Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಮತಗಳ್ಳತನʼ ನಡೆಯದಿದ್ದರೆ ಬೆಂಗಳೂರು...

ʼಮತಗಳ್ಳತನʼ ನಡೆಯದಿದ್ದರೆ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಸಂಸದರು ಆಯ್ಕೆಯಾಗುತ್ತಿದ್ದರು : ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ26 Oct 2025 11:23 PM IST
share
ʼಮತಗಳ್ಳತನʼ ನಡೆಯದಿದ್ದರೆ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಸಂಸದರು ಆಯ್ಕೆಯಾಗುತ್ತಿದ್ದರು : ದಿನೇಶ್ ಗುಂಡೂರಾವ್
‘ಗಾಂಧಿನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರಿದ್ದಾರೆ’

ಬೆಂಗಳೂರು : ಗಾಂಧಿನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರಿದ್ದಾರೆ. ಮತಗಳ್ಳತನ ನಡೆಯದಿದ್ದರೆ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಸಂಸದರು ಆಯ್ಕೆ ಆಗುತ್ತಿದ್ದರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇಲ್ಲಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸನ್ ರೈಸ್ ಸರ್ಕಲ್‌ನಲ್ಲಿ ಮತಗಳ್ಳತನ (ವೋಟ್ ಚೋರಿ) ವಿರುದ್ಧ ನಡೆಯುತ್ತಿರುವ ‘ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಕಲಿ ಮತದಾರರ ಪಟ್ಟಿಯನ್ನು ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರೂ, ಇನ್ನು ಯಾವುದೇ ಕ್ರಮ ಆಗಿಲ್ಲ. ನಕಲಿ ಮತಗಳ ಅಳಿಸುವ ಪ್ರಕ್ರಿಯೆಗೆ ಚುನಾವಣಾ ಆಯೋಗ ಇನ್ನೂ ಮೀನಮೇಷ ಎಣಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.

ದೇಶದಲ್ಲಿ ಈಗಾಗಲೇ ಮತಗಳ್ಳತನ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಸವಿಸ್ತಾರವಾಗಿ ದೇಶದ ಜನತೆಗೆ ದಾಖಲೆಯ ಸಮೇತವಾಗಿ ನಿರೂಪಿಸಿದ್ದಾರೆ. ಇದು ಇಡೀ ದೇಶವೇ ಆತಂಕಪಡುವ ಸ್ಥಿತಿಯಲ್ಲಿದೆ. ಸಾಂವಿಧಾನಿಕ ಪೀಠಗಳನ್ನು ಬಿಜೆಪಿ ತಮ್ಮ ಮತ ಬ್ಯಾಂಕ್ ಮಾಡಿಕೊಂಡಿರುವುದು ಖಂಡನೀಯ ಎಂದು ದಿನೇಶ್ ಗುಂಡೂರಾವ್ ಟೀಕಿಸಿದರು.

ಕರ್ನಾಟಕ ರಾಜ್ಯದ ಮಹದೇವಪುರ ಕ್ಷೇತ್ರದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಸೃಷ್ಟಿಸಿ, ಅವರಿಂದ ಮತದಾನ ಪಡೆದುಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರಕ್ಕೆ ಜನರು ಪ್ರಶ್ನೆ ಮಾಡಬೇಕಾಗಿದೆ. ಇದು ಸಂಪೂರ್ಣ ಪ್ರಜಾಪ್ರಭುತ್ವದ ಕಗ್ಗೊಲೆ. ಆಯೋಗವನ್ನು ತಮ್ಮ ಕೈಗೊಂಬೆಯಾಗಿಸಿಕೊಂಡು ಇಲ್ಲದೇ ಇರುವ ಮತದಾರರನ್ನು ಸೃಷ್ಟಿಸಿ, ಸಾಂವಿಧಾನಿಕ ಮೌಲ್ಯಗಳನ್ನು ಮೂಲೆಗುಂಪು ಮಾಡಿ ಮತಗಳ್ಳತನ ನಡೆಸಿ ಅಧಿಕಾರಕ್ಕೆ ಬಂದಿರುವುದು ಶೋಚನೀಯ. ಚಿಕ್ಕಪೇಟೆಯ ವಾರ್ಡ್‌ನಲ್ಲಿಯೇ ಸಾವಿರಾರು ನಕಲಿ ಮತದಾರರನ್ನು ನಮ್ಮ ಕಾರ್ಯಕರ್ತರು ಗುರುತಿಸಿದ್ದಾರೆ ಎಂದು ಅವರು ನುಡಿದರು.

ನಾವು ನಡೆಸುತ್ತಿರುವ ಮತಗಳ್ಳತನ ‘ವೋಟ್ ಚೋರಿ’ ವಿರುದ್ಧ ನಡೆಯುತ್ತಿರುವ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮವನ್ನು ಯಶ್ವಸಿಯಾಗಿ ನಡೆಸಿ ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ನಿದ್ರೆ ಮಾಡುತ್ತಿರುವ ಅಧಿಕಾರಿಗಳನ್ನು ಎಚ್ಚರಿಸಬೇಕಾಗಿದೆ. ದೇಶಾದ್ಯಂತ ಈ ಸಹಿ ಸಂಗ್ರಹ ನಡೆಯುತ್ತಿದ್ದು ಗಾಂಧಿನಗರ ಕ್ಷೇತ್ರದಿಂದಲೂ ಸುಮಾರು 1 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ ಮಾಡುವ ಗುರಿಯನ್ನು ಹೊಂದಿದೆ. ಎಲ್ಲ ಮತಬಾಂಧವರು ಇದರಲ್ಲಿ ಪಾಲ್ಗೊಂಡು ತಮ್ಮ ತಮ್ಮ ಸಹಿಯನ್ನು ಹಾಕುವ ಮುಖೇನ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ದೇಶವನ್ನು ಮತಗಳ್ಳತನದಿಂದ ರಕ್ಷಿಸೋಣ ಎಂದು ಅವರು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X