Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ...

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 Oct 2025 9:54 PM IST
share
ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
"ಪಾಲಿಕೆಗಳ ವತಿಯಿಂದಲೇ ಕಸ ವಿಲೇವಾರಿ, ಮೇಲ್ವಿಚಾರಣೆ ಜಿಬಿಎ ನೋಡಿಕೊಳ್ಳಲಿದೆ"

ಬೆಂಗಳೂರು, ಅ.10 : ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ ಸಭೆಯಲ್ಲಿ ಸಚಿವ ಝಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳಗೇರಿ ಪ್ರದೇಶಗಳಿದ್ದು ಅವುಗಳ ಅಭಿವೃದ್ಧಿ ಆಗಬೇಕು ಎಂದು ವಿಷಯ ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

“ಬೆಂಗಳೂರಿನಲ್ಲಿ ಈ ಹಿಂದೆ ಶಾಂತಿನಗರದಲ್ಲಿ ಈ ಪ್ರಯತ್ನಕ್ಕೆ ಮುಂದಾಗಿದ್ದೆವು. ಅದು ಯಶಸ್ವಿಯಾಗಲಿಲ್ಲ. ಹೀಗಾಗಿ ಜನರು ಈ ವಿಚಾರದಲ್ಲಿ ಹಿಂಜರಿಯುತ್ತಾರೆ. ಅದಕ್ಕಾಗಿ ಈ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ” ಎಂದು ತಿಳಿಸಿದರು.

ನಮ್ಮ ಕ್ಷೇತ್ರದಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು ಇದಕ್ಕೆ ಪರಿಹಾರ ಬೇಕು. ಇದನ್ನು ಜಿಬಿಎ ನಿಭಾಯಿಸುವುದೇ ಅಥವಾ ಪಾಲಿಕೆ ನಿಭಾಯಿಸುವುದೇ ಎಂದು ಶಾಸಕ ಎ.ಸಿ. ಶ್ರೀನಿವಾಸ್ ಅವರು ಕೇಳಿದಾಗ, "ಕಸ ವಿಲೇವಾರಿ ವಿಚಾರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 33 ಪ್ಯಾಕೇಜ್ ಟೆಂಡರ್ ಕರೆಯಲಾಗುವುದು. ಈ ವಿಚಾರ ನ್ಯಾಯಾಲಯದಲ್ಲಿದ್ದು, ಶೀಘ್ರವೇ ತೀರ್ಪು ಬರಲಿದ್ದು, ನಂತರ ಈ ಕಾರ್ಯ ಮಾಡಲಾಗುವುದು. ಕಸ ವಿಲೇವಾರಿ ಜವಾಬ್ದಾರಿ ಸ್ಥಳೀಯ ಪಾಲಿಕೆಗಳು ನಿಭಾಯಿಸಲಿವೆ. ಇದರ ಸಮನ್ವಯತೆಯನ್ನು ಜಿಬಿಎ ಪಾಲಿಸಲಿದೆ" ಎಂದು ತಿಳಿಸಿದರು.

ಸಂಪೂರ್ಣ ಆನೇಕಲ್ ಅನ್ನು ಜಿಬಿಎ ವ್ಯಾಪ್ತಿಗೆ ಸೇರಿಸುವುದು ಕಷ್ಟ :

