ಕೆಎಸ್ಸಾರ್ಟಿಸಿ ಪ್ರತಿಷ್ಠಿತ ಸಾರಿಗೆಗಳ ಪ್ರಯಾಣ ದರಗಳಲ್ಲಿ ರಿಯಾಯಿತಿ

ಸಾಂದರ್ಭಿಕ ಚಿತ್ರ | PC : x/@RLR_BTM
ಬೆಂಗಳೂರು : ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿಯ ಪ್ರತಿಷ್ಠಿತ ಸಾರಿಗೆಗಳ ಪ್ರಯಾಣ ದರಗಳಲ್ಲಿ ಶೇ.5 ರಿಂದ ಶೇ.15ರವರೆಗೆ ರಿಯಾಯಿತಿ ನೀಡಲಾಗಿದೆ.
ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ, ಬೆಂಗಳೂರು-ಶಿವಮೊಗ್ಗ/ಸಾಗರ, ಬೆಂಗಳೂರು-ಚೆನ್ನೈ, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪೂನಾ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ತಿಶ್ರೂರು ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣ ದರಗಳಲ್ಲಿ ರಿಯಾಯಿತಿ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





