ಎಲ್ಲ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ/ಬೆಂಗಳೂರು : ನನಗೆ ಬಂದಿರುವ ಮಾಹಿತಿ ಪ್ರಕಾರ ಎಲ್ಲ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಶುಕ್ರವಾರ ಹೊಸದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೆ.ಸಿ.ವೇಣುಗೋಪಾಲ್ ಚರ್ಚೆ ಮಾಡಿದ್ದು, ಈಗಾಗಲೇ ತಿಳಿಸಿದ್ದಾರೆ. ನಮ್ಮ ನಾಯಕರು ನಮ್ಮ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಎಲ್ಲ ತೀರ್ಮಾನ ಆದ ಬಳಿಕ ನಮ್ಮ ನಾಯಕರು ಮಾಹಿತಿ ನೀಡುತ್ತಾರೆ. ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ’ ಎಂದು ತಿಳಿಸಿದರು.
Next Story




