Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ...

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Dec 2025 2:48 PM IST
share
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿ.ಕೆ.ಶಿವಕುಮಾರ್
"ಓಲೈಕೆ ರಾಜಕಾರಣ ನಮಗೆ ಅಗತ್ಯವಿಲ್ಲ; ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ"

ಬೆಂಗಳೂರು : "ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಮುಸ್ಲಿಮರ ಓಲೈಕೆ ಮಾಡಲಾಗುತ್ತಿದೆ ಎನ್ನುವ ಪ್ರತಿಪಕ್ಷದ ಟೀಕೆಗಳ ಬಗ್ಗೆ ಕೇಳಿದಾಗ, "ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೋಗಿಲು ಬಳಿ ಕೆಲವರು ಹಣ ಸಂಗ್ರಹಿಸಿದ್ದಾರೆ ಎಂದು ಅಲ್ಲಿನವರೇ ಹೇಳಿಕೆ ನೀಡಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಯಾರಿಗೆ ಅರ್ಹತೆ ಇದೆಯೋ ಅವರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ ಮನೆ ನೀಡಲಾಗುವುದು" ಎಂದರು.

"ಈ ಹಿಂದೆ ಕೆಲವು ಭಾಗಗಳಲ್ಲಿ ಹಕ್ಕುಪತ್ರಗಳನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ. ಅದನ್ನು ಪರಿಶೀಲನೆ ನಡೆಸಲು ತಿಳಿಸಿದ್ದೇನೆ. ಹೊರಗಿನಿಂದ ಬಂದವರು ಸಹ ಹೊಸದಾಗಿ ಸೇರಿಕೊಂಡಿದ್ದಾರೆ. ನೈಜ ಮತದಾರರು ಎಷ್ಟಿದ್ದಾರೆ ಎಂಬ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ, ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು" ಎಂದರು.

ಕರ್ನಾಟಕದ ವಿಚಾರದಲ್ಲಿ ಕೇರಳ ರಾಜ್ಯದ ಹಸ್ತಕ್ಷೇಪ ಬೇಡ ಎನ್ನುವ ಹೇಳಿಕೆಯನ್ನು ಕೇರಳದ ಕೆಲವು ಸಂಸದರು ಖಂಡಿಸಿರುವ ಬಗ್ಗೆ ಕೇಳಿದಾಗ, "ನಾವು ಉತ್ತಮವಾಗಿ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿದ್ದೇವೆ. ಅವರು ಏನು ಬೇಕಾದರೂ ಹೇಳಿಕೆ ನೀಡಲಿ. ನಾವು ಅಕ್ರಮ ಒತ್ತುವರಿಗೆ ಅವಕಾಶ ನೀಡುವುದಿಲ್ಲ. ಅವರು ಈ ಹಿಂದೆ ಕೊಟ್ಟ ಭರವಸೆ, ಪ್ರವಾಹದ ಸಂದರ್ಭದಲ್ಲಿ ನೀಡಿದ ಮಾತನ್ನೇ ಈಡೇರಿಸಿಲ್ಲ. ಅಂತಹವರು ನಮಗೆ ಹೇಳುವ ಅವಶ್ಯಕತೆ ಇಲ್ಲ. ನಮ್ಮ ರಾಜ್ಯದ ವಿಚಾರವನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ" ಎಂದರು.

ಎರಡೆರಡು ರಾಜ್ಯದ ಆಧಾರ್ ಕಾರ್ಡ್ ಗಳು, ಮತದಾರರ ಚೀಟಿಗಳು ಸಂತ್ರಸ್ತರ ಬಳಿ ಇರುವ ಬಗ್ಗೆ ಕೇಳಿದಾಗ, "ಇದರ ಬಗ್ಗೆ ನನಗೆ ಗೊತ್ತಿಲ್ಲ. ಅಧಿಕಾರಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ" ಎಂದು ಹೇಳಿದರು.

ಅಕ್ರಮ ನಿವಾಸಿಗಳಿಗೆ ಎಲ್ಲಿಯೂ ಮನೆ ನೀಡಲಾಗುವುದಿಲ್ಲ ಎನ್ನಲಾಗುತ್ತಿತ್ತು, ಈಗ ಸಕ್ರಮ ಮಾಡಲಾಗುತ್ತಿದೆಯಲ್ಲ ಎಂದು ಕೇಳಿದಾಗ, "ಅರ್ಹರಿಗೆ ಮಾತ್ರ ಮನೆ ನೀಡಲಾಗುವುದು. ಸ್ಥಳೀಯ ಮತದಾರರ ಪಟ್ಟಿಯಲ್ಲಿ ಹೆಸರು ಹಾಗೂ ನಿಜವಾದ ಸ್ಥಳೀಯ ವಿಳಾದ ಇದ್ದರೆ ಮಾತ್ರ ಮನೆ ನೀಡಲಾಗುವುದು. ಯಾವುದೇ ಸಕ್ರಮ ಮಾಡುತ್ತಿಲ್ಲ. ಅರ್ಹರನ್ನು ಗುರುತಿಸಲಾಗುವುದು" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X