Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿನ ಬೀದಿ ವ್ಯಾಪಾರಿಗಳಿಗೆ...

ಬೆಂಗಳೂರಿನ ಬೀದಿ ವ್ಯಾಪಾರಿಗಳಿಗೆ ಶೀಘ್ರದಲ್ಲಿಯೇ ವಾಹನ ವಿತರಣೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ2 July 2026 9:07 PM IST
share
ಬೆಂಗಳೂರಿನ ಬೀದಿ ವ್ಯಾಪಾರಿಗಳಿಗೆ ಶೀಘ್ರದಲ್ಲಿಯೇ ವಾಹನ ವಿತರಣೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಶೀಘ್ರದಲ್ಲಿಯೇ ವಾಹನ ವಿತರಣೆ ಮಾಡಲಾಗುವುದು. ಈ ಸಂಬಂಧ ಯೋಜನೆಯೊಂದನ್ನು ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೋರ್ಟ್ ಆದೇಶ ಅನುಸಾರ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಎಲ್ಲ ಪಕ್ಷದ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ಆದರೆ, ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲ ಆಗುವ ರೀತಿಯಲ್ಲಿ ವಾಹನ ವಿತರಿಸಲು ನಾವು ಮುಂದಾಗಿದ್ದೇವೆ ಎಂದರು.

ಬೀದಿಬದಿ ವ್ಯಾಪಾರಿಗಳಿಗೆ ವಾಹನ ವಿತರಿಸಲು ನಾವು ಮುಂದಾಗಿದ್ದೇವೆ. ಇದಕ್ಕಾಗಿ 37 ಸಾವಿರ ಜನ ನೋಂದಣಿ ಮಾಡಿಸಿಕೊಂಡಿದ್ದಾರೆ. ಸುಮಾರು 60 ಸಾವಿರ ಜನ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ಮಾಡಿದ್ದೇವೆ. ವಾಹನ ವಿತರಣೆ ಯೋಜನೆ ಶೀಘ್ರವೇ ಜಾರಿಗೆ ತರಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗೆ ಮುಖ್ಯರಸ್ತೆ ಬದಲಿಗೆ ಬೇರೆ ಸ್ಥಳಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ನಾಗರಿಕರಿಂದ ನಮ್ಮ ಮೇಲೆ ಹೆಚ್ಚಿನ ಒತ್ತಡವಿತ್ತು. ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಎಲ್ಲ ಶಾಸಕರು ಸರ್ವಾನುಮತದಿಂದ ಕೈಗೊಂಡಿರುವ ತೀರ್ಮಾನ ಇದಾಗಿದೆ ಎಂದು ಅವರು ತಿಳಿಸಿದರು.

ಸಾರಿಗೆ ಪ್ರಯಾಣ ದರ ಪರಿಶೀಲಿಸಿ ತೀರ್ಮಾನ: ‘ಸಾರಿಗೆ ಪ್ರಯಾಣದ ದರ ವಿಚಾರದಲ್ಲಿ ಅಧಿಕಾರಿಗಳು ದೊಡ್ಡ ಆತಂಕ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿದ್ದು, ಅವರ ಪ್ರಸ್ತಾವನೆ ಏನಿದೆ ಸಲ್ಲಿಕೆ ಮಾಡಿ ಎಂದು ಹೇಳಿದ್ದೇವೆ. ತಾಂತ್ರಿಕವಾಗಿ ಸಾರಿಗೆ ಸಂಸ್ಥೆಯವರಿಗೆ ಎಷ್ಟು ನಷ್ಟವಾಗುತ್ತಿದೆ ಎಂದು ಪರಿಶೀಲನೆ ಮಾಡಿದ ಬಳಿಕ ತೀರ್ಮಾನ ಮಾಡುತ್ತೇವೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X