Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಸ್‍ಆರ್ ಅನುದಾನ ಪರಿಣಾಮಕಾರಿ...

ಸಿಎಸ್‍ಆರ್ ಅನುದಾನ ಪರಿಣಾಮಕಾರಿ ಸದ್ಬಳಕೆಗೆ ಆದ್ಯತೆ : ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ3 Feb 2025 8:34 PM IST
share
ಸಿಎಸ್‍ಆರ್ ಅನುದಾನ ಪರಿಣಾಮಕಾರಿ ಸದ್ಬಳಕೆಗೆ ಆದ್ಯತೆ : ದಿನೇಶ್ ಗುಂಡೂರಾವ್

ಬೆಂಗಳೂರು: ಜನಸಾಮಾನ್ಯರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‍ಆರ್) ಅನುದಾನವನ್ನು ಪರಿಣಾಮಕಾರಿಯಾಗಿ ಹಾಗೂ ಸದ್ಬಳಕೆಯಾಗುವ ರೀತಿಯಲ್ಲಿ ಬಳಸಿಕೊಳ್ಳಲು ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಸೋಮವಾರ ನಗರದ ಆರೋಗ್ಯ ಸೌಧದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನವೀಕರಿಸುವ ಮೂಲಕ ಆರೋಗ್ಯ ಸೇವೆಗಳನ್ನು ಬಲಪಡಿಸುವ ಯೋಜನೆಗೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.

ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ರಾಯಚೂರು ಜಿಲ್ಲೆಯಲ್ಲಿ ಒಟ್ಟು 13 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು(ಪಿಎಚ್‍ಸಿ) ಉನ್ನತೀಕರಿಸಲಾಗಿದೆ. ಈ ಪೈಕಿ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪೂರ್ಣಗೊಂಡಿವೆ. ಇವುಗಳನ್ನು ನಾವು ಲೋಕಾರ್ಪಣೆ ಮಾಡಿದ್ದೇವೆ. ಉಳಿದ ಮೂರು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಆರೋಗ್ಯ ಮತ್ತು ಶಿಕ್ಷಣ ಜನರಿಗೆ ಅತ್ಯಂತ ಅಗತ್ಯವಿರುವ ಕ್ಷೇತ್ರಗಳಾಗಿವೆ. ಈ ನಿಟ್ಟಿನಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವಾ ಸೌಲಭ್ಯಗಳನ್ನು ಒದಗಿಸಲು ನಮ್ಮ ಇಲಾಖೆ ಸಿಎಸ್‍ಆರ್ ಯೋಜನೆಯಡಿ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಈಗ ಜಿ.ಇ.ಹೆಲ್ತ್ ಕೇರ್, ಸಿಎಸ್‍ಆರ್ ಬಾಕ್ಸ್, ಭಾರತ್ ಕೇರ್ಸ್ ಸಹಭಾಗಿತ್ವದಲ್ಲಿ ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗಿದ್ದೇವೆ ಎಂದು ಅವರು ತಿಳಿಸಿದರು.

ಸಿಎಸ್‍ಆರ್ ಬಾಕ್ಸ್, ಭಾರತ್ ಕೇರ್ಸ್ ಸಂಸ್ಥೆಯ ಉಪಾಧ್ಯಕ್ಷ ಮನೋವಿರಾಜ್ ಸಿಂಗ್ ಮಾತನಾಡಿ, ಗ್ರಾಮೀಣ ಮತ್ತು ಹಿಂದುಳಿದ ಸಮುದಾಯಗಳಿಗೆ ಸಮಾನವಾದ ಮತ್ತು ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ನಾವು ಸರಕಾರದ ಜೊತೆ ಕೈ ಜೋಡಿಸಿದ್ದೇವೆ ಎಂದು ಹೇಳಿದರು.

ಉನ್ನತೀಕರಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಮುದಾಯದ ಸಂಪರ್ಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಲು ನಾವು ಬದ್ಧರಾಗಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳಿಗೆ ನಾವು ಕೊಡುಗೆ ನೀಡುತ್ತೇವೆ ಎಂದು ಅವರು ತಿಳಿಸಿದರು.

ಜಿಇ ಹೆಲ್ತ್ ಕೇರ್ ಅಧ್ಯಕ್ಷ ಚೈತನ್ಯ ಸಾರವತೆ ಮಾತನಾಡಿ, ದೂರದೃಷ್ಟಿಯ ಯೋಜನೆಗಳನ್ನು ದಶಕಗಳವರೆಗೆ ಅನುಷ್ಠಾನಕ್ಕೆ ತರಲು ನಾವು ಸರಕಾರದೊಂದಿಗೆ ಹೆಜ್ಜೆ ಹಾಕಲಿದ್ದೇವೆ. ಜನರಿಗೆ ಸೇವೆ ಮಾಡಲು ಹಾಗೂ ನಮ್ಮ ಜವಾಬ್ದಾರಿಯನ್ನು ಸಾಕಾರಗೊಳಿಸಲು ಅವಕಾಶ ನೀಡಿರುವ ಆರೋಗ್ಯ ಸಚಿವರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾದ ರಾಯಚೂರು ಬಳಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೌಲಾಸಾಬ್ ಮುದ್ದಾಪುರ ಮಾತನಾಡಿ, ಸಿಎಸ್‍ಆರ್ ಯೋಜನೆಯಡಿ ದೊರೆತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಹಲವಾರು ಪಿಎಚ್‍ಸಿಗಳ ವೈದ್ಯಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X