ಜಾತಿ ಗಣತಿ ವರದಿ ಕುರಿತು ಚರ್ಚೆ: ಗುರುವಾರ ವಿಶೇಷ ಸಂಪುಟ ಸಭೆ

File Photo
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ(ಜಾತಿ ಗಣತಿ)ಯ ದತ್ತಾಂಶಗಳ ಕುರಿತ ವರದಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಜಾತಿ ಗಣತಿಯ ಮರು ಸಮೀಕ್ಷೆ ಕುರಿತು ನಿರ್ಧರಿಸಿರುವ ಮುಖ್ಯಮಂತ್ರಿ, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಮರು ಸಮೀಕ್ಷೆಯ ರೂಪು ರೇಷೆಗಳ ಕುರಿತು ಸಮಾಲೋಚನೆ ನಡೆಸಿ, ಸಂಪುಟ ಸಭೆಯ ಅನುಮೋದನೆಯನ್ನು ಪಡೆದುಕೊಳ್ಳಲಿದ್ದಾರೆ.
Next Story





