Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕ್ಷೇತ್ರ ವಿಂಗಡಣೆಯಲ್ಲಿ ದಕ್ಷಿಣದ...

ಕ್ಷೇತ್ರ ವಿಂಗಡಣೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾದರೆ ರಾಜಕೀಯ ಅಸ್ತಿತ್ವಕ್ಕೆ ಸಂಚಕಾರ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ9 April 2026 8:08 PM IST
share
ಕ್ಷೇತ್ರ ವಿಂಗಡಣೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾದರೆ ರಾಜಕೀಯ ಅಸ್ತಿತ್ವಕ್ಕೆ ಸಂಚಕಾರ: ದಿನೇಶ್ ಗುಂಡೂರಾವ್

ಬೆಂಗಳೂರು : ಕೇಂದ್ರ ಸರಕಾರ ಕ್ಷೇತ್ರ ವಿಂಗಡಣೆ ಮಾಡುವ ಮೂಲಕ ದಕ್ಷಿಣದ ರಾಜ್ಯಗಳಿಗೆ ತಾರತಮ್ಯ ಮಾಡುವುದನ್ನು ಮೊದಲು ನಿಲ್ಲಿಸಬೇಕು. ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡಿದರೆ ಭವಿಷ್ಯದಲ್ಲಿ ನಮ್ಮ ರಾಜ್ಯಗಳ ರಾಜಕೀಯ ಅಸ್ತಿತ್ವಕ್ಕೆ ಸಂಚಕಾರ ಬರಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದಿಲ್ಲಿ ಎಚ್ಚರಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರವು ಮಳೆ ಹಾನಿ ಪರಿಹಾರ, ತೆರಿಗೆ ವಿಷಯಗಳಲ್ಲಿ ನಮಗೆ ಅನ್ಯಾಯವಾಗುತ್ತಿದೆ. ಜನಸಂಖ್ಯೆ ನಿಯಂತ್ರಣ, ಆರ್ಥಿಕ ಪ್ರಗತಿ ಮುಂತಾದವುಗಳಲ್ಲಿ ನಾವು ಮುನ್ನಡೆ ಸಾಧಿಸಿದ್ದೇವೆ. ಇವರು ಜನಸಂಖ್ಯೆ ಆಧಾರದಲ್ಲಿ ತೆರಿಗೆ ಪಾಲು ನೀಡುತ್ತೇವೆ ಎನ್ನುತ್ತಿದ್ದಾರೆ. ಇದರಿಂದ ನಮಗೆ ಅನ್ಯಾಯ ಅಗುವುದರೊಂದಿಗೆ, ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು.

ಬಜೆಟ್‍ನಲ್ಲಿ ಘೋಷಣೆ ಮಾಡುತ್ತಾರೆ, ಹಣ ಬಿಡುಗಡೆ ಮಾಡುವುದಿಲ್ಲ. ಹೀಗೆ ಅವರ ರಾಜ್ಯ ಸರಕಾರಗಳು ತೊಂದರೆಗೆ ಸಿಲುಕುತ್ತದೆ. ಈಗ ಆರ್ಥಿಕ ನಷ್ಟ ಆಗುತ್ತದೆ, ಹೀಗೆ ಮುಂದುವರೆದರೆ ರಾಜಕೀಯವಾಗಿಯೂ ಸಮಸ್ಯೆ ಆಗುತ್ತದೆ. ಮೋದಿಯವರ ಮಾತನ್ನು ನಂಬಿ ಹೋದರೆ ಮುಂದೆ ದಕ್ಷಿಣದ ರಾಜ್ಯಗಳಿಗೆ ಬೆಲೆಯೆ ಇರುವುದಿಲ್ಲ ನೆನಪಿಡಿ ಎಂದು ಅವರು ಎಚ್ಚರಿಸಿದರು.

