ಸಿ.ಟಿ.ರವಿ ಪ್ರಚೋದನಾಕಾರಿ ಹೇಳಿಕೆ ನೀಡಿ ಬಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಾರೆ : ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್
ಬೆಂಗಳೂರು, ಸೆ. 11: ‘ಮುಸ್ಲಿಮರ ತಲೆ ತೆಗೆಯುವುದಾಗಿ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಸಿ.ಟಿ. ರವಿಯವರಿಗೆ ಸಮಾಜದಲ್ಲಿ ಬೆಂಕಿ ಹಚ್ಚುವುದೇ ಕೆಲಸ. ಸಿ.ಟಿ.ರವಿ ಇಂತಹ ಪ್ರಚೋದನಾಕಾರಿ ಹೇಳಿಕೆ ನೀಡಿ ಬಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಾರೆಯೇ ಹೊರತು, ಅವರು ಹಾಗೂ ಅವರ ಕುಟುಂಬದವರು ಇಂತಹ ಕೆಲಸಕ್ಕೆ ಕೈಹಾಕುವುದಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಗುರುವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಕಂಡವರ ಮಕ್ಕಳ ಭವಿಷ್ಯ ಹಾಳು ಮಾಡುವುದೇ ಸಿ.ಟಿ.ರವಿ ಸೇರಿದಂತೆ ಬಿಜೆಪಿಯ ಅನೇಕ ನಾಯಕರ ಕೆಲಸ. ಬಿಜೆಪಿಯಲ್ಲಿ ಇಂತಹ ಕೋಮು ಕ್ರಿಮಿಗಳ ದೊಡ್ಡ ದಂಡೇ ಇದೆ. ಹೊಡಿ-ಬಡಿ, ಕೊಚ್ಚು-ಕೊಲ್ಲು, ಕೈ ಕಾಲು ತೆಗಿ-ತಲೆ ತೆಗಿ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ಕೊಡುವ ಬಿಜೆಪಿ ನಾಯಕರು ಎಂದಾದರೂ ಆ ಕೆಲಸವನ್ನು ಸ್ವತಃ ತಾವೇ ಮಾಡಿದ್ದಾರೆಯೇ ಅಥವಾ ಅವರ ಕುಟುಂಬದ ಯಾರಾದರೂ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
Next Story







