Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ತಿಗೆ...

ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ11 Aug 2024 8:37 PM IST
share
ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ : ಡಿ.ಕೆ.ಶಿವಕುಮಾರ್

ಕೊಪ್ಪಳ : ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೆ ಕ್ರೆಸ್ಟ್ ಗೇಟನ್ನು ದುರಸ್ತಿ ಮಾಡಲು ಅನುಭವವುಳ್ಳ ಉನ್ನತ ಮಟ್ಟದ ತಜ್ಞರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ರವಿವಾರ ಜಲಾಶಯಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ನೀರಾವರಿ ನಿಗಮದಲ್ಲಿಯೂ ಉತ್ತಮ ತಂತ್ರಜ್ಞರಿದ್ದಾರೆ. ಅಲ್ಲದೆ, ಗುತ್ತಿಗೆದಾರ ಸಂಸ್ಥೆಗಳಾದ ಕೃಷ್ಣಯ್ಯ, ನಾರಾಯಣ ಹಾಗೂ ಹಿಂದುಸ್ಥಾನ್ ಸಂಸ್ಥೆಯ ತಂಡಗಳು ಈಗಾಗಲೇ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ತಂತ್ರಜ್ಞರಿಗೆ ಈಗಾಗಲೇ ಅಣೆಕಟ್ಟಿನ ವಿನ್ಯಾಸ ನಕ್ಷೆ ನೀಡಲಾಗಿದೆ ಎಂದು ಹೇಳಿದರು.

ಶನಿವಾರ ರಾತ್ರಿ ಜಲಾಶಯದ 10 ಗೇಟ್‍ಗಳನ್ನು ತೆರೆಲಾಗಿತ್ತು. ಏಕಾಏಕಿ ಜಲಾಶಯದ 19ನೆ ಗೇಟಿನ ಚೈನ್ ಲಿಂಕ್ ತುಂಡಾದ ಹಿನ್ನೆಲೆ ಎಲ್ಲ ಗೇಟ್ ತೆರೆದು ಅಣೆಕಟ್ಟಿನ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ. ಸದ್ಯ ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ. 19ನೆ ಗೇಟ್ ಒಂದರಲ್ಲಿಯೇ 35ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ ಎಂದು ಅವರು ಅಭಯ ನೀಡಿದರು.

ನೀರನ್ನು ಉಳಿಸುತ್ತೇವೆ: ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಗೇಟನ್ನು ಮತ್ತೆ ಹಾಕಬೇಕೆಂದರೆ ಒತ್ತಡ ಕಡಿಮೆ ಮಾಡಬೇಕಿದೆ. ಜಲಾಶಯದಲ್ಲಿ 150ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಜಲಾಶಯಕ್ಕೆ ಒಳಹರಿವು 28ಸಾವಿರ ಕ್ಯೂಸೆಕ್ಸ್ ಇದೆ. ಕನಿಷ್ಠ ನಮ್ಮ ರೈತರಿಗೆ ಒಂದು ಬೆಳೆಗಾದರೂ ಒದಗಿಸುವಷ್ಟು ನೀರನ್ನು ಉಳಿಸಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.

ಅಣೆಕಟ್ಟಿನ ಪ್ರಮುಖ ಮೂರು ಕಾಲುವೆಗಳಿಗೆ ನೀರನ್ನು ಹರಿಸಲು 115 ಟಿಎಂಸಿ ನೀರಿನ ಅವಶ್ಯಕತೆ ಇದೆ. ಇದೆಲ್ಲವನ್ನು ಲೆಕ್ಕಾಚಾರ ಹಾಕಿ ರೈತರನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ನೆರೆ ರಾಜ್ಯಗಳಿಗೆ ಈಗಾಗಲೇ 25ಟಿಎಂಸಿ ನೀರನ್ನು ಕೊಡಲಾಗಿದೆ. ಇನ್ನೂ 90 ಟಿಎಂಸಿ ನೀರನ್ನು ಕೊಡಬೇಕಾಗಿದೆ. ಮೂರು ರಾಜ್ಯಗಳು ಒಟ್ಟಿಗೆ ಸೇರಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದರು.

ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಈ ಮೂರು ರಾಜ್ಯಗಳ ರೈತರಿಗೆ ಮುಖ್ಯವಾದ ಜಲಾಶಯ ಇದಾಗಿದೆ. ನಮ್ಮ ಕರ್ನಾಟಕದ 12ಲಕ್ಷ ಹೆಕ್ಟರ್ ಅಚ್ಚುಕಟ್ಟು ಪ್ರದೇಶವನ್ನು ಇದು ಹೊಂದಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಸೇರಿದಂತೆ ಅನೇಕ ಜಿಲ್ಲೆಗಳು ಇದರಿಂದ ಲಾಭ ಪಡೆಯುತ್ತಿವೆ. ನಮ್ಮ ರೈತರು ಆತಂಕ ಪಡಬೇಕಾಗಿಲ್ಲ ಸರಕಾರ ನಿಮ್ಮ ಜೊತೆಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X