಡಿಸಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಟೀಕಿಸಿದ್ದಾರೆ.

ಈ ಸಂಬಂಧವಾಗಿ ಅವರು ಬಿಜೆಪಿ ಆಡಳಿತದ ಕಾಲದ ನೋಟೀಸ್ ಗಳೊಂದಿಗೆ, `ಎಕ್ಸ್’ನಲ್ಲಿ ತೀಕ್ಷ್ಣ ಸಂದೇಶ ಹಾಕಿದ್ದಾರೆ.

ಬಿಜೆಪಿಯವರು ತಮ್ಮದೇ ಸರಕಾರವಿದ್ದಾಗ ರಾಜ್ಯದ ಅಭಿವೃದ್ಧಿಯನ್ನು ಮರೆತು ಹಿಜಾಬ್, ಹಲಾಲ್, ಉರಿಗೌಡ-ನಂಜೇಗೌಡ ಎಂದು ನಾಟಕವಾಡಿದರು. ಈಗ ವಕ್ಫ್ ಆಸ್ತಿ ಹೆಸರಿನಲ್ಲಿ ಆ ನಾಟಕವನ್ನು ಮುಂದುವರಿಸಲಾಗುತ್ತಿದೆ. ಸುಳ್ಳಿನ ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ ಎಂದು ಅವರು ಕುಟುಕಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರಚಿಸಿರುವ ಸತ್ಯ ಶೋಧನಾ ಸಮಿತಿಯನ್ನು ಅವರದೇ ಪಕ್ಷದ ಬಸನಗೌಡ ಪಾಟೀಲ ಯತ್ನಾಳ ಹಿಗ್ಗಾಮುಗ್ಗಾ ಟೀಕಿಸಿದ ಮೇಲೆ ಪುನಾರಚಿಸಲಾಗಿದೆ. ಇಷ್ಟೆಲ್ಲ ಆದಮೇಲೆ ಯತ್ನಾಳ್ ಜೊತೆಗೆ ಸಂಸದ ರಮೇಶ ಜಿಗಜಿಣಗಿ ಅವರುಗಳನ್ನು ಸೇರಿಸಿದಂತೆ ನಟಿಸಲಾಗಿದೆ. ಇದು ಆ ಪಕ್ಷದ ದುಃಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಇದನ್ನು ಬಿಟ್ಟು, ತಮ್ಮ ಸರಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕೊಟ್ಟ ನೋಟೀಸುಗಳಿಗೆ ಮೊದಲು ಉತ್ತರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಎಂದು ಹೇಳಿ ಯಾವ ರೈತರಿಗೂ ನೋಟಿಸ್ ಕೊಟ್ಟಿಲ್ಲ. ಇಲ್ಲದ ಸಮಸ್ಯೆಯನ್ನು ಹುಟ್ಟುಹಾಕುತ್ತಿರುವ ಬಿಜೆಪಿ ನಾಯಕರು ತಮ್ಮ ನಡುವೆ ಇರುವ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳಲಿ ಎಂದು ಅವರು ವ್ಯಂಗ್ಯವಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X