Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಲ್ಲಿಕಾರ್ಜುನ ಖರ್ಗೆ ರ್ಯಾಲಿ ಮಾಡಿದ...

ಮಲ್ಲಿಕಾರ್ಜುನ ಖರ್ಗೆ ರ್ಯಾಲಿ ಮಾಡಿದ ಸ್ಥಳ ‘ಶುದ್ಧೀಕರಣ’: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಂಡನೆ

ವಾರ್ತಾಭಾರತಿವಾರ್ತಾಭಾರತಿ13 Aug 2026 11:07 PM IST
share
ಮಲ್ಲಿಕಾರ್ಜುನ ಖರ್ಗೆ ರ್ಯಾಲಿ ಮಾಡಿದ ಸ್ಥಳ ‘ಶುದ್ಧೀಕರಣ’: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಂಡನೆ

ಬೆಂಗಳೂರು : ‘ಉತ್ತರಾಖಂಡದ ಹಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗ ಸಭೆ ನಡೆದ ಸ್ಥಳ ‘ಶುದ್ಧೀಕರಣ’ ಮಾಡಿದ್ದು, ಇದೊಂದು ನಾಚಿಕೆಗೇಡಿನ ಕೃತ್ಯ ಹಾಗೂ ಸಂವಿಧಾನಕ್ಕೆ ಎಸಗಿದ ಅಪಮಾನ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಈ ಕುರಿತು ಹೇಳಿಕೆ ನೀಡಿರುವ ಶಿವಕುಮಾರ್, ‘ಈ ಘಟನೆಯು ಕೇವಲ ಒಬ್ಬ ವ್ಯಕ್ತಿಗೆ ಮಾಡಿದ ಅಪಮಾನವಲ್ಲ, ಬದಲಿಗೆ ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳ ಮೇಲಿನ ನೇರ ದಾಳಿ. ಅಲ್ಲದೆ, ಆಧುನಿಕ ಭಾರತದಲ್ಲಿ ಜಾತಿ ತಾರತಮ್ಯದ ಅಸಹ್ಯಕರ ನೆನಪು ಎಂದು ಕಿಡಿಕಾರಿದ್ದಾರೆ.

‘ಖರ್ಗೆಯವರು ದೇಶದ ಅತ್ಯಂತ ಗೌರವಾನ್ವಿತ ಜನನಾಯಕರು ಮತ್ತು ಜೀವಮಾನವಿಡೀ ಜನಸೇವೆ ಮಾಡಿದವರು. ದಲಿತ ನಾಯಕರೊಬ್ಬರು ಭಾಷಣ ಮಾಡಿದರು ಎಂಬ ಕಾರಣಕ್ಕೆ ಸಾರ್ವಜನಿಕ ಸ್ಥಳವೊಂದಕ್ಕೆ ‘ಶುದ್ಧೀಕರಣ’ ಆಗಬೇಕು ಎಂದು ಬಿಂಬಿಸಿರುವುದು ಜಾತಿ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

‘ಇದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರವಲ್ಲ, ಸಮಾನತೆ, ಸಹೋದರತೆ ಮತ್ತು ಮಾನವ ಘನತೆಯನ್ನು ನಂಬುವ ಪ್ರತಿಯೊಬ್ಬ ಭಾರತೀಯನಿಗೂ ಎಸಗಿದ ಅಪಮಾನ. ಇಂತಹ ಆಚರಣೆಗಳನ್ನು ಸಮರ್ಥಿಸಲು ಯತ್ನಿಸುವವರು ಡಾ.ಅಂಬೇಡ್ಕರ್ ಮತ್ತು ಸಂವಿಧಾನ ಶಿಲ್ಪಿಗಳು ಕಲ್ಪಿಸಿಕೊಂಡ ಗಣರಾಜ್ಯದ ತಡಿಪಾಯದ ಮೇಲೆಯೇ ದಾಳಿ ಮಾಡುತ್ತಿದ್ದಾರೆ’ ಎಂದು ಅವರು ಕಿಡಿಕಾರಿದ್ದಾರೆ.

‘ಸಾರ್ವಜನಿಕ ಜೀವನದಲ್ಲಿ ಇಂತಹ ತಾರತಮ್ಯಗಳು ಮರುಕಳಿಸುವುದನ್ನು ಭಾರತ ಸಹಿಸುವುದಿಲ್ಲ ಮತ್ತು ಸಹಿಸಬಾರದು. ಜಾತ್ಯತೀತವಾಗಿ ಪ್ರತಿಯೊಬ್ಬ ಪ್ರಜೆಯೂ ಸಮಾನ ಘನತೆ ಮತ್ತು ಗೌರವಕ್ಕೆ ಅರ್ಹನಾಗಿದ್ದಾನೆ. ಇಂತಹ ಕೃತ್ಯಗಳನ್ನು ಸಾಮಾನ್ಯಗೊಳಿಸುವ ಅಥವಾ ಸಮರ್ಥಿಸುವ ಯಾವುದೇ ಪ್ರಯತ್ನವನ್ನು ಸ್ಪಷ್ಟವಾಗಿ ತಿರಸ್ಕರಿಸಬೇಕು ಎಂದು ಶಿವಕುಮಾರ್ ತಿಳಿಸಿದ್ದಾರೆ.

‘ಈ ವಿಚಾರದಲ್ಲಿ ನಾನು ಕಾಂಗ್ರೆಸ್ ಅಧ್ಯಕ್ಷರ ಜೊತೆ ದೃಢವಾಗಿ ನಿಲ್ಲುತ್ತೇನೆ. ಈ ಘಟನೆಯ ವಿರುದ್ಧ ಪ್ರಜಾಪ್ರಭುತ್ವವಾದಿ ಶಕ್ತಿಗಳು ಧ್ವನಿ ಎತ್ತಬೇಕು. ಇಂತಹ ತಾರತಮ್ಯದ ಮುಂದೆ ಮೌನವಾಗಿರುವುದು ನಮ್ಮ ಸಮಾಜವನ್ನು ವಿಭಜಿಸಲು ಯತ್ನಿಸುವವರಿಗೆ ಮತ್ತಷ್ಟು ಉತ್ತೇಜನ ನೀಡುತ್ತದೆ. ಸಮಾನತೆ, ನ್ಯಾಯ ಮತ್ತು ಎಲ್ಲರ ಘನತೆಯ ಸಾಂವಿಧಾನಿಕ ಭರವಸೆಯ ಮೇಲೆ ರೂಪುಗೊಂಡ ಭಾರತಕ್ಕೆ ನಮ್ಮ ಅಚಲ ಬದ್ಧತೆಯನ್ನು ಪುನರುಚ್ಚರಿಸಬೇಕಾಗಿದೆ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X