ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ
ಬೆಂಗಳೂರು : ಕರ್ನಾಟಕ ರಾಜಕಾರಣದಲ್ಲಿ ಬಹುನಿರೀಕ್ಷಿತ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ "ಟ್ರಬಲ್ ಶೂಟರ್" ಖ್ಯಾತಿಯ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು (ಜೂನ್ 3) ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಸಂವಿಧಾನ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧೀಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆಶಿ ಪ್ರಮಾಣ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.
Next Story




