Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇನ್ವೆಸ್ಟ್ ಕರ್ನಾಟಕ 2025 | ಬಂಡವಾಳ...

ಇನ್ವೆಸ್ಟ್ ಕರ್ನಾಟಕ 2025 | ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ14 Feb 2025 4:38 PM IST
share
ಇನ್ವೆಸ್ಟ್ ಕರ್ನಾಟಕ 2025 | ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಭಾಗವಹಿಸಿ ಮಾತನಾಡಿದರು.

“ಕಳೆದ ನಾಲ್ಕು ದಿನಗಳಲ್ಲಿ ಈ ಸಮಾವೇಶದಲ್ಲಿ ಅನೇಕ ಒಪ್ಪಂದಗಳು, ಚರ್ಚೆಗಳು ನಡೆದಿವೆ. ನೀವೆಲ್ಲರೂ ಕರ್ನಾಟಕ ರಾಜ್ಯದಲ್ಲಿ ಸೋಲುವ ಮಾತಿಲ್ಲ. ಹೀಗಾಗಿ ಈ ರಾಜ್ಯದ ಮೇಲೆ ನೀವು ವಿಶ್ವಾಸವಿಡಬಹುದು. ಈ ರಾಜ್ಯಕ್ಕೆ ಬಂದವರು ಬರಿಗೈಯಲ್ಲಿ ಹೋಗುವುದಿಲ್ಲ. ಈ ಸಮಾವೇಶದಲ್ಲಿ ಭಾಗವಹಿಸಿದ ಸಜ್ಜನ್ ಜಿಂದಾಲ್, ಆನಂದ್ ಮಹೀಂದ್ರಾ ಅವರ ಮಾತು ಕೇಳಿದ್ದೀರಿ. ಅವರ ಯೋಶೋಗಾಥೆ ಕೇಳಿದ್ದೀರಿ. ಇವರ ಮಾತು ಕೇಳಿದ ನಂತರ ವಿಶ್ವವು ಭಾರತವನ್ನು ಬೆಂಗಳೂರು ಹಾಗೂ ಕರ್ನಾಟಕದ ಮೂಲಕ ನೋಡುತ್ತಿದೆ” ಎಂದು ತಿಳಿಸಿದರು.

“ದೇಶದ ಭವಿಷ್ಯಕ್ಕಾಗಿ ನೀವು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು. ಇದು ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಮಾತ್ರವಲ್ಲ, ಬೆಂಗಳೂರಿನ ಹೊರತಾಗಿ ಪ್ರಗತಿ ಸಾಧಿಸಲು ನಾವು ಗುರಿ ಹೊಂದಿದ್ದೇವೆ. ನಮ್ಮ ರಾಜ್ಯದಲ್ಲಿ ಏರೋಸ್ಪೇಸ್ ಕ್ಷೇತ್ರದಲ್ಲಿ ನಮ್ಮ ಎಂಎಸ್ಎಂಇಗಳು ದೊಡ್ಡ ಶಕ್ತಿ ತುಂಬುತ್ತಿವೆ. ಬಾಹ್ಯಾಕಾಶ ಕ್ಷೇತ್ರದ ಸಾಧನೆಗೆ ರಾಕೆಟ್ ಗಳನ್ನು ನಮ್ಮ ಪೀಣ್ಯ ಕೈಗಾರಿಕಾ ಪ್ರದೇಶದಲ್ಲೇ ತಯಾರು ಮಾಡಿದ್ದೆವು” ಎಂದರು.

“ನೆಹರೂ ಅವರ ಕಾಲದಿಂದ ದೊಡ್ಡ ಕೈಗಾರಿಕೆಗಳು ಆರಂಭವಾಗಿ ದೊಡ್ಡ ಮಟ್ಟಕ್ಕೆ ಬೆಳೆದಿವೆ. ದೇಶದ ದೊಡ್ಡ ಕಂಪನಿಗಳು ನಮ್ಮ ರಾಜ್ಯದ ನೀತಿಗಳು, ಸ್ನೇಹ ಸಂಬಂಧವನ್ನು ಮೆಚ್ಚಿ ನಮ್ಮ ರಾಜ್ಯಕ್ಕೆ ಬಂದಿದ್ದಾರೆ. ನಾವೆಲ್ಲರೂ ಒಟ್ಟಾಗಿ ಸೇರಿ ಭವಿಷ್ಯದತ್ತ ಹೆಜ್ಜೆ ಹಾಕೋಣ. ಈ ಸಮಾವೇಶದ ಮೂಲಕ ರಾಜ್ಯಕ್ಕೆ 10 ಲಕ್ಷ ಕೋಟಿ ಗುರಿ ಹೊಂದಿದೆ. ನಮ್ಮ ನೂತನ ಕೈಗಾರಿಕಾ ನೀತಿಯು ಬೆಂಗಳೂರಿನ ಹೊರತಾಗಿ ರಾಜ್ಯದ ಇತರ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದೆ” ಎಂದು ಭರವಸೆ ನೀಡಿದರು.

“ಸಚಿವ ಎಚ್.ಕೆ ಪಾಟೀಲ್ ಅವರ ನೇತೃತ್ವದಲ್ಲಿ ನಮ್ಮ ಸರಕಾರ ಪ್ರವಾಸೋದ್ಯಮ ನೀತಿ ಪ್ರಕಟಿಸಿದೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ನವೀನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ 300 ಕಿ.ಮೀ ಕರಾವಳಿ ಪ್ರದೇಶವಿದ್ದು, ಈ ಭಾಗದಲ್ಲಿ ನಮ್ಮ ಐತಿಹಾಸಿಕ ಸ್ಥಳಗಳನ್ನು ಉಳಿಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಕರ್ನಾಟಕ ರಾಜ್ಯ ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಈ ಸಮಾವೇಶ ನಮ್ಮ ರಾಜ್ಯ ಜಾಗತಿಕ ಮಟ್ಟದಲ್ಲಿ ವ್ಯಾಪಾರ ವ್ಯವಹಾರ ಮಾಡುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ನಾವು ದೇಶದ ಇತರೆ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಇದು ನಮ್ಮ ಸಾಮರ್ಥ್ಯ” ಎಂದು ತಿಳಿಸಿದರು.

“ಈ ದೇಶದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭಿಸಿದ್ದೆ ಎಸ್.ಎಂ ಕೃಷ್ಣ ಅವರ ಸರಕಾರ ಕರ್ನಾಟಕದಲ್ಲಿ. ಈ ಸಮಾವೇಶ ಕೇವಲ ಆರಂಭವಷ್ಟೇ, ಇಲ್ಲಿಂದ ನಿಮಗೆ ಅವಕಾಶಗಳು ತೆರೆದುಕೊಳ್ಳಲು ಆರಂಭವಾಗುತ್ತವೆ. ವರ್ಷದ 365 ದಿನಗಳು ಕೂಡ ನಿಮಗಾಗಿ ನಾವು ಬಾಗಿಲು ತೆರೆದಿರುತ್ತೇವೆ. ನೀವು ಯಾವಾಗ ಬಂದರೂ ನಾವು ನಿಮಗೆ ಅಗತ್ಯ ನೆರವು ನೀಡಿ ನಿಮ್ಮ ಪ್ರಗತಿ, ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ. ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ಈ ಸಮಾವೇಶ ಯಶಸ್ವಿಯಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X