Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾನು ಬರೀ ವೇದಿಕೆಯಲ್ಲಿ ಕೂತು ಭಾಷಣ...

ನಾನು ಬರೀ ವೇದಿಕೆಯಲ್ಲಿ ಕೂತು ಭಾಷಣ ಮಾಡಿಲ್ಲ, ಪಕ್ಷದ ಎಲ್ಲ ಕೆಲಸ ಮಾಡಿದ್ದೇನೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ25 Dec 2025 6:11 PM IST
share
ನಾನು ಬರೀ ವೇದಿಕೆಯಲ್ಲಿ ಕೂತು ಭಾಷಣ ಮಾಡಿಲ್ಲ, ಪಕ್ಷದ ಎಲ್ಲ ಕೆಲಸ ಮಾಡಿದ್ದೇನೆ : ಡಿ.ಕೆ.ಶಿವಕುಮಾರ್

ಬೆಂಗಳೂರು : "ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ " ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಹಾಗೂ ಸದಾಶಿವನಗರದ ತಮ್ಮ ನಿವಾಸದ ಬಳಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ದೆಹಲಿಯಲ್ಲಿ ಹೇಳಿಕೆ ನೀಡಿದ್ದರ ಬಗ್ಗೆ ಕೇಳಿದಾಗ, "ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇ‌ನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ" ಎಂದರು.

ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆಗೆ ತಾವು ತೆರಳುವಿರಾ ಎಂದು ಕೇಳಿದಾಗ, "ನನ್ನನ್ನು ಕರೆದರೆ ಖಂಡಿತಾ ಹೋಗುತ್ತೇನೆ. ಆದರೆ ಇದುವರೆಗೂ ಕರೆದಿಲ್ಲ" ಎಂದರು.

ಮುಖ್ಯಮಂತ್ರಿಯವರನ್ನು ಸಭೆಗೆ ಆಹ್ವಾನಿಸಲಾಗಿದೆಯಲ್ಲ ಎಂದು ಹೇಳಿದಾಗ, "ಇರಬಹುದು, ಸಿಎಂಗೆ ಆಹ್ವಾನ ನೀಡಿದ್ದಾರೆ ಎಂದು ನನಗೂ ಗೊತ್ತಿದೆ. ಡೆಪ್ಯುಟಿ ಸಿಎಂಗೆ ಕರೆದಿಲ್ಲ" ಎಂದು ತಿಳಿಸಿದರು.

ಖರ್ಗೆ ಅವರ ಜತೆ ನಾಯಕತ್ವ ವಿಚಾರವಾಗಿ ಚರ್ಚೆ ನಡೆಸಿದರಾ ಎಂದು ಕೇಳಿದಾಗ, "ಯಾವ ವಿಚಾರವಾಗಿಯೂ ಚರ್ಚೆ ನಡೆಸಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ.‌ ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಅವರು ಏನು ಹೇಳುತ್ತಾರೋ ಆ ರೀತಿ ಕೇಳಿಕೊಂಡು ಹೋಗುತ್ತೇವೆ" ಎಂದರು.

ಸ್ಥಳೀಯ ಮಟ್ಟದಲ್ಲಿ ಗೊಂದಲ ಬಗೆಹರಿಸಿಕೊಳ್ಳಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆ ಕೇಳಿದಾಗ, "ಹಿರಿಯರು ಮಾರ್ಗದರ್ಶನ ನೀಡುತ್ತಾರೆ" ಎಂದರು.

ಶುಕ್ರವಾರದಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಿದೆ. ಈ ಸಭೆಯಲ್ಲಿ ಮನರೇಗಾ ಯೋಜನೆಯ ಹೆಸರು ಬದಲಾವಣೆ, ಅನುದಾನದಲ್ಲಿ ರಾಜ್ಯದ ಪಾಲನ್ನು ಶೇ.40ಕ್ಕೆ ಹೆಚ್ಚಿಸಿರುವುದು ಸೇರಿದಂತೆ ರೈತರಿಗೆ ಮಾರಕವಾದಂತಹ ಬದಲಾವಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ವಿಚಾರವಾಗಿ ಒಂದು ರಾಜ್ಯದ ಅಧ್ಯಕ್ಷನಾಗಿ ನನ್ನ ಅಭಿಪ್ರಾಯಗಳನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದೇನೆ. ಅವರ ಜತೆ ಯಾವ ರಾಜಕೀಯ ಮಾತುಕತೆಯೂ ಮಾಡಿಲ್ಲ" ಎಂದು ಸ್ಪಷ್ಟನೆ ನೀಡಿದರು.

"ಮನರೇಗಾ ಯೋಜನೆಯಿಂದ ಪಂಚಾಯತಿಗಳಿಗೆ ಅನುಕೂಲವಾಗುತ್ತಿತ್ತು. ಪಂಚಾಯತಿ ಸದಸ್ಯರುಗಳಿಗೆ ಶಕ್ತಿಯಿತ್ತು‌. ಪ್ರತಿ ಕೂಲಿ ಕಾರ್ಮಿಕರ ಖಾತೆಗೆ ಹಣ ಸಂದಾಯವಾಗಿತ್ತಿತ್ತು. ಪ್ರತಿಯೊಬ್ಬರು ಚರ್ಚೆ ನಡೆಸಿ ತಮ್ಮ ಊರಿಗೆ ಯಾವ ಕೆಲಸಗಳನ್ನು ತೆಗೆದುಕೊಳ್ಳಬೇಕು ಎನ್ನುವ ಅವಕಾಶವಿತ್ತು. ಆದರೆ ಈಗ ಕೇಂದ್ರ ಸರ್ಕಾರವೇ ಯಾವ ಜಿಲ್ಲೆಯಲ್ಲಿ ಯಾವ ಕೆಲಸ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡುತ್ತದಂತೆ" ಎಂದು ಹೇಳಿದರು.

"ರೈತರು ತಮ್ಮ ಸ್ವಂತ ಜಮೀನಿನಲ್ಲಿ ಕೆಲಸ ಮಾಡಿಕೊಳ್ಳಲು, ಇಂಗುಗುಂಡಿ ತೋಡಿಕೊಳ್ಳಲು, ಕೊಟ್ಟಿಗೆ ಕಟ್ಟಿಕೊಳ್ಳಲು - ಹೀಗೆ ಅನೇಕ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲವಾಗುತ್ತಿತ್ತು. ಇಂತಹ ಅದ್ಬುತವಾದ ಕಾರ್ಯಕ್ರಮವನ್ನು ಸೋನಿಯಾಗಾಂಧಿ ಅವರ ಮಾರ್ಗದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ನೀಡಿದ್ದರು. ಮುಂದಿನ 2026 ರ ಫೆಬ್ರವರಿ‌ ವೇಳೆಗೆ ಈ ಯೋಜನೆಗೆ 20 ವರ್ಷ ತುಂಬಲಿದೆ. ಆದ ಕಾರಣ ದೊಡ್ಡ ಹೋರಾಟವನ್ನು ಹಮ್ಮಿಕೊಳ್ಳಲು ಆಲೋಚಿಸಲಾಗಿದೆ" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X