Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 1,032 ಔಷಧಿಗಳನ್ನು ಉಚಿತವಾಗಿ ಪೂರೈಸಲು...

1,032 ಔಷಧಿಗಳನ್ನು ಉಚಿತವಾಗಿ ಪೂರೈಸಲು ಕ್ರಮ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ13 March 2025 6:28 PM IST
share
1,032 ಔಷಧಿಗಳನ್ನು ಉಚಿತವಾಗಿ ಪೂರೈಸಲು ಕ್ರಮ: ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದ ಜನರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ 1,032 ಔಷಧಿಗಳನ್ನು ಖರೀದಿಸಿ ಉಚಿತವಾಗಿ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಗುರುವಾರ ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬಿಜೆಪಿ ಸದಸ್ಯ ಡಾ.ಸಿ.ಎನ್.ಅಶ್ವತ್ಥನಾರಾಯಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆರೋಗ್ಯ ಇಲಾಖೆಯಲ್ಲಿ ಜೀವನಾವಶ್ಯಕ ಮತ್ತು ಅಪಕ್ಷೇಣೀಯ ಎಂಬ 2 ವಿಧಗಳಲ್ಲಿ ಔಷಧಿಗಳನ್ನು ಖರೀದಿಸಲಾಗುತ್ತಿದೆ. ಜೀವನಾವಶ್ಯಕವಾದ 408 ಮಾದರಿಯ ಔಷಧಿಗಳ ಪೈಕಿ 262 ಖರೀದಿಗೆ ಅಪೇಕ್ಷಣೀಯ 324 ಔಷಧಿಗಳ ಪೈಕಿ 213 ಔಷಧಿಗಳ ಖರೀದಿಗೆ ಅನುಮತಿ ನೀಡಲಾಗಿದ್ದು, ಒಟ್ಟು 475 ಔಷಧಿಗಳನ್ನು ಖರೀದಿಸಲಾಗುತ್ತಿದೆ. ಜಿಲ್ಲಾಮಟ್ಟದಲ್ಲಿ 344 ಔಷಧಿಗಳ ದಾಸ್ತಾನಿದೆ ಎಂದರು.

ಕೆಲವು ಔಷಧಿಗಳನ್ನು ಖರೀದಿಸಲು ಟೆಂಡರ್ ಕರೆದರೆ ಗುತ್ತಿಗೆದಾರರು ಔಷಧಿ ಪೂರೈಸಲು ಮುಂದೆ ಬರುತ್ತಿಲ್ಲ. ಬೆಲೆ ಕಡಿಮೆ ಎಂಬ ಕಾರಣಕ್ಕಾಗಿ ಹಿಂದೇಟು ಹಾಕುತ್ತಿದ್ದಾರೆ. ಕೆಳಹಂತದಲ್ಲಿ ಎಆರ್‌ಕೆ, ಎಬಿಆರ್‌ಎಸ್ ಮಾದರಿಗಳಲ್ಲಿ ಔಷಧಿ ಖರೀದಿಗೆ ಸಾಕಷ್ಟು ಅನುದಾನ ಒದಗಿಸಲಾಗಿದೆ. ಕೇಂದ್ರ ಸರಕಾರದ ಅನುದಾನದಲ್ಲಿ ಶೇ.80 ರಷ್ಟನ್ನು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ಸಂಸ್ಥೆಗೆ ಹಂಚಿಕೆಯಾಗುತ್ತಿದ್ದು, ಶೇ.20 ರಷ್ಟನ್ನು ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ನೀಡಿ ಎಬಿಎಆರ್‌ಕೆ, ಎಆರ್‌ಎಸ್, ಎನ್‍ಎಫ್‍ಡಿಎಸ್ ಮತ್ತು 15ನೇ ಹಣಕಾಸು ಯೋಜನೆಯಡಿ ಬಳಕೆ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.

ಈವರೆಗೂ 732 ಔಷಧಿಗಳ ಖರೀದಿಗೆ ಮಾತ್ರ ಅವಕಾಶ ಇತ್ತು. ಅದನ್ನು 1,032 ಕ್ಕೆ ಹೆಚ್ಚಳ ಮಾಡಲಾಗುತ್ತಿದೆ. ಕಾಲಕಾಲಕ್ಕೆ ಔಷಧಿಗಳ ಬೇಡಿಕೆ ಆಧರಿಸಿ ಮಾದರಿಗಳನ್ನು ಬದಲಾವಣೆ ಮಾಡಲಾಗುವುದು. ಶೀಘ್ರವೇ ಔಷಧಿ ಖರೀದಿಸಿ ಆಸ್ಪತ್ರೆಗಳಿಗೆ ಪೂರೈಸುವ ಮೂಲಕ ಸರಕಾರ ತನ್ನ ಮೂಲಭೂತ ಕರ್ತವ್ಯಕ್ಕೆ ಬದ್ಧವಾಗಿರಲಿದೆ ಎಂದರು.

ನಕಲಿ ಔಷಧಿ ವಿಭಾಗದಲ್ಲಿ 4 ವಿಧಗಳಿವೆ. ತಪ್ಪಾಗಿ ಹೆಸರನ್ನು ನಮೂದಿಸುವುದು ಒಂದು ವಿಧವಾದರೆ, ಉತ್ಪಾದಕರು ಬೇರೆ, ಔಷಧಿಗಳಿಗೆ ಅಂಟಿಸುವ ಲೇಬಲ್‍ನಲ್ಲಿ ಬೇರೆ ಹೆಸರಿರುವುದು, ಲೇಬಲ್‍ಗಳಲ್ಲಿನ ತಪ್ಪು ಮಾಹಿತಿ ಹಾಗೂ ಔಷಧಿ ಗುಣಮಟ್ಟ ಆಧರಿಸಿ ಬೇರೆಬೇರೆ ರೀತಿಯ ವಿಧಗಳಿವೆ. ರಾಜ್ಯಸರ್ಕಾರ ಈವರೆಗಿನ ಇತಿಹಾಸದಲ್ಲೇ ಅತಿ ಹೆಚ್ಚು ತಪಾಸಣೆಗಳನ್ನು ಕೈಗೊಂಡಿದೆ ಎಂದು ಉಲ್ಲೇಖಿಸಿದರು.

ಇದು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. 67 ಔಷಧಿ ಪರಿವೀಕ್ಷಕರ ನೇಮಕಾತಿಗಾಗಿ ಕ್ರಮ ಕೈಗೊಳ್ಳಲಾಗಿದ್ದು, ನ್ಯಾಯಾಲಯದಲ್ಲಿ ತಗಾದೆ ಇತ್ಯರ್ಥವಾದ ತಕ್ಷಣ ನೇಮಕಾತಿ ಆದೇಶ ನೀಡುವುದಾಗಿ ತಿಳಿಸಿದ ಅವರು, ನಕಲಿ ಔಷಧಿ ವಿಚಾರಕ್ಕೆ ಸಂಬಂಧಪಟ್ಟಂತೆ 87 ಫಾರ್ಮಸಿ ಅಂಗಡಿಗಳ ಪರವಾನಗಿ ಅಮಾನತುಗೊಳಿಸಲಾಗಿದೆ, 3 ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ಕೆಎಸ್‍ಎಂಎಸ್‍ಸಿಎಲ್‍ಗೆ ಐಎಎಸ್ ಅಧಿಕಾರಿಯನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸುವ ಮೂಲಕ ಸಾಕಷ್ಟು ಸುಧಾರಣೆ ತರಲಾಗುತ್ತಿದೆ ಎಂದು ವಿವರಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X