Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು | ಸುರಂಗ ಮಾರ್ಗ ನಿರ್ಮಾಣಕ್ಕೆ...

ಬೆಂಗಳೂರು | ಸುರಂಗ ಮಾರ್ಗ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್: ಡಿ.ಕೆ.ಶಿವಕುಮಾರ್

‘ಟೆಂಡರ್ ಕರೆಯುವ ಮುನ್ನ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ’

ವಾರ್ತಾಭಾರತಿವಾರ್ತಾಭಾರತಿ24 May 2025 6:56 PM IST
share
ಬೆಂಗಳೂರು | ಸುರಂಗ ಮಾರ್ಗ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್: ಡಿ.ಕೆ.ಶಿವಕುಮಾರ್

ಬೆಂಗಳೂರು : ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶನಿವಾರ ವಿಧಾನಸೌಧದಲ್ಲಿ ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲ ಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರಕಾರದ ಮುಖ್ಯ ಕಾರ್ಯದರ್ಶಿ, ಜಿಬಿಎ ಮುಖ್ಯ ಆಡಳಿತಾಧಿಕಾರಿ ಈ ಸಭೆ ಮಾಡಿದ್ದೇವೆ. ಅಲ್ಲದೇ, ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದು ಶಿವಕುಮಾರ್ ಹೇಳಿದರು.

ಕಸ ವಿಲೇವಾರಿಗೆ ಸ್ವಚ್ಛ ಬೆಂಗಳೂರು ಕಾರ್ಯಕ್ರಮ: ಬೆಂಗಳೂರಿನ ಕಸ ವಿಲೇವಾರಿ ವಿಚಾರವಾಗಿ ದೊಡ್ಡ ಕ್ಷೇತ್ರಗಳಲ್ಲಿ ಎರಡರಂತೆ ಪ್ರತಿಯೊಂದು ಕ್ಷೇತ್ರಕ್ಕೆ ಒಂದೊಂದರಂತೆ ಒಟ್ಟು 33 ಪ್ಯಾಕೇಜ್ ಗಳನ್ನು ಕರೆಯಲು ತೀರ್ಮಾನಿಸಿದ್ದೇವೆ. ಸುಮಾರು 4 ಸಾವಿರ ಕೋಟಿ ರೂ. ಮೊತ್ತದ ಈ ಯೋಜನೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಏಳು ವರ್ಷಗಳ ಅವಧಿಗೆ ಟೆಂಡರ್ ಕರೆಯಲಾಗುತ್ತಿದೆ ಎಂದು ಅವರು ತಿಳಿಸಿದರು.

ಸ್ವಚ್ಛ ಬೆಂಗಳೂರು ಕಾರ್ಯಕ್ರಮದ ಮೂಲಕ ಬೆಂಗಳೂರಿನ ಎಲ್ಲ ಭಾಗಗಳಲ್ಲಿ ಇರುವ ಕಟ್ಟಡ ತ್ಯಾಜ್ಯ ಹಾಗೂ ಇತರೆ ಕಸವನ್ನು ಒಮ್ಮೆಲೇ ಸ್ವಚ್ಛ ಮಾಡಲು ತೀರ್ಮಾನಿಸಲಾಗಿದೆ. ನಾಗರಿಕರು ಕೂಡ ಈ ಕಾರ್ಯಕ್ರಮದಲ್ಲಿ ಕೈಜೋಡಿಸಿ, ಎಲ್ಲೆಲ್ಲಿ ಕಸ ಇದೆ ಎಂದು ಜಿಬಿಎ ಅಧಿಕಾರಿಗಳಿಗೆ ಆಪ್ ಅಥವಾ ನೀಡಲಾಗುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದರೆ, ಅಲ್ಲಿರುವ ಕಸವನ್ನು ತೆಗೆಯಲಾಗುವುದು. ಇದಕ್ಕಾಗಿ ಅಧಿಕಾರಿಗಳು, ಮಾರ್ಷಲ್ ಗಳನ್ನು ನಿಯೋಜಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಶೀಘ್ರವೇ ಟೆಂಡರ್: ಕಾವೇರಿ ಆರತಿ ನಮ್ಮ ರಾಜ್ಯದ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಲಿದೆ. ಕೊಡಗು, ಮಲೆನಾಡು, ಕರಾವಳಿ, ಬೆಂಗಳೂರು ಭಾಗದ ಆಚರಣೆ, ಈ ಭಾಗದ ಮಠಗಳನ್ನು ಒಳಗೊಂಡು ಈ ಕಾರ್ಯಕ್ರಮದ ವಿಧಾನ ರೂಪಿಸಲಾಗುವುದು. ವಾರಾಂತ್ಯದ 3 ದಿನಗಳ ಕಾಲ ಈ ಕಾರ್ಯಕ್ರಮ ನಡೆಯಬೇಕು ಎಂದು ಆಲೋಚಿಸುತ್ತಿದ್ದೇನೆ. ಪೂಜಾ ಕಾರ್ಯದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಗುವುದು. ಇದಕ್ಕಾಗಿ ಕಾವೇರಿ ನಿಗಮದಲ್ಲಿ 92 ಕೋಟಿ ರೂ. ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇದರ ಜತೆಗೆ ಇಂಧನ ಇಲಾಖೆ, ಲೋಕೋಪಯೋಗಿ, ಪ್ರವಾಸೋದ್ಯಮ, ಧಾರ್ಮಿಕ ದತ್ತಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೂ ಈ ಕಾರ್ಯಕ್ರಮಕ್ಕೆ ಕೈ ಜೋಡಿಸಲಿದೆ. ಈ ಕಾರ್ಯಕ್ರಮದ ಸಾರ್ವಜನಿಕ ವೀಕ್ಷಣೆಗಾಗಿ 10 ಸಾವಿರ ಆಸನಗಳ ಗ್ಯಾಲರಿಯ ವಿನ್ಯಾಸ ಕೂಡ ಸಿದ್ಧವಾಗಿದೆ. ಈ ಕಾರ್ಯಕ್ರಮಕ್ಕೆ ಅತ್ಯುತ್ತಮ ಗೀತೆ ರಚನೆಗೆ ಆಹ್ವಾನ ನೀಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಈ ಕಾರ್ಯಕ್ರಮ ದಕ್ಷಿಣ ಭಾರತದ ಕಾರ್ಯಕ್ರಮವಾಗಲಿದೆ. ಕಾವೇರಿ ನದಿ ಹರಿಯುವ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು. ಈ ಎಲ್ಲ ವಿಚಾರಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬಹುತೇಕ ಎಲ್ಲ ನೀಲನಕ್ಷೆಗಳು ಸಿದ್ಧವಾಗಿವೆ. ಇವು ಪೂರ್ಣಗೊಂಡ ನಂತರ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.

ಹರಿಯುವ ನೀರಿನಲ್ಲಿ ಈ ಕಾರ್ಯಕ್ರಮದ ವೇದಿಕೆ ನಿರ್ಮಿಸಲಾಗುವುದು. ಈ ವೇದಿಕೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X