Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಂಚಮಸಾಲಿ ಮೀಸಲಾತಿ ವಿಚಾರ | ಯಾವುದೇ...

ಪಂಚಮಸಾಲಿ ಮೀಸಲಾತಿ ವಿಚಾರ | ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ಸರಕಾರದ ಉದ್ದೇಶ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Oct 2024 8:53 PM IST
share
ಪಂಚಮಸಾಲಿ ಮೀಸಲಾತಿ ವಿಚಾರ | ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ಸರಕಾರದ ಉದ್ದೇಶ : ಡಿ.ಕೆ.ಶಿವಕುಮಾರ್

ಬೆಂಗಳೂರು : ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು, ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶುಕ್ರವಾರ ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಪ್ರಮಾಣಪತ್ರ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಶಿವಕುಮಾರ್ ತಿಳಿಸಿದರು.

ಈಗ ಚುನಾವಣಾ ನೀತಿ ಸಂಹಿತೆ ಇದೆ. ಚುನಾವಣೆ ಬಳಿಕ ಸಭೆ ಕರೆದು ಮಾತನಾಡುತ್ತೇವೆ ಎಂದು ಸಮುದಾಯದ ಮುಖಂಡರಿಗೆ ಗೌರವಯುತವಾಗಿ ಹೇಳಿದ್ದೇವೆ ಅವರ ಭಾವನೆ, ಕಳಕಳಿ ನಮಗೆ ಅರ್ಥವಾಗುತ್ತದೆ. ಮುಂದಿನ ದಿನಗಳಲ್ಲಿ ನಾವು ಅವರ ವಿಚಾರವನ್ನು ಪರಿಗಣಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಕುಮಾರಸ್ವಾಮಿ ನಮ್ಮ ವಿರುದ್ಧ ದಾಖಲೆ ಹುಡುಕುತ್ತಿದ್ದಾರೆ:

ಕುಮಾರಸ್ವಾಮಿ ಎಸ್‍ಐಟಿಯನ್ನು ಶಿವಕುಮಾರ್ ತನಿಖಾ ಸಂಸ್ಥೆ ಎಂದು ಟೀಕಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ನನ್ನನ್ನು ಸ್ಮರಿಸುತ್ತಿರಬೇಕು. ಇಲ್ಲದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ. ಅವರು ಹಾಗೂ ಅವರ ಸಹೋದರರು ನನ್ನ ಸ್ಮರಿಸುತ್ತಲೇ ಇರುತ್ತಾರೆ. ಅವರು ನನ್ನ ದಾಖಲೆಗಳನ್ನು ಹುಡುಕುತ್ತಿದ್ದಾರೆ. ನನ್ನ ಎಲ್ಲ ದಾಖಲೆಗಳು ಈಡಿ, ಸಿಬಿಐ ಬಳಿ ಇವೆ. ಹೊಸದಾಗಿ ಹುಡುಕುವುದೇನಿಲ್ಲ. ಅವರು ನನಗೆ ಕೇಳಿದ್ದರೆ ನಾನೇ ಅವರಿಗೆ ನನ್ನ ದಾಖಲೆಗಳನ್ನು ಒದಗಿಸುತ್ತಿದ್ದೆ ಎಂದರು.

ಈಡಿ ದಾಖಲೆ ಕೇಳುತ್ತಿರಬಹುದು:

ಮುಡಾ ಪ್ರಕರಣದಲ್ಲಿ ಹಣಕಾಸು ವ್ಯವಹಾರ ಇಲ್ಲವಾದರೂ ಈಡಿ ನಡೆಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಈಡಿ ಅವರು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ. ದಾಖಲೆ ಪರಿಶೀಲನೆ ಮಾಡಬಹುದು. ಅದಕ್ಕಿಂತ ಹೆಚ್ಚಾಗಿ ಇನ್ನೇನು ಮಾಡಲು ಸಾಧ್ಯ? ದಾಖಲೆಗಳನ್ನು ಹೊಸದಾಗಿ ತಿದ್ದಲು ಸಾಧ್ಯವೇ? ಪ್ರಕರಣದ ಎಲ್ಲ ದಾಖಲೆಗಳು ಸಾರ್ವಜನಿಕವಾಗಿವೆ. ನಾವು ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ವಾಸ್ತವಾಂಶ ಜನರ ಮುಂದಿಡುತ್ತೇವೆ ಎಂದರು.

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಕೇಳಿದಾಗ, ನಾನೇ ಅಭ್ಯರ್ಥಿ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಹಸ್ತದ ಗುರುತೇ ಅಭ್ಯರ್ಥಿ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X