Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ:...

ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ: ಸಚಿವ ಕೃಷ್ಣಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ28 Dec 2023 10:47 PM IST
share
ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ: ಸಚಿವ ಕೃಷ್ಣಬೈರೇಗೌಡ

ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲ 500 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದ ಕಚೇರಿಯಲ್ಲಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕ ದೀಪಾಶ್ರೀ ಕೆ. ಅವರೊಂದಿಗೆ ಆರ್ಯ ವೈಶ್ಯ ನಿಗಮದ ಡಿಬಿಟಿ ಪ್ರಕ್ರಿಯನ್ನು ಪೂರ್ಣಗೊಳಿಸಿದ ಅವರು, ಈ ಮೂಲಕ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ 500 ಫಲಾನುಭವಿಗಳಿಗೆ 5ಕೋಟಿ ರೂ.ಸಾಲ-ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ಇದೇ ವೇಳೆ ವರ್ಗಾವಣೆ ಮಾಡಿದರು.

ನಂತರ ಮಾತನಾಡಿದ ಅವರು, ‘ಹೊಸ ಉದ್ಯಮಿಗಳಿಗೆ ಹಾಗೂ ಬಡವರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಆರ್ಯ ವೈಶ್ಯ ನಿಗಮವು ಗಮನಾರ್ಹವಾದ ಕೆಲಸ ನಿರ್ವಹಿಸುತ್ತಿದೆ. 1 ಲಕ್ಷ ರೂ.ವರೆಗೆ ವಾರ್ಷಿಕ 4ರ ಕಡಿಮೆ ಬಡ್ಡಿ ದರದಲ್ಲಿ ಹಣ ನೀಡಲಾಗುತ್ತಿದ್ದು, ಎಲ್ಲರೂ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರ್ಯ ವೈಶ್ಯ ನಿಗಮವು 2023-24ನೆ ಸಾಲಿನಲ್ಲಿ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಬಿಡುಗಡೆಯಾದ 10ಕೋಟಿ ರೂ.ಅನುದಾನದಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ ಹಾಗೂ ವಾಸವಿ ಜಲಶಕ್ತಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಸಮಿತಿ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ನವ ಉದ್ಯಮಿಗಳಿಗೆ ಸಹಾಯ ಹಸ್ತ ಚಾಚುವ ಗಮನಾರ್ಹ ಕೆಲಸಕ್ಕೆ ನಿಗಮವು ಮುಂದಾಗಿದೆ ಎಂದು ಸಂಸತ ವ್ಯಕ್ತಪಡಿಸಿದರು.

ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ತಲಾ 20ಸಾವಿರ ರೂ.ಸಹಾಯಧನ ಹಾಗೂ 80ಸಾವಿರ ರೂ. ಸಾಲ ಬಿಡುಗಡೆ ಮಾಡಿದ್ದು, ಫಲಾನುಭವಿಯು ಸಾಲವನ್ನು ಶೇ.4ರಷ್ಟು ಬಡ್ಡಿದರದಲ್ಲಿ ಮರುಪಾವತಿಯನ್ನು ಆಪ್ ಮೂಲಕ ಮರುಪಾವತಿಸಲು ಅವಕಾಶವಿರುತ್ತದೆ. ಆರ್ಯವೈಶ್ಯ ಈ ಸೌಲಭ್ಯವನ್ನು ನೀಡುತ್ತಿರುವ ಏಕೈಕ ನಿಗಮವಾಗಿದ್ದು, ಎಲ್ಲ ಫಲಾನುಭವಿಗಳು ತಮ್ಮ ಇ-ಮೇಲ್‍ನಲ್ಲಿ ಸ್ವಯಂ ಚಾಲಿತ ಸಾಲ ಮಂಜೂರಾತಿ ಆದೇಶ ಪತ್ರವನ್ನು ಪಡೆಯಬಹುದು ಎಂದರು.

ಇಲ್ಲಿಯವರೆಗೂ ನಿಗಮಕ್ಕೆ 4.57 ಕೋಟಿ ರೂ.ಮರುಪಾವತಿ ಮೊತ್ತ ಸ್ವೀಕೃತಿಯಾಗಿದೆ. ಸಾಲ ಪಡೆದಂತಹ ಎಲ್ಲ ಫಲಾನುಭವಿಗಳು ಸಾಲವನ್ನು ಸದುಪಯೋಗ ಪಡಿಸಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಆರ್ಯವೈಶ್ಯ ನಿಗಮವು ರಾಜ್ಯದಲ್ಲೇ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಡಿಬಿಟಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಮೊದಲ ನಿಗಮವಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X