Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಾಯಿ-ಶಿಶುಗಳ ಮರಣ ಪ್ರಮಾಣ ಕನಿಷ್ಠ...

ತಾಯಿ-ಶಿಶುಗಳ ಮರಣ ಪ್ರಮಾಣ ಕನಿಷ್ಠ ಮಟ್ಟಕ್ಕೆ ಇಳಿಸುವುದು ಆದ್ಯತೆ : ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ26 Sept 2025 7:23 PM IST
share
ತಾಯಿ-ಶಿಶುಗಳ ಮರಣ ಪ್ರಮಾಣ ಕನಿಷ್ಠ ಮಟ್ಟಕ್ಕೆ ಇಳಿಸುವುದು ಆದ್ಯತೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಸೆ.26: ದಕ್ಷಿಣ ಭಾರತದ ರಾಜ್ಯಗಳಲ್ಲೆ ಅತಿ ಹೆಚ್ಚು ತಾಯಿ ಮತ್ತು ಶಿಶುಗಳ ಮರಣ ಪ್ರಮಾಣ ನಮ್ಮ ರಾಜ್ಯದಲ್ಲಿದೆ. ಇದನ್ನು ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಸಬೇಕು ಎಂಬುದು ನಮ್ಮ ಆದ್ಯತೆಯಾಗಿದೆ. ಆದುದರಿಂದ, ತಾಯಿ ಮತ್ತು ಮಕ್ಕಳ ಆರೋಗ್ಯ ತ್ರಿವಳಿ ತಜ್ಞರ(ಸ್ತ್ರೀ ರೋಗ ತಜ್ಞರು, ಅರವಳಿಕೆ ತಜ್ಞರು ಮತ್ತು ಮಕ್ಕಳ ತಜ್ಞರು)ನ್ನು ತರ್ಕಬದ್ಧಗೊಳಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಶುಕ್ರವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾಯಿ ಮತ್ತು ಶಿಶುಗಳ ಮರಣ ಪ್ರಮಾಣ ಕೇರಳದಲ್ಲಿ ಒಂದು ಲಕ್ಷಕ್ಕೆ 20 ಇದ್ದರೆ, ನಮ್ಮ ರಾಜ್ಯದಲ್ಲಿ 61-62 ಇದೆ. ನಮ್ಮ ಸರಕಾರ ಆರೋಗ್ಯ ಇಲಾಖೆಯಲ್ಲಿ ಕೈಗೊಂಡ ಸುಧಾರಣೆಗಳ ಪರಿಣಾಮವಾಗಿ ಸುಮಾರು ಶೇ.25ರಷ್ಟು ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.

ಎಲ್ಲ ತಾಲೂಕು ಆಸ್ಪತ್ರೆಗಳು 24/7 ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ತಾಲೂಕು ಆಸ್ಪತ್ರೆಗಳನ್ನು ಸಮಗ್ರ ‘ಸಮಗ್ರ ತುರ್ತು ಪ್ರಸೂತಿ ಮತ್ತು ನವಜಾತ ಶಿಶು ಆರೈಕೆ’ ಕೇಂದ್ರಗಳಾಗಿ ರೂಪಿಸಲಾಗುವುದು. ತಿಂಗಳಿಗೆ ಸರಾಸರಿ 30 ಅಥವಾ ಅದಕ್ಕಿಂತ ಹೆಚ್ಚಿನ ಹೆರಿಗೆ ಮಾಡಿಸುತ್ತಿರುವ 41 ಸಮುದಾಯ ಆರೋಗ್ಯ ಕೇಂದ್ರಗಳನ್ನು ತ್ರಿವಳಿ ತಜ್ಞರ ಸೇವೆಗಳಿಗಾಗಿ ಉಳಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಕಡಿಮೆ ಕಾರ್ಯನಿರ್ವಹಿಸುವ 230 ಸಮುದಾಯ ಆರೋಗ್ಯ ಕೇಂದ್ರಗಳಿಂದ ತಜ್ಞರನ್ನು ತಾಲೂಕು ಆಸ್ಪತ್ರೆಗಳಿಗೆ ಮರು ನಿಯೋಜಿಸಲಾಗುವುದು. ಮಲೆ ಮಹದೇಶ್ವರ ಬೆಟ್ಟ, ಸಂತೇಮಾರಹಳ್ಳಿ, ತಲಕಾಡು, ಬನ್ನೂರು ಮುಂತಾದ ದೂರದ ಪ್ರದೇಶಗಳ ಸಮುದಾಯ ಆರೋಗ್ಯ ಕೇಂದ್ರಗಳನ್ನು ತಜ್ಞರೊಂದಿಗೆ ಉಳಿಸಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ರಮವಾಗಿ(4:4:2) ಸ್ತ್ರೀರೋಗ ತಜ್ಞರು-4, ಅರವಳಿಕೆ ತಜ್ಞರು-4 ಹಾಗೂ ಮಕ್ಕಳ ತಜ್ಞರು-2, ತಾಲೂಕು ಆಸ್ಪತ್ರೆ ಹಾಗೂ ಉತ್ತಮ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈ ಪ್ರಮಾಣವನ್ನು 2:2:2 ರೀತಿ ನಿಯೋಜಿಸಲಾಗುವುದು. ಇದರಿಂದ, ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ಯಾವುದೆ ಸಮಯದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದರೂ ಅವರಿಗೆ ತುರ್ತು ಆರೋಗ್ಯ ಸೇವೆ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

