Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ದರ...

ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರವೂ ಕಡಿಮೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ4 Nov 2026 7:07 PM IST
share
ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರವೂ ಕಡಿಮೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಿದರೆ ಅದಕ್ಕೆ ಅನುಗುಣವಾಗಿ ರಾಜ್ಯದಲ್ಲೂ ಬಸ್ ಪ್ರಯಾಣ ದರ ಕಡಿಮೆ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಮೂರು ವಾರ ಅಥವಾ ಹತ್ತು ದಿನಗಳ ಮುಂಚಿತವಾಗಿಯೇ ಡೀಸೆಲ್ ಖರೀದಿಸಲು ಹಣವಿಲ್ಲದ ಸ್ಥಿತಿ ಎದುರಾಗಿತ್ತು. ಸರಕಾರವೇ ಹಣ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ‘ಶಕ್ತಿ ಯೋಜನೆ’ಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ ಸಾರಿಗೆ ಸಂಸ್ಥೆಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬಿದ್ದಿದೆ. ಹೀಗಾಗಿ ಒಂದೊಂದು ಹಂತದಲ್ಲಿ ಎರಡು, ಮೂರು ರೂಪಾಯಿ ದರ ಹೆಚ್ಚಿಸಿರಬಹುದು ಎಂದು ಹೇಳಿದರು.

ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಾದಾಗ ಪ್ರತಿಪಕ್ಷಗಳು ಏಕೆ ಮಾತನಾಡಲಿಲ್ಲ?. ಅಡುಗೆ ಅನಿಲದ ಬೆಲೆ ಏರಿಕೆಯಾದಾಗ ಏಕೆ ಧ್ವನಿ ಎತ್ತಲಿಲ್ಲ?. ರಸಗೊಬ್ಬರ, ಕೀಟನಾಶಕ, ಕಬ್ಬಿಣ, ಸಿಮೆಂಟ್ ಹಾಗೂ ಔಷಧಗಳ ಬೆಲೆ ಹೆಚ್ಚಳದ ಬಗ್ಗೆ ಏಕೆ ಅವರು ಯಾರು ಪ್ರತಿಭಟಿಸಲಿಲ್ಲ?. ರೈತರು ಬಳಸುವ ಕೃಷಿ ಪರಿಕರಗಳ ಬೆಲೆ ಎಷ್ಟು ಹೆಚ್ಚಾಗಿದೆ ಎಂಬುದರ ಬಗ್ಗೆ ವಿಪಕ್ಷಗಳಿಗೆ ಕಾಳಜಿ ಇಲ್ಲವೇ? ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.

ರಾಜ್ಯದ ಬರಗಾಲ ಸಂದರ್ಭದಲ್ಲಿ ರೈತರು ಎಷ್ಟು ಕಷ್ಟಪಡುತ್ತಿದ್ದಾರೆ ಎಂಬ ಅರಿವು ನನಗಿದೆ. ಅವರ ಬದುಕಿನ ಸಂಕಷ್ಟವೂ ನಮಗೆ ಗೊತ್ತಿದೆ. ಅದೇ ರೀತಿ ಸಾರಿಗೆ ಸಂಸ್ಥೆಗಳೂ ಉಳಿಯಬೇಕು. ಅವುಗಳಿಗೂ ಆರ್ಥಿಕವಾಗಿ ಚೇತರಿಸಿಕೊಳ್ಳಲು ಅವಕಾಶ ನೀಡಬೇಕು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿ, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ಸೆಸ್ ಹಾಗೂ ತೆರಿಗೆ ಹೊರೆ ಕಡಿಮೆ ಮಾಡಿಸಲಿ. ಕೇಂದ್ರ ಸರಕಾರ ಇಂಧನ ಬೆಲೆ ಇಳಿಸಿದರೆ ರಾಜ್ಯ ಸರಕಾರವೂ ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಿದೆ ಎಂದು ಅವರು ವಿಪಕ್ಷಗಳಿಗೆ ಸವಾಲು ಹಾಕಿದರು.

ಕೆಲವು ಕಡೆ ಹಾಲಿನ ದರ ಲೀಟರ್ ಗೆ 8ರೂ. ಬದಲಿಗೆ 12 ರೂ.ಹೆಚ್ಚಳವಾಗಿದೆ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಹಾಲಿನ ದರದಲ್ಲಿ ವ್ಯತ್ಯಾಸವಾಗಲು ಅದರ ಗುಣಮಟ್ಟ ಹಾಗೂ ಕೊಬ್ಬಿನ ಅಂಶ ಕಾರಣ. ಎಲ್ಲ ಹಾಲೂ ಒಂದೇ ರೀತಿಯಲ್ಲಿರುವುದಿಲ್ಲ. ಸಾಮಾನ್ಯ ಹಾಲು, ನಾಟಿ ಹಸುವಿನ ಹಾಲು ಹಾಗೂ ಎಮ್ಮೆ ಹಾಲು ಬೇರೆ ಬೇರೆಯಾಗಿರುತ್ತವೆ. ಅವುಗಳ ಕೊಬ್ಬಿನ ಅಂಶವೂ (ಫ್ಯಾಟ್) ವಿಭಿನ್ನವಾಗಿರುತ್ತದೆ. ಈ ವ್ಯತ್ಯಾಸಗಳನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X