Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾರವಾರ ವೈದ್ಯಕೀಯ ಕಾಲೇಜಿಗೆ ರಾಮಕೃಷ್ಣ...

ಕಾರವಾರ ವೈದ್ಯಕೀಯ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು ನಾಮಕರಣ : ಡಿ.ಕೆ.ಶಿವಕುಮಾರ್ ಘೋಷಣೆ

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ29 Aug 2026 9:33 PM IST
share
ಕಾರವಾರ ವೈದ್ಯಕೀಯ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು ನಾಮಕರಣ : ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ಕಾಲೇಜಿಗೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಹೆಸರನ್ನು ನಾಮಕಾರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ರಾಷ್ಟ್ರೀಯ ನವ ನಿರ್ಮಾಣ ವೇದಿಕೆ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ.ಅದರಂತೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ಕಾಲೇಜಿಗೆ ಹೆಗಡೆ ಅವರ ಹೆಸರಿಡಲಾಗುವುದು. ಜತೆಗೆ, ಗ್ರಾಮೀಣ ಆಡಳಿತಕ್ಕೆ ಹೆಗಡೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಅವರ ಜನ್ಮದಿನದಂದು ‘ರಾಮಕೃಷ್ಣ ಹೆಗಡೆ ಶ್ರೇಷ್ಠ ಪಂಚಾಯಿತಿ ಪ್ರಶಸ್ತಿ’ ನೀಡುವ ಕಾರ್ಯಕ್ರಮ ರೂಪಿಸುವಂತೆ ಇಲಾಖೆ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಮತ್ತು ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಯೊಂದಕ್ಕೆ ರಾಮಕೃಷ್ಣ ಹೆಗಡೆ ಅವರ ಹೆಸರಿಡಲು ತೀರ್ಮಾನಿಸಿರುವುದಾಗಿಯೂ ಪ್ರಕಟಿಸಿದರು.

ರಾಮಕೃಷ್ಣ ಹೆಗಡೆ ಅವರು ಕೇವಲ ಅಧಿಕಾರ ನಡೆಸಿದ ನಾಯಕನಲ್ಲ. ಪಂಚಾಯತಿಯಿಂದ ಸಂಸತ್ತಿನವರೆಗೆ ಹೊಸ ನಾಯಕತ್ವವನ್ನು ಸೃಷ್ಟಿಸಿದ ನಾಯಕ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕರ್ನಾಟಕದ ಪ್ರಯೋಗಗಳು ದೇಶಕ್ಕೆ ಮಾದರಿಯಾಗಿದ್ದವು. ನಂತರ ರಾಜೀವ್ ಗಾಂಧಿ ಸರಕಾರದ ಅವಧಿಯಲ್ಲಿ 73 ಮತ್ತು 74ನೆ ಸಂವಿಧಾನ ತಿದ್ದುಪಡಿಗಳಿಗೆ ಈ ಚಿಂತನೆ ಪ್ರೇರಣೆಯಾಯಿತು. ಒಟ್ಟಿನಲ್ಲಿ ಹೆಗಡೆ ಅವರು ಜಾತಿ ಆಧಾರಿತ ರಾಜಕಾರಣಕ್ಕೆ ಸೀಮಿತವಾಗದೆ ಮೌಲ್ಯಾಧಾರಿತ ರಾಜಕಾರಣ ಮತ್ತು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದ್ದರು. ಅವರ ನಾಯಕತ್ವವನ್ನು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಜನರು ಒಪ್ಪಿಕೊಂಡಿದ್ದರು. ಅಧಿಕಾರದಲ್ಲಿದ್ದಾಗಲೂ ಜನಸೇವೆ ಮತ್ತು ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಕೆಲಸ ಮಾಡಿದ್ದರು ಎಂದು ಅವರು ಹೇಳಿದರು.

ರಾಮಕೃಷ್ಣ ಹೆಗಡೆ ಅವರ ಬದುಕು ಒಂದು ನಿಘಂಟು ಇದ್ದಂತೆ. ಅವರ ಆಚಾರ-ವಿಚಾರಗಳನ್ನು ನೋಡಿಕೊಂಡು ನಾವು ಅನೇಕ ವಿಚಾರಗಳನ್ನು ಕಲಿಯಬಹುದು. ಅಧಿಕಾರವನ್ನು ಶಕ್ತಿಯ ಸಂಕೇತವಾಗಿ ಅಲ್ಲ, ಜನಸೇವೆಗೆ ದೊರೆತ ಅವಕಾಶವಾಗಿ ನೋಡಬೇಕು ಎಂಬ ಸಂದೇಶವನ್ನು ಅವರು ನೀಡಿದ್ದರು ಎಂದ ಅವರು, ಕರ್ನಾಟಕದಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣದ ವಿಸ್ತರಣೆಗೆ ಹೆಗಡೆ ಅವರ ನೀತಿಗಳು ಸಹಕಾರಿಯಾದವು. ಇಂದು ಕರ್ನಾಟಕದಲ್ಲಿ ವರ್ಷಕ್ಕೆ ಸುಮಾರು 13,940 ವೈದ್ಯರು ಹಾಗೂ 1.25 ಲಕ್ಷಕ್ಕೂ ಹೆಚ್ಚು ಇಂಜಿನಿಯರ್‍ಗಳು ರೂಪುಗೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ರಾಮಕೃಷ್ಣ ಹೆಗಡೆ ಅವರ ರಾಜಕೀಯ ಪ್ರಭಾವವನ್ನು ನೆನಪಿಸಿಕೊಂಡರು. ಅವರಿಂದ ರೂಪುಗೊಂಡ ನಾಯಕರು ಇಂದು ವಿವಿಧ ರಾಜಕೀಯ ಪಕ್ಷಗಳಲ್ಲಿ ಕಾಣಸಿಗುತ್ತಾರೆ. ಸಿದ್ದರಾಮಯ್ಯ, ಆರ್.ವಿ. ದೇಶಪಾಂಡೆ, ಬಸವರಾಜ ರಾಯರೆಡ್ಡಿ, ಬಿ.ಎಲ್.ಶಂಕರ್ ಸೇರಿದಂತೆ ಅನೇಕ ನಾಯಕರು ಹೆಗಡೆ ಅವರ ರಾಜಕೀಯ ಶಾಲೆಯೊಂದಿಗೆ ಬೆಳೆದವರು.ಹೆಗಡೆ ಅವರು ಹಿಂಬಾಲಕರನ್ನು ಮಾತ್ರ ಸೃಷ್ಟಿಸಲಿಲ್ಲ. ನಾಯಕರನ್ನು ಸೃಷ್ಟಿಸಿದರು. ಇಲ್ಲಿ ಕುಳಿತಿರುವ ನೂರಾರು ನಾಯಕರು ಅದಕ್ಕೆ ಸಾಕ್ಷಿ ಎಂದು ಅವರು ನುಡಿದರು.

ನಮ್ಮ ಸರಕಾರ ರಾಮಕೃಷ್ಣ ಹೆಗಡೆ ಅವರ ಆಚಾರ–ವಿಚಾರ, ಮೌಲ್ಯಾಧಾರಿತ ರಾಜಕಾರಣ, ಪಂಚಾಯತ್ ರಾಜ್ ಮತ್ತು ಅಭಿವೃದ್ಧಿ ಚಿಂತನೆಗಳನ್ನು ಮುಂದುವರಿಸಿಕೊಂಡು ಹೋಗಲಿದೆ ಎಂದೂ ಡಿ.ಕೆ.ಶಿವಕುಮಾರ್ ಹೇಳಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X