ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ದಿನೇಶ್ ಗೂಳಿಗೌಡ ನೇಮಕ

ದಿನೇಶ್ ಗೂಳಿಗೌಡ
ಬೆಂಗಳೂರು, ಆ. 11: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ದಿನೇಶ್ ಗೂಳಿಗೌಡ ಅವರು ಮಂಡ್ಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಪರಿಷತ್ತಿನ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ಹಾಗೂ ಕೆಪಿಸಿಸಿ ಮಾಧ್ಯಮ ಘಟಕದ ಉಪಾಧ್ಯಕ್ಷರಾಗಿ ಹಲವು ವರ್ಷಗಳಿಂದ ಕೆಲಸ ನಿರ್ವಹಿಸಿದ್ದಾರೆ.
Next Story





