Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಹೇಮಾವತಿ ಲಿಂಕ್ ಕೆನಾಲ್ʼ ಯಾರಿಗೂ...

ʼಹೇಮಾವತಿ ಲಿಂಕ್ ಕೆನಾಲ್ʼ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ12 Sept 2025 3:59 PM IST
share
ʼಹೇಮಾವತಿ ಲಿಂಕ್ ಕೆನಾಲ್ʼ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆ.12 : “ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ತುಮಕೂರಿನ ಸುಂಕಾಪುರ ಬಳಿ ನಡೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪರಿವೀಕ್ಷಣೆ ನಂತರ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದರು.

“ಈ ವಿಚಾರದಲ್ಲಿ ಯಾವುದೇ ರೈತರು ಗಾಬರಿಯಾಗುವುದು ಬೇಡ. ನಾನು ಬೆಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ತುಮಕೂರು ಜಿಲ್ಲೆಯ ರೈತರ ರಕ್ಷಣೆ ಬಗ್ಗೆ ತೀರ್ಮಾನ ಮಾಡುತ್ತೇನೆ. ಕೇವಲ ಕುಣಿಗಲ್ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳ ಹಿತ ನಮಗೆ ಮುಖ್ಯ. ನಾವೆಲ್ಲರೂ ಸೇರಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡೋಣ. ನಿಮ್ಮ ಸಮಸ್ಯೆ ಏನೇ ಇದ್ದರೂ ನಾನು ಅದನ್ನು ಬಗೆಹರಿಸುತ್ತೇನೆ” ಎಂದರು.

“ಕೇಂದ್ರ ಸಚಿವರಾದ ಸೋಮಣ್ಣ ಹಾಗೂ ಶಾಸಕರ ಸಲಹೆ ಮೇರೆಗೆ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಳ ಪರಿಶೀಲನೆ ಮಾಡಲು ಬಂದಿದ್ದೇನೆ. ನಾನು ಒಂದು ಕ್ಷೇತ್ರಕ್ಕೆ ಸೀಮಿತವಾದವನಲ್ಲ. ಕರ್ನಾಟಕ ರಾಜ್ಯದ ನೀರಾವರಿ ಮಂತ್ರಿಯಾಗಿದ್ದೇನೆ. ತುಮಕೂರಿನ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ನಮ್ಮ ಜವಾಬ್ದಾರಿ. ತುಮಕೂರಿನ ಜನರು ಪ್ರತಿ ಸಂದರ್ಭದಲ್ಲಿಯೂ ನಮಗೆ ಸಂಯಮದಿಂದ ಸಹಕಾರ ನೀಡಿದ್ದಾರೆ” ಎಂದರು.

“ಈ ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ, ನಾನು ನೀರಾವರಿ ಸಚಿವನಾಗಿದ್ದ ವೇಳೆ ಈ ಯೋಜನೆ ಪ್ರಾರಂಭಿಸಲಾಯಿತು. ನಂತರ ಬಿಜೆಪಿ ಸರ್ಕಾರ ಈ ಯೋಜನೆ ನಿಲ್ಲಿಸಿತ್ತು. ಪರಿಣಾಮ 600 ಕೋಟಿಯಿದ್ದ ಯೋಜನಾ ವೆಚ್ಚ ಇಂದು ಒಂದು ಸಾವಿರ ಕೋಟಿಗೆ ಏರಿಕೆಯಾಗಿದೆ. ವೈ.ಕೆ ರಾಮಯ್ಯ ಅವರ ಕಾಲದಿಂದ ಈ ಹೋರಾಟ ನಡೆದಿದ್ದು, ಇದಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ತೀರ್ಮಾನ ಮಾಡಿದ್ದೇವೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಪೈಪ್ ಗಳ ಖರೀದಿ ಹಾಗೂ ಕೆಲಸ ಆರಂಭಿಸಿ 400 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಇದು ನಾಲ್ಕೈದು ತಿಂಗಳಲ್ಲಿ ಮುಗಿಯುವ ಕೆಲಸ” ಎಂದು ಹೇಳಿದರು.

