Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಿ.ಕೆ.ಶಿವಕುಮಾರ್‌ಗೆ ಸಿದ್ದರಾಮಯ್ಯ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ30 May 2026 9:17 PM IST
share
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಿ.ಕೆ.ಶಿವಕುಮಾರ್‌ಗೆ ಸಿದ್ದರಾಮಯ್ಯ ಅಭಿನಂದನೆ
‘ರಾಜ್ಯದ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆಯುವ ಹೊಣೆ ನಿಮ್ಮದು’

ಬೆಂಗಳೂರು : ‘ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಸಂವಿಧಾನದ ಗೌರವವನ್ನು ಕಾಪಾಡಲು ಎರಡನೆ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ. ನಿಮಗೆ ಸದಾ ಯಶಸ್ಸು ಸಿಗಲಿ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.

ಶನಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು. ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರೀಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕಾಗಿ ಹಾರೈಸುವೆ ಎಂದು ತಿಳಿಸಿದ್ದಾರೆ.

ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ದ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ದಿ ಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ದಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮಥ್ರ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು ಎಂದು ಅವರು ತಿಳಿಸಿದ್ದಾರೆ.

ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿರುವ ಸ್ಥಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸೈದ್ಧಾಂತಿಕವಾಗಿ ಎಂದೂ ಸೋಲಬಾರದು: ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೆ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು.

ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ… pic.twitter.com/Hlep9qJaGF

— Siddaramaiah (@siddaramaiah) May 30, 2026

Tags

DK ShivakumarSiddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X