ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್ ಆಯ್ಕೆ

ಡಿ.ಕೆ.ಶಿವಕುಮಾರ್(PTI)
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾಗಿದ್ದಾರೆ. ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಲಾಗಿದೆ.
ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಜಿ.ಪರಮೇಶ್ವರ ಅನುಮೋದಿಸಿದ್ದಾರೆ. ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ಎಲ್ಲಾ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಹಾಗೂ ಲೋಕಸಭಾದ ಬಹುತೇಕ ಸದಸ್ಯರು ಭಾಗಿಯಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಭೆಯಲ್ಲಿ ಉಪಸ್ಥಿತರಿದ್ದಾರೆ.
Next Story




