Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಾನು ಮುಸ್ತಾಕ್‌ ರಿಂದ ದಸರಾ ಉದ್ಘಾಟನೆ...

ಬಾನು ಮುಸ್ತಾಕ್‌ ರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ಗೆ ಅರ್ಜಿ; ಬದುಕಿದ್ದೇವೆಂದು ತೋರಿಸಿಕೊಳ್ಳುವ ಪ್ರಯತ್ನ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Sept 2025 3:40 PM IST
share
ಬಾನು ಮುಸ್ತಾಕ್‌ ರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ಗೆ ಅರ್ಜಿ; ಬದುಕಿದ್ದೇವೆಂದು ತೋರಿಸಿಕೊಳ್ಳುವ ಪ್ರಯತ್ನ: ಡಿ.ಕೆ.ಶಿವಕುಮಾರ್
"ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು"

ಬೆಂಗಳೂರು, ಸೆ. 07: "ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ರವಿವಾರ ಪ್ರತಿಕ್ರಿಯೆ ನೀಡಿದರು.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಕೇಳಿದಾಗ, "ಈ ಬಗ್ಗೆ ಸಿಎಂ ಈಗಾಗಲೇ ಉತ್ತರ ನೀಡಿದ್ದಾರೆ. ಅವರ ಪಕ್ಷ ಅವರನ್ನು (ಪ್ರತಾಪ್ ಸಿಂಹ) ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕಿದೆ. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದಾರೆ. ಈ ಬಗ್ಗೆ ಕೋರ್ಟ್ ವಿಚಾರಣೆ ಮಾಡಿ, ತೀರ್ಮಾನ ಮಾಡಲಿದೆ" ಎಂದರು.

ನಾಡ ಹಬ್ಬ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಗ್ಗೆ ಕೇಳಿದಾಗ, "ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ. ಅದನ್ನು ಬಿಟ್ಟು ಈ ರೀತಿ ಖಾಲಿ ಮಾತು ಆಡೋದು ಬೇಡ. ಕೇವಲ ಪ್ರಚಾರಕ್ಕೆ ಅವರೆಲ್ಲ ಹೀಗೆ ರಾಜಕೀಯ ಮಾಡುತ್ತಾರೆ" ಎಂದು ಹರಿಹಾಯ್ದರು.

ಬಿಜೆಪಿ ನಾಯಕರಿಂದಲೇ ಧರ್ಮಸ್ಥಳಕ್ಕೆ ಅಪಮಾನ :

"ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿರುವವರು ನಾವು. ಆದರೆ ಅವರು ನಮಗಿಂತ ಮುಂಚಿತವಾಗಿ ಹೈಸ್ಪೀಡ್ ನಲ್ಲಿ ಹೊರಟಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಣ ತಿಕ್ಕಾಟಕ್ಕೆ ಧರ್ಮಸ್ಥಳವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬಲಿಪಶು ಮಾಡುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ" ಎಂದು ಕಿಡಿಕಾರಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, "ಒಂದೆರಡು ದಿನಗಳಲ್ಲಿ ಬಿಜೆಪಿಯವರು ಮಾಡಿರುವ ಕಾನೂನನ್ನು ನಿಮ್ಮ ಮುಂದೆ ತಂದಿಡುತ್ತೇನೆ. ಅವರು ಮಾಡಿರುವ ಕಾನೂನಿನಲ್ಲಿ ಈ ಚುನಾವಣೆ ವೇಳೆ ಮತಯಂತ್ರ ಅಥವಾ ಮತಪತ್ರ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ? ಅವರು ಮಾಡಿರುವ ಕಾನೂನು ಪ್ರಕಾರ ನಡೆದರೆ ತಪ್ಪೇನಿದೆ?" ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X