Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು ನಗರದಲ್ಲಿ ಇದುವರೆಗೂ 13 ಸಾವಿರ...

ಬೆಂಗಳೂರು ನಗರದಲ್ಲಿ ಇದುವರೆಗೂ 13 ಸಾವಿರ ರಸ್ತೆಗುಂಡಿ ಮುಚ್ಚಲಾಗಿದೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Sept 2025 9:20 PM IST
share
ಬೆಂಗಳೂರು ನಗರದಲ್ಲಿ ಇದುವರೆಗೂ 13 ಸಾವಿರ ರಸ್ತೆಗುಂಡಿ ಮುಚ್ಚಲಾಗಿದೆ : ಡಿ.ಕೆ.ಶಿವಕುಮಾರ್
"ವಾರ್ಡ್ ಮಟ್ಟದ ರಸ್ತೆ ಸುಧಾರಣೆಗೆ ಶಾಸಕರಿಗೆ 1100 ಕೋಟಿ ರೂ.ಹಂಚಲು ತೀರ್ಮಾನ"

ಬೆಂಗಳೂರು, ಸೆ. 30: ಬೆಂಗಳೂರು ನಗರದಲ್ಲಿ ಇದುವರೆಗೂ 13 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಪ್ರತಿ ಗುಂಡಿ ಮುಚ್ಚಿರುವುದಕ್ಕೆ ಫೊಟೋ, ವಿಡಿಯೋ ದಾಖಲೆ ಮಾಡಿಸಲಾಗಿದೆ. ನೀವುಗಳು ಪರಿಶೀಲನೆ ಮಾಡಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಂಗಳವಾರ ಸಿಟಿ ರೌಂಡ್ ನಡೆಸಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಸರಕಾರದ ಆದೇಶ ಪಾಲನೆ ಮಾಡಿ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ. ಇದರ ಜೊತೆಗೆ 550 ಕಿ.ಮೀ ಉದ್ದದ ಮುಖ್ಯರಸ್ತೆಗಳ ಅಭಿವೃದ್ಧಿಗೆ 1100 ಕೋಟಿ ರೂ.ವೆಚ್ಚದ ಕಾರ್ಯಯೋಜನೆ ಸಿದ್ಧಪಡಿಸಲು ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.

ಇನ್ನು ಮುಖ್ಯರಸ್ತೆಗಳ ಜಂಕ್ಷನ್‍ನಲ್ಲಿ ಕಾಂಕ್ರೀಟ್ ಹಾಕಲು 26 ದಿನಗಳ ಅಗತ್ಯವಿದ್ದು, ಟ್ರಾಫಿಕ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ನಾನು ಬೆಂಗಳೂರು ರಸ್ತೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತಿದ್ದೇನೆ. ಇನ್ನು ರಸ್ತೆಗುಂಡಿ ಮುಚ್ಚುವುದಕ್ಕಾಗಿ 750 ಕೋಟಿ ರೂ. ನೀಡುವುದಾಗಿ ಸಿಎಂ ಹೇಳಿದ್ದಾರೆ ಎಂದರು.

ವಾರ್ಡ್ ಮಟ್ಟದ ರಸ್ತೆಗಳ ಅಭಿವೃದ್ಧಿಗೆ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಲು 1100 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಈ ಅನುದಾನವನ್ನು ರಸ್ತೆಗಳ ಸುಧಾರಣೆಗೆ ಬಳಸಲು ಸೂಚನೆ ನೀಡಲಾಗಿದೆ. ದೇಶದಲ್ಲಿ ಯಾವುದೇ ನಗರದ ಮಂತ್ರಿ ರಸ್ತೆಯಲ್ಲಿ ಗುಂಡಿ ಕಂಡರೆ ಮಾಹಿತಿ ನೀಡಿ ಎಂದು ಸಾರ್ವಜನಿಕರಿಗೆ ಕರೆ ನೀಡಿರಲಿಲ್ಲ. ಆದರೆ ನಾನು ಇದಕ್ಕಾಗಿ ಪ್ರತ್ಯೇಕ ಆಪ್ ಸಿದ್ಧಪಡಿಸಿ, ಪೊಲೀಸರ ಸಹಕಾರದಲ್ಲಿ ರಸ್ತೆಗುಂಡಿ ಮುಚ್ಚಲಾಗುತ್ತಿದೆ. ಇಂತಹ ಪ್ರಯತ್ನ ನಡೆದಿರುವುದು ಕರ್ನಾಟಕದಲ್ಲಿ ಮಾತ್ರ. ಬೆಂಗಳೂರು ಜಾಗತಿಕ ನಗರ ಹೀಗಾಗಿ ಎಲ್ಲರೂ ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಮಾತ್ರ ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.

ನನ್ನೊಟ್ಟಿಗೆ ದಿಲ್ಲಿಗೆ ಬರಲಿ: ಬೇಕಿದ್ದರೆ ನನ್ನ ಜೊತೆ ಬಿಜೆಪಿ ನಾಯಕರು ಬರಲಿ, ದಿಲ್ಲಿ ಪಿಎಂ ನಿವಾಸದಲ್ಲಿನ ರಸ್ತೆ ಗುಂಡಿಗಳನ್ನು ತೋರಿಸುತ್ತೇನೆ. ಕರ್ನಾಟಕ ಭವನದಿಂದ ಹೋಗುವಾಗ ನೋಡಿದ್ದೇನೆ. ಎಲ್ಲ ಕಡೆ ಇದೇ ಪರಿಸ್ಥಿತಿ ಇದೆ. ಅವರ ತಪ್ಪು ಎಂದು ಹೇಳುವುದಿಲ್ಲ. ಅವರು ಯಾವಾಗ ಬರುತ್ತಾರೆ ಹೇಳಿ, ರಾಜ್ಯದಿಂದ ಒಂದು ನಿಯೋಗ ಹೋಗೋಣ. ಹಾಗೆ ಯಾರಾದರೂ ಕೇಂದ್ರ ಸರಕಾರದಿಂದ ಹಣ ಕೊಡಿಸಿದರೆ ತರೋಣ ಎಂದರು.

‘ಕಸ’ ಪ್ರಕರಣ ದಾಖಲಿಸಿ: ನಗರದಲ್ಲಿ ನಿಜವಾಗಿಯೂ ಕಸದ ಸಮಸ್ಯೆಯೂ ಇದೆ. ಇಂದು ಕಾಂಗ್ರೆಸ್ ಕಚೇರಿಗೆ ಹೋಗುವಾಗ ಜಯಮಹಲ್ ರಸ್ತೆಯಲ್ಲಿ ಯಾರೋ ಒಂದು ಲೋಡ್ ಕಸ ಸುರಿದಿದ್ದಾರೆ. ನಿನ್ನೆ ರಾತ್ರಿ ಇರಲಿಲ್ಲ. ರಾತ್ರೊರಾತ್ರಿ ಬಂದು ಸುರಿದಿದ್ದಾರೆ. ಈ ಕಸ ಸುರಿದವರು ಯಾರು ಎಂದು ಸಿಸಿಟಿವಿಯಲ್ಲಿ ಪತ್ತೆ ಮಾಡಿ ಅವನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಅವರು ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X