ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ಯಾರ್ಯಾರು?

ಬೆಂಗಳೂರು : ಕರ್ನಾಟಕ ರಾಜಕಾರಣದಲ್ಲಿ ಬಹುನಿರೀಕ್ಷಿತ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ "ಟ್ರಬಲ್ ಶೂಟರ್" ಖ್ಯಾತಿಯ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು (ಜೂನ್ 3) ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಿ.ಕೆ.ಶಿವಕುಮಾರ್ ಪ್ರಮಾಣವಚನ ಬೋಧಿಸಿದರು.
ಬಳಿಕ ಉಪಮುಖ್ಯಮಂತ್ರಿಯಾಗಿ ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
Next Story




