Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಒಂದು ರಾಷ್ಟ್ರ ಒಂದು ಚುನಾವಣೆ'...

‘ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರೋಧ

ವಾರ್ತಾಭಾರತಿವಾರ್ತಾಭಾರತಿ16 May 2026 6:35 PM IST
share
‘ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರೋಧ

ಬೆಂಗಳೂರು : ಕೇಂದ್ರ ಸರಕಾರದ ಉದ್ದೇಶಿತ ‘ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರವಾಗಿ ವಿರೋಧಿಸಿದ್ದಾರೆ.

ಶನಿವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿಯು ಆಯೋಜಿಸಿದ್ದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಕುರಿತ ಸಂವಾದದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಿದ ಅವರು, ಇದೊಂದು ಅಧಿಕಾರ ಕೇಂದ್ರೀತ, ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ರಾಜ್ಯಗಳನ್ನು ದುರ್ಬಳಗೊಳಿಸುವುದರ ಮೂಲಕ ಒಕ್ಕೂಟ ವ್ಯವಸ್ಥೆಗೆ ತೀವ್ರ ಧಕ್ಕೆ ತರಲಿದೆ ಎಂದು ಪ್ರತಿಪಾಸಿದರು.

‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಅಪಾಯವಿದೆ. ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವವರ ಅನುಕೂಲಕ್ಕೆ ತಕ್ಕಂತೆ ಹೆಣೆಯಲಾಗುತ್ತಿರುವ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿ ಆಗಿ ಸರಸಗಟಾಗಿ ತಿರಸ್ಕರಿಸುತ್ತೇನೆ ಎಂದು ಅವರು ಹೇಳಿದರು.

‘ಒಂದು ದೇಶ ಒಂದು ಚುನಾವಣೆ' ವಿರೋಧಿಸಿ ಕರ್ನಾಟಕ ವಿಧಾನಸಭೆಯು ಈಗಾಗಲೇ ನಿರ್ಣಯವನ್ನೂ ಅಂಗೀಕರಿಸಿದೆ. ಒಂದೊಮ್ಮೆ ರಾಜಕೀಯ ಅಸ್ಥಿರತೆ, ಅವಿಶ್ವಾಸ, ಬಹುಮತದ ಕೊರತೆಯಿಂದ ಒಂದು ಸರಕಾರ ಅರ್ಧಾವಧಿಯಲ್ಲೇ ಉರುಳಿ ಹೋದರೆ ಆಗ ಏನು ಮಾಡುವುದು? ಇದಕ್ಕೆ ಪರಿಹಾರ ಎಲ್ಲಿದೆ? ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.

ಒಂದೊಂದು ರಾಜ್ಯದಲ್ಲಿ ಒಂದೊಂದು ಅವಧಿಗೆ ಚುನಾವಣೆ ನಡೆಯುತ್ತದೆ. ಕರ್ನಾಟಕದಲ್ಲಿ ಮೂರು ವರ್ಷಗಳ ಹಿಂದೆ ಚುನಾವಣೆ ಆಗಿತ್ತು. ತಮಿಳುನಾಡು, ಕೇರಳದಲ್ಲಿ ಮೊನ್ನೆಯಷ್ಟೇ ಚುನಾವಣೆ ಆಗಿದೆ. ಪಂಜಾಬ್, ತೆಲಂಗಾಣದಲ್ಲಿ ಬೇರೆ ಕಾಲದಲ್ಲಿ ಆಗಿದೆ. ವಿವಿಧ ಕಾಲಾವಧಿಯ ಈ ಚುನಾವಣೆಗಳನ್ನು ಸಮೀಕರಿಸುವುದು ಹೇಗೆ? ಎಂದು ಅವರು ಕೇಳಿದರು.

ಇದು ಕಾರ್ಯಸಾಧು ಯೋಜನೆಯಲ್ಲ, ವಾಸ್ತವದಲ್ಲಿ ಇದು ನಡೆಸಲು ಅಸಾಧ್ಯ. ಇದು ಪ್ರಾದೇಶಿಕ ಪಕ್ಷಗಳು ಹಾಗೂ ಪ್ರತಿಪಕ್ಷಗಳ ಧ್ವನಿ ಅಡಗಿಸುವ ಹುನ್ನಾರವಾಗಿದೆ. ಈ ಪ್ರಸ್ತಾವನೆ ಬಗ್ಗೆ ಕರ್ನಾಟಕ ಸರಕಾರದ ಸಹಮತವಿಲ್ಲ. ನಮ್ಮ ಪಕ್ಷದ ರಾಷ್ಟ್ರೀಯ ಮುಖಂಡರ ಒಟ್ಟಾರೆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ಶಿವಕುಮಾರ್ ನುಡಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X