Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ...

ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲದು : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Aug 2026 2:57 PM IST
share
ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲದು : ಡಿ.ಕೆ.ಶಿವಕುಮಾರ್
ಹನೂರು ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿದ ತಮಿಳುನಾಡಿನ ಪನ್ನೀರ್‌ ಸೇಲ್ವಂ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಹನೂರು ಶೂಟೌಟ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ತಮಿಳುನಾಡು ಮಾಜಿ ಸಿಎಂ ಪನ್ನೀರ್‌ ಸೇಲ್ವಂ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲಿ ನಾನು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸಮಸ್ಯೆ ಇರುತ್ತದೆ. ಅದನ್ನು ಅವರೂ ತಿಳಿದುಕೊಳ್ಳಬೇಕು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ನಮಗೆ ತಿಳಿದಿದೆ. ಅವರು ತಮ್ಮ ಕೆಲಸವನ್ನು ಮಾಡಲಿ. ನಾವು ನಮ್ಮ ಕೆಲಸವನ್ನು ಮಾಡುತ್ತೇವೆ. ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ನಾನು ಬಯಸುವುದಿಲ್ಲ. ನಮ್ಮ ರಾಜ್ಯಕ್ಕಿರುವ ಪವಿತ್ರತೆಯನ್ನು ನಾವು ಕಾಪಾಡಿಕೊಳ್ಳಬೇಕು, ರಕ್ಷಿಸಬೇಕು" ಎಂದು ತಿಳಿಸಿದರು.

ಪ್ರಕರಣದ ತನಿಖೆ ಆಗಬೇಕು ಎಂದು ತಮಿಳುನಾಡು ಸಿಎಂ ವಿಜಯ್ ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, "ನಾನು ಇದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಇದು ಸಾಮಾನ್ಯ ಚರ್ಚೆ. ಅವರು ತಮ್ಮ ಕೆಲಸವನ್ನು ಮಾಡಬೇಕು, ನಾವು ನಮ್ಮ ಕೆಲಸವನ್ನು ಮಾಡಬೇಕು" ಎಂದು ತಿಳಿಸಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X