Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ...

ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ13 Jan 2025 9:24 PM IST
share
ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್

ಬೆಂಗಳೂರು : ಸಂಘಟನೆಗಾಗಿ ನಮ್ಮ ಪಕ್ಷ ಹಾಗೂ ಸರಕಾರ ಇಡೀ ದಿನ ಮುಡಿಪಾಗಿಟ್ಟು ಸಭೆ ನಡೆಸಲಾಗಿದೆ. ಈ ವರ್ಷ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದ ಭಾರತ ಜೋಡೋ ಸಭಾಂಗಣದಲ್ಲಿ ಪಕ್ಷದ ಶಾಸಕರು, ಸಚಿವರು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಬೆಳಗ್ಗೆ 12 ಗಂಟೆಗೆ ಶಾಸಕರು, ಮಂತ್ರಿಗಳು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪ್ರಮುಖ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಭೆ ಮಾಡಿದ್ದೇವೆ. ಗಾಂಧಿ ಭಾರತದ ಕಾರ್ಯಕ್ರಮ ಅಂಗವಾಗಿ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಕಳೆದ ವರ್ಷದ ಡಿ.27 ರಂದು ನಡೆಯಬೇಕಾಗಿದ್ದ ಎಐಸಿಸಿಯ ಸಮಾವೇಶವನ್ನು ಮುಂದೂಡಲಾಗಿತ್ತು. ಈ ಸಮಾವೇಶವನ್ನು ಇದೇ ತಿಂಗಳು 21ರಂದು ಬೆಳಗಾವಿಯಲ್ಲೇ ನಡೆಸಲಾಗುವುದು. ಈ ಸಮಾವೇಶದ ಪೂರ್ವಭಾವಿ ಸಭೆಯನ್ನು ನಡೆಸಿ ನಮ್ಮ ನಾಯಕರಿಗೆ ನೀಡಲಾಗಿರುವ ಜವಾಬ್ದಾರಿಗಳ ಬಗ್ಗೆ ಮಾರ್ಗದರ್ಶನ ನೀಡಿದ್ದೇವೆ ಎಂದು ಶಿವಕುಮಾರ್ ಹೇಳಿದರು.

224 ಕ್ಷೇತ್ರಗಳಿಂದ ಕನಿಷ್ಠ ಪಕ್ಷದ ನೂರು ಜನ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಬೇಕು ಎಂದು ಹೇಳಿದ್ದೇವೆ. ಈ ಐತಿಹಾಸಿಕ ಸಭೆಗೆ ಎಲ್ಲರೂ ಆಗಮಿಸಬೇಕು ಎಂದು ಆಹ್ವಾನ ನೀಡುತ್ತೇನೆ. ನಾವು ಈ ಸಮಾವೇಶಕ್ಕೆ ನೇಮಿಸಿದ್ದ ಸಮಿತಿಗಳು ತಮ್ಮ ಕಾರ್ಯ ನಿರ್ವಹಣೆ ಮಾಡಲಿವೆ ಎಂದು ಅವರು ತಿಳಿಸಿದರು.

ನಮ್ಮ ಎಲ್ಲ ಪದಾಧಿಕಾರಿಗಳು ಇದೇ 15 ಹಾಗೂ 16ರಂದು ಎಲ್ಲ ಕ್ಷೇತ್ರಗಳಿಗೆ ಪ್ರವಾಸ ಮಾಡಿ ಈ ಸಮಾವೇಶದ ಪೂರ್ವಭಾವಿ ಸಭೆ ಮಾಡಲು ಸೂಚಿಸಿದ್ದೇವೆ. ಕಿತ್ತೂರು ಕರ್ನಾಟಕ ಭಾಗಕ್ಕೆ ನಮ್ಮ ಸಚಿವರು ಹಾಗೂ ಶಾಸಕರು ವಿಧಾನಸಭಾ ಕ್ಷೇತ್ರಗಳಿಗೆ ಹೋಗಿ ಪೂರ್ವಭಾವಿ ಸಭೆ ನಡೆಸಲು ಸೂಚಿಸಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶಕ್ಕೆ ನಮ್ಮ ಸಿದ್ಧತೆ ಆರಂಭವಾಗಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ವರ್ಷ ಪಕ್ಷದ ಸಂಘಟನೆ ಮಾಡಬೇಕು ಎಂದು ತೀರ್ಮಾನಿಸಿರುವ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬ್ಲಾಕ್, ಪಕ್ಷದ ಪ್ರಮುಖ ಘಟಕಗಳು, ಜಿಲ್ಲಾ ಕಾಂಗ್ರೆಸ್, ವಿಧಾನಸಭಾ ಕ್ಷೇತ್ರ, ಜಿಲ್ಲಾ ಹಾಗೂ ಲೋಕಸಭಾ ಕ್ಷೇತ್ರ ಹಂತಗಳಲ್ಲಿ ಹೊಸ ಸಮಿತಿ ರಚಿಸಬೇಕು ಎಂದು ಅವರು ಹೇಳಿದರು.

ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಪಂಚಾಯ್ತಿಯಿಂದ ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಿ ಪಕ್ಷ ಬಲವರ್ಧನೆಗೆ ಹೊಸರೂಪ ನೀಡಬೇಕು ಎಂದು ತೀರ್ಮಾನಿಸಲಾಗಿದೆ. ಉದಯಪುರ ಘೋಷಣೆಯಂತೆ ಕಾರ್ಯನಿರ್ವಹಣೆಗೆ ಸೂಚಿಸಲಾಗಿದೆ. ಇಂದು ನಡೆಸಿದ ಸಭೆಯಲ್ಲಿ ಯಾರಿಗೆ ಯಾವ ಜವಾಬ್ದಾರಿ ನೀಡಲಾಗಿದೆ ಅದನ್ನು ನಿಭಾಯಿಸಬೇಕು. ಯಾರಿಗೆಲ್ಲ ಬೇರೆ ಜವಾಬ್ದಾರಿ ಇದೆಯೋ ಅವರಿಗೆ ವಿಶ್ರಾಂತಿ ನೀಡಬೇಕು. ಈ ಬಗ್ಗೆ ವರದಿ ನೀಡುವಂತೆ ಹೇಳಿದ್ದೇನೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವನ್ನು ನಾವು ಕೂಲಂಕಶವಾಗಿ ಪರಿಶೀಲಿಸುತ್ತಿದ್ದು, ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ತಿಳಿಸಿದರು.

ಸಚಿವರ ಕಾರ್ಯಗಳ ಬಗ್ಗೆ ಹೈಕಮಾಂಡ್‍ಗೆ ವರದಿ ಸಲ್ಲಿಕೆ ಮಾಡಿದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಸಚಿವರ ಕಾರ್ಯಗಳ ವಿಚಾರವಾಗಿ ಮುಖ್ಯಮಂತ್ರಿ ಹೈಕಮಾಂಡ್ ಗೆ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಎಐಸಿಸಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X