ಆನೇಕಲ್ ಶಾಸಕರು ತಮ್ಮ ಪ್ರದೇಶವನ್ನು ಜಿಬಿಎ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದಾಗ, “ಈಗ ಘೋಷಣೆ ಆಗಿರುವ ಜಿಬಿಎ ವ್ಯಾಪ್ತಿಯಲ್ಲಿ ಮೊದಲು ಚುನಾವಣೆ ಆಗಲಿದೆ. ನಂತರ ಎಲ್ಲೆಲ್ಲಿ ಅಭಿವೃದ್ಧಿ ಆಗಿದೆ ಆ ಜಾಗಗಳನ್ನು ಜಿಬಿಎ ವ್ಯಾಪ್ತಿಗೆ ಸೇರಿಸಲು ಸಮಿತಿ ರಚಿಸಿ ಯಾವ ಪ್ರದೇಶ ಸೇರಿಸಬೇಕು ಎಂದು ತೀರ್ಮಾನ ಮಾಡಲಾಗುವುದು. ಚುನಾವಣೆ ನಂತರ ಈ ಪ್ರಕ್ರಿಯೆಗೆ ಕೈಹಾಕಲಾಗುವುದು. ಈಗ ಜಿಬಿಎ ವ್ಯಾಪ್ತಿಗೆ ಸೇರಿಸಿದರೆ ಅಲ್ಲಿನ ಗ್ರಾಮ ಪಂಚಾಯ್ತಿ ಸದಸ್ಯರು ಪಾಲಿಕೆ ಸದಸ್ಯರಾಗುತ್ತಾರೆ. ಇನ್ನು ಅಲ್ಲಿನ ಜನರು ಕೂಡ ಬೆಂಗಳೂರಿನವರಂತೆ ತೆರಿಗೆ ಪಾವತಿ ಮಾಡಬೇಕಾಗುತ್ತದೆ. ನೀವು ಇಡೀ ಆನೇಕಲ್ ತಾಲೂಕನ್ನು ಜಿಬಿಎ ವ್ಯಾಪ್ತಿಗೆ ಸೇರಿಸಿ ಎಂದು ಹೇಳುತ್ತಿದ್ದೀರಿ. ಆ ರೀತಿ ಮಾಡಿದರೆ 110 ಹಳ್ಳಿಗಳಿಗೆ ಆಗ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಯಾವ ಪ್ರದೇಶ ನಗರದಂತೆ ಅಭಿವೃದ್ಧಿಯಾಗಿದೆಯೋ ಆ ಪ್ರದೇಶಗಳನ್ನು ಮಾತ್ರ ಜಿಬಿಎ ವ್ಯಾಪ್ತಿಗೆ ಸೇರಿಸಲಾಗುವುದು” ಎಂದು ತಿಳಿಸಿದರು.

ಬೀದಿ ವ್ಯಾಪಾರಿಗಳಿಗೆ ಶೀಘ್ರವೇ ವಾಹನ ವ್ಯವಸ್ಥೆ :

ಪರಿಷತ್ ಸದಸ್ಯ ಗೋವಿಂದರಾಜು ಅವರು ಬೀದಿ ವ್ಯಾಪಾರಿಗಳಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ ಎಂದು ಕೇಳಿದಾಗ, "ಈ ವಿಚಾರವಾಗಿ ಸುದೀರ್ಘ ಚರ್ಚೆ ಮಾಡಿದ್ದು, ಬೀದಿ ವ್ಯಾಪಾರಿಗಳ ನೋಂದಣಿ ಪ್ರಕ್ರಿಯೆ ಆರಂಭಿಸಿದ್ದೇವೆ. 30 ಸಾವಿರ ಬೀದಿ ವ್ಯಾಪಾರಿಗಳು ನೋಂದಣಿಯಾಗಿದ್ದು, ಅವರಿಗೆ ನಾಲ್ಕು ರೀತಿಯ ವಾಹನ ನೀಡಲು ಸಿದ್ಧತೆ ಮಾಡುತ್ತಿದ್ದೇವೆ. ಈ ವಾಹನಗಳಲ್ಲಿ ಅವರು ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗುವುದು" ಎಂದು ತಿಳಿಸಿದರು.

ಅನಾಥ ವಾಹನಗಳನ್ನು ನಗರದ ಹೊರಗೆ ಸ್ಥಳಾಂತರಿಸಬೇಕು :

ಶಾಸಕ ರಿಝ್ವಾ ನ್ ಅರ್ಷದ್ ಅವರು, ಬೆಂಗಳೂರಿನಲ್ಲಿ ಅನಾಥ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಸಂಚಾರ ದಟ್ಟಣೆ ಹಾಗೂ ಕಸದ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ನಗರದ ಹೊರಗೆ 10 ಎಕರೆ ಪ್ರದೇಶ ಗುರುತಿಸಿ ಅಲ್ಲಿ ಈ ವಾಹನಗಳನ್ನು ಸ್ಥಳಾಂತರ ಮಾಡಬೇಕು ಎಂದು ವಿಚಾರ ಪ್ರಸ್ತಾಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಈ ಜಾಗಗಳನ್ನು ಗುರುತಿಸಿ ಅಲ್ಲಿ ಕಾಂಪೌಂಡ್ ಹಾಕಿ ವಾಹನಗಳನ್ನು ಸ್ಥಳಾಂತರಿಸಿ. ಆಗ ಆ ವಾಹನಗಳನ್ನು ಬೇರೆಯವರು ಕದಿಯಲು ಆಗುವುದಿಲ್ಲ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X