ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರಿಗೆ ಅಧಿಕಾರ ಪುನಃ ಸ್ಥಾಪನೆ

ಆಡಳಿತಾಧಿಕಾರಿ ಕಾರ್ಯವೈಖರಿ ದೂರು ಇದ್ದ ಕಾರಣ ಸರಕಾರಿದಂದ ಆದೇಶ
ಬೆಂಗಳೂರು: ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸಂಪೂರ್ಣ ಜವಾಬ್ದಾರಿ ಹಾಗೂ ಅಧಿಕಾರವನ್ನು ನಿರ್ದೇಶಕರಿಗೆ ಪುನಃ ಸ್ಥಾಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮಂಗಳವಾರ ವೈದ್ಯಕೀಯ ಶಿಕ್ಷಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಾಲಪ್ಪ ಆದೇಶ ಹೊರಡಿಸಿದ್ದು, ಸಂಸ್ಥೆಯಲ್ಲಿ ನಡೆದಿದ್ದ ಅವ್ಯವಹಾರ ಹಾಗೂ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆಗೆ ನೇಮಿಸಲಾಗಿದ್ದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರಕಾರ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿದೆ.
ಆಡಳಿತಾಧಿಕಾರಿಗಳಾಗಿ ನೇಮಕಗೊಂಡಿದ್ದ ಅಧಿಕಾರಿಗಳಿಗೆ ನೀಡಲಾಗಿದ್ದ ಎಲ್ಲ ಜವಾಬ್ದಾರಿಗಳನ್ನು ಹಿಂಪಡೆಯಲಾಗಿದೆ. ಆಡಳಿತಾತ್ಮಕ ವಿಷಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಿಬ್ಬಂದಿ ಸೇವಾ ವಿಷಯ, ಹಣಕಾಸು ನಿರ್ವಹಣೆ, ಸಂಗ್ರಹಣೆ, ಖರೀದಿ, ಮಾನವ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಎಲ್ಲ ಜವಾಬ್ದಾರಿಯನ್ನು ಈ ಹಿಂದೆ ಇದ್ದರಂತೆ ಸಂಸ್ಥೆಯ ನಿರ್ದೇಶಕರಿಗೆ ಪುನಃ ಸ್ಥಾಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story





