Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾನು 140 ಶಾಸಕರ ಅಧ್ಯಕ್ಷ; ಗುಂಪುಗಾರಿಕೆ...

ನಾನು 140 ಶಾಸಕರ ಅಧ್ಯಕ್ಷ; ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ: ಡಿ.ಕೆ.ಶಿವಕುಮಾರ್‌

ವಾರ್ತಾಭಾರತಿವಾರ್ತಾಭಾರತಿ21 Nov 2025 4:25 PM IST
share
ನಾನು 140 ಶಾಸಕರ ಅಧ್ಯಕ್ಷ; ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ: ಡಿ.ಕೆ.ಶಿವಕುಮಾರ್‌
"ಸಿಎಂ ಸಂಪುಟ ವಿಸ್ತರಣೆ ಮಾಡ್ತೀನಿ ಅಂದಿದ್ದಾರೆ; ಸಚಿವ ಸ್ಥಾನದ ಅಕಾಂಕ್ಷಿಗಳು ದಿಲ್ಲಿಗೆ ಹೋಗಿದ್ದಾರೆ"

ಬೆಂಗಳೂರು : "ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

ಕೆಲವು ಶಾಸಕರು, ಮಂತ್ರಿಗಳು ದಿಲ್ಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ, ಮತ್ತೊಂದೆಡೆ ಡಿನ್ನರ್ ಮೀಟಿಂಗ್ ನಡೆಯುತ್ತಿದೆ ಎಂದು ಕೇಳಿದಾಗ, "ಯಾವ ಗುಂಪನ್ನು ದಿಲ್ಲಿಗೆ ಕರೆದುಕೊಂಡು ಹೋಗಲು ನನಗೆ ಇಚ್ಛೆ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ. ಕೆಲವರು ಮುಖ್ಯಮಂತ್ರಿಗಳ ಜೊತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದರೆ, ಮತ್ತೆ ಕೆಲವರು ತಾವಾಗಿಯೇ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ? ನಾವು ಯಾರನ್ನೂ ತಡೆಯಲು ಸಾಧ್ಯವಿಲ್ಲ" ಎಂದು ತಿಳಿಸಿದರು.

ಸಿಎಂಗೆ ʼಆಲ್ ದಿ ಬೆಸ್ಟ್ʼ :

"ಒಂದು ಪಕ್ಷದ ಶಾಸಕರು ಮಂತ್ರಿ, ಮುಖ್ಯಮಂತ್ರಿ ಆಗಲು ಅರ್ಹರಿರುತ್ತಾರೆ. ಮುಖ್ಯಮಂತ್ರಿಗಳು ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಐ ವಿಶ್ ಹಿಮ್ ಆಲ್ ದ ಬೆಸ್ಟ್ (ಅವರಿಗೆ ಶುಭ ಕೋರುತ್ತೇನೆ") ಎಂದರು.

ಯಾರೇ ಆದರೂ ಆಡಿದ ಮಾತು ಮುಖ್ಯ ಅಲ್ಲವೇ ಎಂದು ಕೇಳಿದಾಗ, "ಸಿಎಂ ತಮ್ಮ ವಿಚಾರಧಾರೆ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನುಂಟು ಹೈಕಮಾಂಡ್ ಉಂಟು. ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಸಿಎಂ ಹೇಳಿದ್ದಾರೆ. ನಾನೂ ಹೇಳಿದ್ದೇನೆ. ಅದಕ್ಕೆ ನಾವು ಬದ್ಧ. ಅಷ್ಟು ಬಿಟ್ಟರೆ ಬೇರೇನೂ ಇಲ್ಲ ಎಂದರು.

ಸತೀಶ್ ಜಾರಕಿಹೊಳಿ ಅವರು ಡಿನ್ನರ್ ಸಭೆ ಮಾಡಿರುವ ಬಗ್ಗೆ ಕೇಳಿದಾಗ, "ನನಗೆ ಡಿನ್ನರ್ ಸಭೆಗಳ ಬಗ್ಗೆ ಗೊತ್ತಿಲ್ಲ. ನಾಲ್ಕೈದು ಡಿಸಿಎಂ ಮಾಡಬೇಕು, ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂದು ಎರಡೂವರೆ ವರ್ಷಗಳಿಂದ ಡಿನ್ನರ್ ಸಭೆಗಳನ್ನು ಮಾಡುತ್ತಲೇ ಇದ್ದಾರೆ. ಇನ್ನು ಹೆಚ್ಚು ಸಭೆಗಳನ್ನು ಮಾಡಲಿ" ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X