ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಮೋಹನ್ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ನಿರ್ದೇಶಕ ಎಸ್.ಮುರಳಿ ಮೋಹನ್ ಇಂದು(ಆ.13) ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ಜೆಸಿ ರಸ್ತೆಯಲ್ಲಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಮುರಳಿ ಮೋಹನ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಐದಾರು ವರ್ಷಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಇಂದು (ಆ.13) ನಿರ್ದೇಶಕ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ.
ನಟ ಶಿವರಾಜ್‌ಕುಮಾರ್ ಅಭಿನಯದ ‘ಸಂತ’, ರವಿಚಂದ್ರನ್ ನಟನೆ ‘ಮಲ್ಲಿಕಾರ್ಜುನ’ ಸಿನಿಮಾಗಳಿಗೆ ಮುರಳಿ ಮೋಹನ್ ಅವರು ನಿರ್ದೇಶನ ಮಾಡಿದ್ದರು.
Next Story