“ಕಾವೇರಿಯಿಂದ 177 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕು. ಈ ಹೇಮಾವತಿ, ಹಾರಂಗಿ, ಕಬಿನಿ, ಕೆಆರ್ ಎಸ್ ಜಲಾಶಯದಿಂದ ಈ ವರ್ಷ ಈಗಾಗಲೇ 220 ಟಿಎಂಸಿ ನೀರು ಹೋಗಿದೆ. ಇನ್ನು ನಾಲ್ಕೈದು ತಿಂಗಳು ಮಳೆ ಬರುವ ಸಾಧ್ಯತೆ ಇದೆ. ಸುಮಾರು 200 ಟಿಎಂಸಿ ನೀರು ಸಮುದ್ರ ಸೇರುವ ನಿರೀಕ್ಷೆ ಇದೆ. ಇದನ್ನು ತಡೆದು ನಮ್ಮ ರೈತರಿಗೆ ಸಹಾಯ ಮಾಡಬೇಕು. ಇದಕ್ಕಾಗಿ ಕಾಲುವೆಗಳಲ್ಲಿ ನೀರು ಹರಿಸಬೇಕು. ನೀರು ಹೆಚ್ಚಾಗಿದ್ದಾಗ ಮಾತ್ರ ಬಳಸಲು ಈ ಯೋಜನೆ ತಂದಿದ್ದೇವೆ, ನಮಗೆ ಎಲ್ಲಾ ತಾಲೂಕುಗಳು ಒಂದೇ” ಎಂದು ತಿಳಿಸಿದರು.

“ನಾನು ಕಾಮಗಾರಿ ಸ್ಥಳವನ್ನು ಪರಿಶೀಲನೆ ಮಾಡಿದೆ. ಯಾವುದೇ ಕಾರಣಕ್ಕೂ ನೀರನ್ನು ಕಾಲುವೆಗಳಿಗಿಂತ ಕೆಳಗೆ ಸಾಗಿಸುವುದಿಲ್ಲ. ಒಂದೇ ಎತ್ತರ ಕಾಯ್ದುಕೊಂಡು ಸ್ಕಾಡಾ ಹಾಕಿ ನೀರಿನ ಹರಿವು ಪರಿಶೀಲನೆ ಮಾಡಬಹುದು. ನಾವು ತಮಿಳುನಾಡು, ಮಹಾರಾಷ್ಟ್ರ ಜೊತೆಗಿನ ಜಲ ವಿವಾದದಂತೆ ನಮ್ಮೊಳಗೆ ವಿವಾದಗಳಾಗಬಾರದು. ಆಲಮಟ್ಟಿ ಜಲಾಶಯ ಮಟ್ಟ ಎತ್ತರಿಸಿದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಹೇಳಿದ್ದಾರೆ. ಅವರಂತೆ ನಮ್ಮ ಸ್ಥಳೀಯರು ಅಡ್ಡಿಪಡಿಸಬಾರದು. ನಾನು ಎಲ್ಲಾ ಶಾಸಕರಿಗೆ ಈ ವಿಚಾರವಾಗಿ ಹೇಳಿದ್ದೇನೆ. ತುಮಕೂರಿನ ಎಲ್ಲಾ ಕ್ಷೇತ್ರಗಳ ಹಿತ ಕಾಯ್ದು, ಗೌರವ ನೀಡಲು ನಾವು ಬದ್ಧ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ. ಕಳೆದ 20 ವರ್ಷಗಳಿಂದ ಈ ಯೋಜನೆಯ ಕೊನೆ ಭಾಗದ ರೈತರಿಗೆ ಸರಿಯಾಗಿ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ. ಹೀಗಾಗಿ ಈ ಯೋಜನೆ ತಂದಿದ್ದೇವೆ” ಎಂದರು.

ನಿಮ್ಮ ಹಿತ ಕಾಯಲು ಎತ್ತಿನಹೊಳೆ ಯೋಜನೆಯಡಿ ಕೆರೆ ತುಂಬಿಸಲಿದ್ದೇವೆ :

“ನಾವು ಎತ್ತಿನಹೊಳೆ ಯೋಜನೆ ಮ‌ೂಲಕ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆ ಕೈಗೊಂಡಿದ್ದು, ಹೆಚ್ಚಿನ ನೀರು ಸಂಗ್ರಹವಾದಾಗ ಈ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲಾಗುವುದು. ನಾವು ಈ ಯೋಜನೆ ಕೇವಲ ಕುಡಿಯುವ ನೀರಿಗೆ ಮಾತ್ರ, ಕೆರೆಗಳಿಗೆ ನೀರು ಹರಿಸುವುದಿಲ್ಲ ಎಂದು ತೀರ್ಮಾನ ಮಾಡಬಹುದಾಗಿತ್ತು. ಆದರೆ ನೀರು ಹೆಚ್ಚಾಗಿದ್ದಾಗ ನಾವು ವ್ಯರ್ಥ ಮಾಡಬಾರದು ಎಂದು ಈ ಯೋಜನೆ ಮಾಡಿದ್ದೇವೆ. ಇದಕ್ಕಾಗಿ 20 ಸಾವಿರ ಕೋಟಿ ಹಣ ಖರ್ಚು ಮಾಡುತ್ತಿದ್ದೇವೆ. ಆಮೂಲಕ ನಾವು ಅಂತರ್ಜಲ ಹೆಚ್ಚಳಕ್ಕೆ ಕ್ರಮ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X