148 ತಾಲೂಕು ಆಸ್ಪತ್ರೆಗಳಲ್ಲಿ ಕೇವಲ 31 ಆಸ್ಪತ್ರೆಗಳಲ್ಲಿ ಮಾತ್ರ 100ಕ್ಕಿಂತ ಹೆಚ್ಚು ಹೆರಿಗೆಗಳು ಸಂಭವಿಸುತ್ತಿವೆ. ಹೆಚ್ಚಿನ ಆಸ್ಪತ್ರೆಗಳಲ್ಲಿ ಒಬ್ಬರೆ ತಜ್ಞರು ಕಾರ್ಯ ನಿರ್ವಹಿಸುತ್ತಿದ್ದಾರೆ. 24/7 ಸೇವೆ ನೀಡಲು ಸಾಕಷ್ಟು ಸಿಬ್ಬಂದಿ ಲಭ್ಯವಿಲ್ಲ. ಕಡಿಮೆ ಕಾರ್ಯನಿರ್ವಹಿಸುವ 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಶುಶ್ರೂಷಕಾಧಿಕಾರಿಗಳನ್ನು(ಸ್ಟಾಫ್ ನರ್ಸ್) ಮರು ನಿಯೋಜಿಸಿ ‘ಸಮಗ್ರ ತುರ್ತು ಪ್ರಸೂತಿ ಮತ್ತು ನವಜಾತ ಶಿಶು ಆರೈಕೆ’ ಆಸ್ಪತ್ರೆಗಳನ್ನಾಗಿ ಬಲಪಡಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರತಿಯೊಂದು ಸಮಗ್ರ ತುರ್ತು ಪ್ರಸೂತಿ ಮತ್ತು ನವಜಾತ ಶಿಶು ಆರೈಕೆ ಆಸ್ಪತ್ರೆಯಲ್ಲಿ 3 ಹೆಚ್ಚುವರಿ ನರ್ಸ್‍ಗಳನ್ನು ನಿಯೋಜನೆ ಮಾಡಲಾಗುವುದು. ಗರ್ಭಿಣಿಯರಿಗೆ ಜನಜಾಗೃತಿ ತರಬೇತಿ(ಸಾಮಾನ್ಯ, ಸಿಸೇರಿಯನ್ ಹೆರಿಗೆಗಳ ಮಾಹಿತಿ, ಪೋಷಣೆ, ರೋಗ ನಿರೋಧಕ ಚುಚ್ಚುಮದ್ದು, ಕುಟುಂಬ ಕಲ್ಯಾಣ ಯೋಜನೆಗಳ ಅರಿವು) ನೀಡಲಾಗುವುದು ಎಂದು ಅವರು ಹೇಳಿದರು.

114 ಹೊಸ ರೇಡಿಯಾಲಜಿಸ್ಟ್ ಹುದ್ದೆಗಳನ್ನು ರಚಿಸಲಾಗುವುದು. ಇನ್ನೂ 15 ದಿನಗಳಲ್ಲಿ 220 ವೈದ್ಯರನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು. ಗ್ರಾಮೀಣ ಸೇವೆ ಕಡ್ಡಾಯ ಕಾನೂನಿನಡಿ ಎಂಬಿಬಿಎಸ್ ವೈದ್ಯರ ಸೇವೆಯನ್ನು ಪಡೆಯಲಾಗುತ್ತಿದೆ. ಅದೇ ರೀತಿ ಪಿ.ಜಿ ಮಾಡಿರುವ ವೈದ್ಯರ ಸೇವೆಯನ್ನು ಬಳಸಿಕೊಳ್ಳುವ ಚರ್ಚೆ ನಡೆಯುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವುದರಿಂದ ಜಿಲ್ಲಾ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಇದಲ್ಲದೆ, ಆಸ್ಪತ್ರೆಗಳಲ್ಲಿ ರಕ್ತದ ಪ್ಲಾಸ್ಮಾ ಸಂಗ್ರಹ ಮಾಡಲು ಆದೇಶ ನೀಡಲಾಗಿದೆ. ಇದಲ್ಲದೆ, ರಕ್ತ ಹೀನತೆಯಿಂದ ಬಳಲುವ ಸ್ತ್ರೀಯರಿಗೆ ಎಫ್‍ಸಿಎಂ ಚುಚ್ಚುಮದ್ದು ನೀಡಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

‘ರಾಜ್ಯದ 148 ತಾಲೂಕು ಆಸ್ಪತ್ರೆಗಳಲ್ಲಿ 11 ಸ್ತ್ರೀರೋಗ ತಜ್ಞರ ಹುದ್ದೆಗಳು ಖಾಲಿ. 274 ಸಮುದಾಯ ಆರೋಗ್ಯ ಕೇಂದ್ರಗಳ ಪೈಕಿ 114 ಸ್ತ್ರೀರೋಗ ತಜ್ಞರು ಕಾರ್ಯನಿರ್ವಹಿಸುತ್ತಿದ್ದಾರೆ. 21 ಆಸ್ಪತ್ರೆಗಳಲ್ಲಿ ಅರವಳಿಕೆ ತಜ್ಞರು ಇಲ್ಲ. 274 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 86 ಅರವಳಿಕೆ ತಜ್ಞರು ಕಾರ್ಯನಿರ್ವಹಿಸುತ್ತಿದ್ದಾರೆ. 148 ತಾಲೂಕು ಆಸ್ಪತ್ರೆಗಳ ಪೈಕಿ 109ರಲ್ಲಿ ಮಾತ್ರ ಮಕ್ಕಳ ತಜ್ಞರಿದ್ದಾರೆ. ರೇಡಿಯಾಲಜಿಸ್ಟ್‌ ಗಳು 189 ಆಸ್ಪತ್ರೆಗಳಿಗೆ ಬೇಕಾಗಿದ್ದು, ಸದ್ಯ 75 ಜನ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ’

-ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X