Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೂತನ ಶೈಕ್ಷಣಿಕ ವರ್ಷಕ್ಕೆ...

ನೂತನ ಶೈಕ್ಷಣಿಕ ವರ್ಷಕ್ಕೆ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಶುಭವಾಗಲಿ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ1 Jun 2026 3:19 PM IST
share
ನೂತನ ಶೈಕ್ಷಣಿಕ ವರ್ಷಕ್ಕೆ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಶುಭವಾಗಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು : "ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ ಎಂದು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹಾರೈಸುತ್ತೇನೆ" ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

"ನಮ್ಮಲ್ಲಿ ಓದಿರುವ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಅತ್ಯಮೂಲ್ಯ ಮಾನವ ಸಂಪನ್ಮೂಲವಾಗಿ ತಮ್ಮದೇ ಆದ ಕೊಡುಗೆ ನೀಡಿದ್ದು, ಇಡೀ ವಿಶ್ವ ಇದಕ್ಕೆ ಸಾಕ್ಷಿಯಾಗಿದೆ. ನಮ್ಮ ಜ್ಞಾನದ ಭಂಡಾರ ಇಡೀ ವಿಶ್ವವನ್ನೇ ಆಕರ್ಷಿಸುತ್ತಿದೆ. ಜಗತ್ತಿನ ಬಹುತೇಕ ವಿಶ್ವ ವಿದ್ಯಾಲಯಗಳಲ್ಲಿ ನಮ್ಮ ವಿದ್ಯಾರ್ಥಿಗಳು ಓದಿ ಅನೇಕ ಸಾಧನೆ ಮಾಡಿದ್ದಾರೆ" ಎಂದರು.

"ನಮ್ಮಲ್ಲಿ ಅಮೂಲ್ಯ ಮಾನವ ಸಂಪನ್ಮೂಲಗಳಿವೆ. ಹೀಗಾಗಿ ಜಗತ್ತು ಭಾರತವನ್ನು ಕರ್ನಾಟಕ ಮೂಲಕ ನೋಡುತ್ತಿದೆ. ಇದೇ ಕಾರಣಕ್ಕೆ ನಮ್ಮ ಹಿರಿಯರು, ಐಐಟಿ, ಐಐಎಂ, ರಾಷ್ಟ್ರೀಯ ಕಾನೂನು ಕಾಲೇಜು, ಇಸ್ರೋ ಸೇರಿದಂತೆ ಹೆಚ್ ಎಎಲ್ ಹಾಗೂ ಇತರೆ ಪ್ರಮುಖ ಸಂಸ್ಥೆಗಳನ್ನು ಇಲ್ಲೇ ಆರಂಭಿಸಿದ್ದಾರೆ. ಇವುಗಳನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಮಕ್ಕಳು ತಮ್ಮ ವಿದ್ಯಾಭ್ಯಾಸ ಮಾಡಬೇಕಾಗುತ್ತದೆ" ಎಂದು ಸಲಹೆ ನೀಡಿದರು.

ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು

"ನಾವು ಕೃತಕಬುದ್ಧಿಮತ್ತೆ ಯುಗಕ್ಕೆ ಹೋಗುತ್ತಿದ್ದು, ಇದಕ್ಕೆ ಪೂರಕವಾಗಿ ವಿದ್ಯಾಭ್ಯಾಸ ಮಾಡಬೇಕು. ಮುಂದಿನ ದಿನಗಳಲ್ಲಿ ನಮ್ಮ ಶಿಕ್ಷಣ ನೀತಿಯನ್ನು ತಿಳಿಸಲಾಗುವುದು. ಈ ವರ್ಷ ನಿಮಗೆ ಶುಭವಾಗಲಿ, ಯಶಸ್ಸು ಸಿಗಲಿ. ಸರ್ಕಾರಿ ಶಾಲಾ ಮಕ್ಕಳು ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು. ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದಾರೆ. ಖಾಸಗಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಷ್ಟೇ ಪ್ರತಿಭೆ ನಿಮ್ಮಲ್ಲೂ ಇದೆ" ಎಂದು ತಿಳಿಸಿದರು.

ಹಿಜಾಬ್ ಗೆ ಪರ್ಯಾಯವಾಗಿ ಕೇಸರಿ ಶಾಲು ಕೊಡುವ ಕರೆ ಬಗ್ಗೆ ಕೇಳಿದಾಗ, "ಕೇಸರಿ ಶಾಲು ಬೇಕೇ, ರಾಷ್ಟ್ರ ಧ್ವಜದ ಶಾಲು ಬೇಕೇ ಎಂದು ಮುಂದೆ ಚರ್ಚೆ ಮಾಡೋಣ" ಎಂದು ತಿಳಿಸಿದರು.

ದೆಹಲಿ ಭೇಟಿ ಬಗ್ಗೆ ಕೇಳಿದಾಗ, "ನಾನು ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗುತ್ತಿದ್ದೇವೆ" ಎಂದು ತಿಳಿಸಿದರು.

ಗುಜರಾತಿನವರು ಮತ್ತೆ ನಮ್ಮ ಪಂದ್ಯ ಕಿತ್ತುಕೊಳ್ಳದಂತೆ ಕ್ರಮ ಕೈಗೊಳ್ಳುತ್ತೇವೆ

ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ವಿಜೇತವಾಗಿರುವ ಬಗ್ಗೆ ಕೇಳಿದಾಗ, "ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ನಾವು ಅದಕ್ಕೆ ಅನುಮತಿ ನೀಡಿದ್ದೆವು. ಆದರೆ ಗುಜರಾತಿನವರು ತಮ್ಮ ಪ್ರಭಾವ ಬಳಸಿ ನಮ್ಮಿಂದ ಪಂದ್ಯ ಕಿತ್ತುಕೊಂಡಿದ್ದಾರೆ. ಮುಂದೆ ಮತ್ತೆ ಈ ರೀತಿ ಕಿತ್ತುಕೊಳ್ಳದಂತೆ ಅಗತ್ಯ ಸಿದ್ಧತೆ ಮಾಡುತ್ತಿದ್ದೇವೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. ನಮ್ಮ ಕ್ರೀಡಾಪ್ರೇಮಿಗಳಿಗೆ ಅನ್ಯಾಯ ಆಗಿರಬಹುದು. ನಮ್ಮ ರಾಜ್ಯ ಹೆಸರಿನಲ್ಲಿ ಪ್ರತಿನಿಧಿಸುವ ತಂಡ ಉತ್ತಮವಾಗಿ ಆಡಿ ಗೆದ್ದಿದ್ದಾರೆ. ನಮ್ಮೆಲ್ಲರಿಗೂ ಹೆಮ್ಮೆ ತಂದಿದ್ದಾರೆ. ಕರ್ನಾಟಕ ರಾಜ್ಯದ ಜನರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ" ಎಂದು ತಿಳಿಸಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X