ಅನಿಲ ಸಮಸ್ಯೆ: ದೇಶದಲ್ಲಿ ಗ್ಯಾಸ್ ಸಮಸ್ಯೆ ಇರುವುದು ನಿಜ. ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಕೇಂದ್ರ ಸರಕಾರ ಸರಿಯಾದ ಮುನ್ನೆಚ್ಚರಿಕೆ ವಹಿಸದೇ ಇರುವುದರಿಂದ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ. ಸಾರಿಗೆ, ಕೈಗಾರಿಕೆಗಳು ತೊಂದರೆಗೆ ಸಿಲುಕಿದೆ. ಫಾರ್ಮಾ ಕಂಪೆನಿಗಳು ತಮಗೆ ಆಗುತ್ತಿರುವ ಸಮಸ್ಯೆ ಕುರಿತು ನನಗೆ ಪತ್ರ ಬರೆದಿದ್ದಾರೆ.

ಔಷಧ ತಯಾರಿಕೆಗೆ ಕಚ್ಚಾ ವಸ್ತುಗಳು ಸಮಯಕ್ಕೆ ಸಿಗುತ್ತಿಲ್ಲ. ಸದ್ಯ ಪೂರೈಕೆಗೆ ಸಮಸ್ಯೆ ಇಲ್ಲ, ಹೀಗೆ ಮುಂದುವರಿದರೆ ಪೂರೈಕೆಗೆ ಕಾಲಾವಕಾಶ ಹೆಚ್ಚಿಸಬೇಕು ಎಂದಿದ್ದಾರೆ. ಈಗಾಗಲೇ ಔಷಧಗಳ ಬೆಲೆ ಹೆಚ್ಚಾಗಿದೆ. ಇದರ ಪರಿಣಾಮ ನೇರವಾಗಿ ಜನಸಾಮಾನ್ಯರ ಮೇಲೆ ಆಗುತ್ತದೆ. ಕೇಂದ್ರವು ಪರ್ಯಾಯ ವ್ಯವಸ್ಥೆ ಮಾಡುವಲ್ಲಿ ವಿಫಲವಾಗಿದೆ. ಯುದ್ಧ ಪ್ರಾರಂಭವಾದ ತಕ್ಷಣ ಕೇಂದ್ರ ಈ ಕುರಿತು ಆಲೋಚಿಸಬೇಕಿತ್ತು. ಈಗ ಪೆಟ್ರೋಲ್, ಕಟ್ಟಿಗೆ ಬಳಸಿ ಎನ್ನುತ್ತಿದ್ದಾರೆ. ಹೋಟೆಲ್, ರೈತರು, ಸಣ್ಣ ವ್ಯಾಪಾರಸ್ಥರು ಎಲ್ಲರೂ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ಟೀಕಿಸಿದರು.

ಅಸ್ಸಾಂ ಸಿಎಂ ಆಡುವ ಮಾತುಗಳನ್ನು ಕೇಳಿದರೆ ವಿಷಕಾರಿ ಅಂತಲೇ ಅನಿಸುವುದಿಲ್ಲವೇ?. ಲಂಗು-ಲಗಾಮು ಇಲ್ಲದೇ ಬೇಕಾಬಿಟ್ಟಿ ಮಾತನಾಡುತ್ತಿದ್ದಾರೆ. ಚುನಾವಣಾ ಆಯೋಗ ಬಿಜೆಪಿ ಅಂಗಸಂಸ್ಥೆಯಂತೆ ಕಾರ್ಯನಿರ್ವಹಿಸುವುದರಿಂದ ಈ ರೀತಿಯಾಗುತ್ತಿದೆ. ಮೋದಿ ಆಡಳಿತದಲ್ಲಿ ಎಲ್ಲ ಸ್ವಾಯತ್ತ ಸಂಸ್ಥೆಗಳ ಸ್ಥಿತಿ ದೇಶದಲ್ಲಿ ಹೇಗಿದೆ ಎಂದು ಜನರಿಗೆ ಗೊತ್ತಾಗಿದೆ. ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ಇವುಗಳ ಅಸ್ತಿತ್ವವನ್ನು ಮೋದಿಯವರು ತಮ್ಮ ಸರ್ವಾಧಿಕಾರಿ ಧೋರಣೆಯಿಂದ ಹಾಳುಮಾಡಿದ್ದಾರೆ ಎಂದು ಅವರು ದೂರಿದರು.

Tags

Dinesh Gundu Rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X