ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರಾಜೀನಾಮೆ

ಡಿ.ಕೆ.ಶಿವಕುಮಾರ್
ಬೆಂಗಳೂರು : ರಾಜ್ಯದ ಜನತೆ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಬಹು ನಿರೀಕ್ಷೆಯಂತೆ ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಇದೀಗ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸತತ ಆರು ವರ್ಷಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಪಕ್ಷ ಸಂಘಟನೆ ಮಾಡಿದ್ದರು. ಅಲ್ಲದೇ 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರ ಪ್ರತಿಫಲ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.
Next Story




